AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನದ ಸುದ್ದಿ ಖಚಿತ

ಕಿರುತೆರೆಯ ಜನಪ್ರಿಯ ನಟಿ ಐಶ್ವರ್ಯಾ ಪಿಸ್ಸೆ ಅವರು ತಮ್ಮ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಅಂತ್ಯ ಹಾಡಿದ್ದಾರೆ. ಪತಿ ಹರಿ ವಿನಯ್ ಅವರಿಂದ ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಇವರು, ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿರುವುದಾಗಿ ತಿಳಿಸಿದ್ದಾರೆ. ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನದ ಸುದ್ದಿ ಖಚಿತ
Aishwarya Pisse, Hari Vinay
ಮಾಲತೇಶ ಜಗ್ಗೀನ್
| Edited By: |

Updated on: Oct 12, 2026 | 10:56 PM

Share

ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ಐಶ್ವರ್ಯಾ ಪಿಸ್ಸೆ ಅವರು ವೈಯಕ್ತಿಕ ಜೀವನದ ಕುರಿತು ದೊಡ್ಡ ಸುದ್ದಿಯೊಂದನ್ನು ಹೊರಹಾಕಿದ್ದಾರೆ. ‘ಅನುರೂಪ’, ‘ಪುನರ್ ವಿವಾಹ’, ‘ಗಿರಿಜಾ ಕಲ್ಯಾಣ’, ‘ಸರ್ವಮಂಗಳ ಮಾಂಗಲ್ಯೇ’ ಹಾಗೂ ಸದ್ಯ ಸನ್ ಉದಯ ವಾಹಿನಿಯ ‘ಮಾಂಗಲ್ಯ’ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಲ್ಲಿ ನಟಿಸಿರುವ ಐಶ್ವರ್ಯ ಪಿಸ್ಸೆ ಅವರು ತಮ್ಮ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಅಂತ್ಯ ಹಾಡಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.

ಐಶ್ವರ್ಯಾ ಪಿಸ್ಸೆ ಹಾಗೂ ಮೈಸೂರು ಮೂಲದ ಹರಿ ವಿನಯ್ ಅವರ ವಿವಾಹವು 2019ರಲ್ಲಿ ಹಿರಿಯರ ಸಮ್ಮುಖದಲ್ಲಿ ಸರಳವಾಗಿ ನಡೆದಿತ್ತು. ಮದುವೆಯಾಗಿ ಕೆಲವು ವರ್ಷಗಳ ಕಾಲ ಅನ್ಯೂನ್ಯವಾಗಿದ್ದ ಈ ಜೋಡಿಯ ಸಂಸಾರದಲ್ಲಿ ಕೆಲಕಾಲದಿಂದ ಭಿನ್ನಾಭಿಪ್ರಾಯ ಮೂಡಿತ್ತು. ಈ ಹಿಂದೆ ಕೂಡ ಇವರ ವೈಯಕ್ತಿಕ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನುಮಾನ ಮೂಡಿದ್ದವು.

ಸದ್ಯ ಈ ಎಲ್ಲಾ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ಐಶ್ವರ್ಯಾ, ತಾವು ಪತಿಯಿಂದ ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದಾಗಿ ತಿಳಿಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿದ್ದು, ತಾವು ದಾಂಪತ್ಯ ಜೀವನದಿಂದ ಅಧಿಕೃತವಾಗಿ ದೂರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?

ತಮ್ಮ ಪೋಸ್ಟ್‌ನಲ್ಲಿ ಅಭಿಮಾನಿಗಳಿಗೆ ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿರುವ ನಟಿ, ‘ಇದು ನಮ್ಮಿಬ್ಬರ ವೈಯಕ್ತಿಕ ನಿರ್ಧಾರವಾಗಿದ್ದು, ನಮ್ಮ ಖಾಸಗಿತನ ಮತ್ತು ನೆಮ್ಮದಿಯನ್ನು ಎಲ್ಲರೂ ಗೌರವಿಸಬೇಕು’ ಎಂದು ಕೋರಿದ್ದಾರೆ. ಅಲ್ಲದೆ, ವೀಕ್ಷಣೆ ಹಾಗೂ ಲೈಕ್ಸ್‌ಗಳಿಗಾಗಿ ಆಧಾರರಹಿತ ಸುಳ್ಳು ಸುದ್ದಿಗಳನ್ನು ಅಥವಾ ಹಳೆಯ ದೃಶ್ಯಗಳನ್ನು ಬಳಸಿ ತಪ್ಪು ಸಂದೇಶಗಳನ್ನು ಹಬ್ಬಿಸಬಾರದು ಎಂದು ಎಚ್ಚರಿಸಿದ್ದು, ಇಂತಹ ಕೃತ್ಯಗಳು ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಟಿಯ ಈ ಅಚ್ಚರಿಯ ನಿರ್ಧಾರಕ್ಕೆ ಅವರ ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಧೈರ್ಯ ತುಂಬುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ