ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಸವಿ ಮಾದಪ್ಪ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. ‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು
ಸವಿ ಮಾದಪ್ಪ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 30, 2021 | 1:38 PM

ಇತ್ತೀಚೆಗೆ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚುತ್ತಿದೆ. ಬಾಲಿವುಡ್​ ಖ್ಯಾತ ನಟ ಸುಶಾಂತ್​ ಸಿಂಗ್​ ಸೇರಿ ಸಾಕಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಅವರು ಈಗ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಸವಿ ಮಾದಪ್ಪ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಾಯ್‌ಫ್ರೆಂಡ್‌ ವಿವೇಕ್ ಜತೆ ವಾಸವಿದ್ದರು. ಸವಿ ಮಾದಪ್ಪ ಊಟ ತರುವಂತೆ ಬಾಯ್‌ಫ್ರೆಂಡ್‌ಗೆ ಹೇಳಿದ್ದರು. ವಿವೇಕ್ ಊಟ ತರೋಕೆ ಹೊರಗೆ ಹೋಗಿದ್ದರು. ಈ ವೇಳೆ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸವಿ ಮಾದಪ್ಪ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. ‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದರು. ಇತ್ತೀಚೆಗೆ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿಕೊಂಡಿದ್ದರು. ‘ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಫೋಕಸ್​ ಮಾಡಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಅವರು ಬರೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

2019ರಲ್ಲಿ ಚೌಕಟ್ಟು ಸಿನಿಮಾ ಸೆಟ್ಟೇರಿತ್ತು. ಇದು ಅವರ ಮೊದಲ ಸಿನಿಮಾ. ಈ ಬಗ್ಗೆ ಮಾತನಾಡಿದ್ದ ಅವರು, ‘ನಟಿಯಾಗಿ ನನಗೆ ಹಲವು ಕನಸುಗಳಿವೆ. ಸಿಕ್ಕ ಪಾತ್ರಗಳನ್ನು ಮಾಡುವುದಕ್ಕಿಂತ ಸವಾಲಿನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದು ಇಷ್ಟ. ಚೌಕಟ್ಟು ಸಿನಿಮಾದಲ್ಲಿನನಗೆ ಅಂಥದ್ದೊಂದು ಪಾತ್ರ ಸಿಕ್ಕಿದೆ. ಇಂತಹ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ  ನೀಡುತ್ತಿರುವುದು ಸಹಜವಾಗಿಯೇ ಖುಷಿ ಆಗಿದೆ. ನನಗೆ ಸಿನಿಮಾಟೋಗ್ರಾಫಿಯಲ್ಲೂ ಕಾಣಿಸಿಕೊಳ್ಳುವ ಕನಸಿದೆ’ ಎಂದಿದ್ದರು ಅವರು. ಆದರೆ, ಅದೆಲ್ಲವೂ ಈಗ ನಾಶವಾಗಿದೆ.

ಇದನ್ನೂ ಓದಿ: ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

Published On - 1:28 pm, Thu, 30 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ