ಅಪಘಾತದಲ್ಲಿ ಸಾವಿಗೀಡಾದ ಕಿರುತೆರೆ ನಟಿ ಪವಿತ್ರ ಜಯರಾಂ

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಇಂದು (ಮೇ 11) ಸಾವನ್ನಪ್ಪಿದ್ದಾರೆ. ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು.

ಅಪಘಾತದಲ್ಲಿ ಸಾವಿಗೀಡಾದ ಕಿರುತೆರೆ ನಟಿ ಪವಿತ್ರ ಜಯರಾಂ
Follow us
|

Updated on: May 12, 2024 | 12:41 PM

ಕರ್ನಾಟಕ ಮೂಲದ ನಟಿ ಪವಿತ್ರಾ ಜಯರಾಂ (Pavitra Jayaram) ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು. ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ ಅದಾದ ಬಳಿಕ ಹಲವು ಧಾರಾವಾಹಿಗಳಲ್ಲಿ (Serial) ನಟಿಸಿದ್ದರು. ತೆಲುಗಿನ ಜನಪ್ರಿಯ ಧಾರಾವಾಹಿಯಲ್ಲಿಯೂ ಸಹ ಪವಿತ್ರಾ ನಟಿಸುತ್ತಿದ್ದರು. ಪವಿತ್ರಾ ಜಯರಂ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.

ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪವಿತ್ರಾ ಜಯರಾಂ ಜೊತೆಗೆ ಕಾರಿನಲ್ಲಿ ಅವರ ಕುಟುಂಬಕ್ಕೆ ಸಂಬಂಧಿಸಿದವರು ಇದ್ದರು ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ.

ಇದನ್ನೂ ಓದಿ:ಪ್ರೀ-ವೆಡ್ಡಿಂಗ್ ಫೋಟೋ ಶೂಟ್​​ನಲ್ಲಿ ಮಿಂಚಿದ ಕನ್ನಡದ ಕಿರುತೆರೆ ನಟಿ

ಮೂಲತಃ ಕನ್ನಡಿಗರಾದ ಪವಿತ್ರ, ತೆಲುಗಿನ ತ್ರಿನಯನಿ ಧಾರವಾಹಿಯ ಮೂಲಕ ತೆಲುಗು ರಾಜ್ಯಗಳಲ್ಲಿ ಬಹಳ ಜನಪ್ರಿಯರಾಗಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ‘ರೋಬೋ ಫ್ಯಾಮಿಲಿ’, ‘ಜೋಕಾಲಿ’, ‘ನೀಲಿ’, ‘ರಾಧಾರಮಣ’ ಇನ್ನೂ ಕೆಲವು ಧಾರಾವಾಹಿಗಳಲ್ಲಿ ಪವಿತ್ರಾ ನಟಿಸಿ ಜನಪ್ರಿಯರಾಗಿದ್ದರು. ಈಗ ತೆಲುಗಿನ ಜನಪ್ರಿಯ ತ್ರಿನಯನಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ