Sign In

By signing in or creating an account, you agree with Associated Broadcasting Company's Terms & Conditions and Privacy Policy.

Jothe Jotheyali: ‘ಜೊತೆ ಜೊತೆಯಲಿ’ ಸಾಗಿದ್ದ ಆರ್ಯವರ್ಧನ್ ಪಾತ್ರಕ್ಕೆ ಟ್ವಿಸ್ಟ್..?

Jothe Jotheyali Serial: ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ.

Jothe Jotheyali: 'ಜೊತೆ ಜೊತೆಯಲಿ' ಸಾಗಿದ್ದ ಆರ್ಯವರ್ಧನ್ ಪಾತ್ರಕ್ಕೆ ಟ್ವಿಸ್ಟ್..?
jothe jotheyali serial
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2022 | 11:54 AM

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ (Jothe Jotheyali) ತಂಡದಿಂದ ನಾಯಕ ನಟ ಅನಿರುದ್ಧ್ (Aniruddha Jatkar) ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್​ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.

VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್