AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada TV Serial TRP: ‘ಬಿಗ್ ಬಾಸ್’ ಹಾಗೂ ಧಾರಾವಾಹಿ ಟಿಆರ್​ಪಿಯಲ್ಲಿ ಏರಿಳಿತ; ಇಲ್ಲಿದೆ ವಿವರ

‘ಧಾರಾವಾಹಿ’ಗಳ ಟಿಆರ್​ಪಿಯಲ್ಲಿ ಏರಿಳಿತ ಕಾಮನ್. ಆದರೆ ಬಿಗ್ ಬಾಸ್ ಟಿಆರ್​ಪಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈ ಸಂದರ್ಭದಲ್ಲಿ ಪ್ರಸಾರ ಕಾಣುವ ಧಾರಾವಾಹಿಗಳಿಗೆ ಇದರಿಂದ ತೊಂದರೆ ಆಗಿದೆ.

Kannada TV Serial TRP: ‘ಬಿಗ್ ಬಾಸ್’ ಹಾಗೂ ಧಾರಾವಾಹಿ ಟಿಆರ್​ಪಿಯಲ್ಲಿ ಏರಿಳಿತ; ಇಲ್ಲಿದೆ ವಿವರ
ಸೀತಾ ರಾಮ-ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 30, 2023 | 2:38 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) 8ನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಕಳೆದ ಸೀಸನ್​ಗಳಿಗಿಂತ ಈ ಸೀಸನ್ ಒಳ್ಳೆಯ ರೀತಿಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ವೀಕ್ಷಕರ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಬಿಗ್ ಬಾಸ್ ಹಾಗೂ ಧಾರಾವಾಹಿಗಳ ಟಿಆರ್​ಪಿ ಬಂದಿದೆ. ಬಿಗ್ ಬಾಸ್​ ಟಿಆರ್​ಪಿಯಲ್ಲಿ ಏರಿಕೆ ಆಗಿದೆ. ಧಾರಾವಾಹಿಗಳ ಟಿಆರ್​ಪಿ ವಿಚಾರದಲ್ಲಿ ಏರಿಳಿತ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್’ ಶನಿವಾರದ ಎಪಿಸೋಡ್ ಎಲ್ಲರ ಗಮನ ಸೆಳೆಯುತ್ತದೆ. ಸುದೀಪ್ ಅವರು ಪಂಚಾಯ್ತಿ ಮಾಡುತ್ತಾರೆ. ಯಾರು ಸರಿ, ಯಾರು ತಪ್ಪು ಎಂದು ಹೇಳುತ್ತಾರೆ. ಶನಿವಾರದ ಎಪಿಸೋಡ್​ಗೆ 8.4 ಟಿವಿಆರ್​ ಸಿಕ್ಕಿದೆ. ಭಾನುವಾರದ ಎಪಿಸೋಡ್​ಗೆ 7.7 ಟಿಆರ್​ಪಿ ಸಿಕ್ಕಿದೆ. ಸೋಮವಾರದಿಂದ ಶುಕ್ರವಾರದ ಎಪಿಸೋಡ್​ಗೆ 7.4 ಟಿಆರ್​ಪಿ ಸಿಕ್ಕಿದೆ. ಕಲರ್ಸ್ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್​ಪಿ ಪಡೆದ ಶೋ ಎಂಬ ಖ್ಯಾತಿ ಬಿಗ್​ ಬಾಸ್​ಗೆ ಸಿಕ್ಕಿದೆ.

ಇದನ್ನೂ ಓದಿ: ‘ಈ ರೀತಿಯ ವ್ಯಕ್ತಿಗಳು ಗುಡ್ ಇನ್ ಬೆಡ್​​’; ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ವರ್ಷಗಳಿಂದ ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಕಾಪಾಡಕೊಂಡಿದೆ. ಎರಡನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದ್ದರೆ, ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ.

ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಹಾಗೂ ‘ಸೀತಾ ರಾಮ’ ಧಾರಾವಾಹಿ ಇದೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಗಳ ಸ್ಥಾನದಲ್ಲಿ ಸಾಕಷ್ಟು ಅದಲು ಬದಲಾಗಿದೆ.

ಇದನ್ನೂ ಓದಿ: ಅವಳಿ ಮಕ್ಕಳು ಹೊಟ್ಟೆಯಲ್ಲಿ ಇರುವಾಗಲೇ ಅಪಘಾತ; ಕರಾಳ ಘಟನೆ ನೆನೆದ ಬಿಗ್ ಬಾಸ್ ವಿನ್ನರ್

ಬಿಗ್ ಬಾಸ್​ನಿಂದ ‘ಸೀತಾ ರಾಮ’ ಧಾರಾವಾಹಿ ವೀಕ್ಷಕರನ್ನು ಕಳೆದುಕೊಳ್ಳುತ್ತಿದೆ. ಈ ಧಾರಾವಾಹಿಯ ಪ್ರಸಾರ ಸಮಯ, ಬಿಗ್ ಬಾಸ್ ಸಮಯ ಒಂದೇ ಆಗಿದೆ. ಇದರಿಂದ ಧಾರಾವಾಹಿಯ ವೀಕ್ಷಕರ ಸಂಖ್ಯೆಯಲ್ಲಿ ಇಳಿಕೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:08 pm, Thu, 30 November 23

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ