AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಶ್ರೀಮಂತರನ್ನು ಪರಿಚಯಿಸಿಕೊಂಡು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾಳಾನ್ನು ಬಂಧಿಸಲಾಗಿದೆ. ತಾನು ಕಷ್ಟದಲ್ಲಿ ಇರುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ವನಿತಾ ವಿರುದ್ಧ ಮೂರು ಠಾಣೆಗಳಲ್ಲಿ ದೂರುಗಳು ದಾಖಲಾಗಿತ್ತು. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ವನಿತಾಳನ್ನು ಬಂಧಿಸಿದ್ದಾರೆ.

ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಬಂಧನ
Vanitha
ಮದನ್​ ಕುಮಾರ್​
|

Updated on: Jun 22, 2026 | 5:33 PM

Share

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾಳನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವನಿತಾ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ (TV Actress) ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಹಣವಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ದ್ರೋಹದ ಜಾಲ ಹೆಣೆಯುತ್ತಿದ್ದಳು ಎಂಬ ಆರೋಪ ಇದೆ.

ಪರಿಚಯಸ್ಥರ ಬಳಿ ತಾನು ತೀವ್ರ ಕಷ್ಟದಲ್ಲಿದ್ದೇನೆ ಎಂದು ನಂಬಿಸುತ್ತಿದ್ದ ನಟಿ ವನಿತಾ, ‘ನನ್ನ ಚಿನ್ನದ ಆಭರಣಗಳನ್ನು ಅಡವಿಟ್ಟಿದ್ದೇನೆ, ಅದನ್ನು ಬಿಡಿಸಿಕೊಳ್ಳಲು ತುರ್ತಾಗಿ ಹಣ ಬೇಕಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಸಾಲದ ಹಣವನ್ನು ವಾಪಸ್ ನೀಡುತ್ತೇನೆ’ ಎಂದು ನಂಬಿಸಿ ಹಣ ಪಡೆಯುತ್ತಿದ್ದಳು. ಅತ್ಯಂತ ಚಾಲಾಕಿಯಾಗಿದ್ದ ಈಕೆ, ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಜಾಗಗಳನ್ನು ಹುಡುಕಿ ಅಲ್ಲಿಗೆ ಹಣ ನೀಡುವವರನ್ನು ಕರೆಸಿಕೊಂಡು ನಗದು ಪಡೆದು ಪರಾರಿಯಾಗುತ್ತಿದ್ದಳು.

ಒಮ್ಮೆ ಕೈಗೆ ಹಣ ಸಿಗುತ್ತಿದ್ದಂತೆ ನಟಿ ವನಿತಾ ತನ್ನ ಅಸಲಿ ರೂಪ ತೋರಿಸುತ್ತಿದ್ದಳು. ಹಣ ಕೊಟ್ಟವರು ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಕರೆ ಸ್ವೀಕರಿಸುತ್ತಿಲ್ಲವೆಂದು ಮೆಸೇಜ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ವಂಚಿಸುತ್ತಿದ್ದಳು ಎನ್ನಲಾಗಿದೆ.

ಇದೇ ರೀತಿ ಈ ನಟಿಯನ್ನು ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಈಕೆಯ ವಂಚನೆಯ ಜಾಲ ಕೇವಲ ಒಂದು ಠಾಣೆಗೆ ಸೀಮಿತವಾಗಿರಲಿಲ್ಲ. ಗೋವಿಂದರಾಜನಗರ ಹಾಗೂ ಜ್ಞಾನಭಾರತಿ ಪೊಲೀಸ್ ಠಾಣೆಗಳಲ್ಲೂ ಈಕೆಯ ವಿರುದ್ಧ ಈ ಹಿಂದೆ ದೂರುಗಳು ದಾಖಲಾಗಿದ್ದವು.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ

ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ತನಿಖೆ ನಡೆಸಿ, ವಂಚಕಿ ಕಿರುತೆರೆ ನಟಿ ವನಿತಾಳನ್ನು ಜೈಲಿಗಟ್ಟಿದ್ದಾರೆ. ಈಕೆಯ ಜಾಲಕ್ಕೆ ಬಿದ್ದಿರುವ ಇನ್ನೂ ಹಲವು ಸಂತ್ರಸ್ತರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ವರದಿ: ವಿಕಾಸ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್