ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿಗಳ ಮಧ್ಯೆ ಇದೆ ಭರ್ಜರಿ ಸ್ಪರ್ಧೆ; ಇಲ್ಲಿದೆ ಟಾಪ್​ ಐದು ಸೀರಿಯಲ್

|

Updated on: Mar 14, 2024 | 3:05 PM

ಕನ್ನಡ ಧಾರಾವಾಹಿಗಳ 10ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಬಾರಿಯೂ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಲರ್ಸ್ ಕನ್ನಡದ ಯಾವ ಧಾರಾವಾಹಿಗಳೂ ಟಾಪ್ ಐದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಟಾಪ್ ಐದು ಧಾರಾವಾಹಿಗಳ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿಗಳ ಮಧ್ಯೆ ಇದೆ ಭರ್ಜರಿ ಸ್ಪರ್ಧೆ; ಇಲ್ಲಿದೆ ಟಾಪ್​ ಐದು ಸೀರಿಯಲ್
ಸೀತಾ ರಾಮ-ಅಮೃತಧಾರೆ
Follow us on

ಧಾರಾವಾಹಿಗಳ ಟಿಆರ್​ಪಿ ಬಗ್ಗೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಯಾವ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತದೆ, ಯಾವ ಧಾರಾವಾಹಿ ಟಾಪ್​ ಐದರಲ್ಲಿ ಇದೆ ಎಂಬಿತ್ಯಾದಿ ವಿಚಾರ ತಿಳಿದುಕೊಳ್ಳಲು ಫ್ಯಾನ್ಸ್ ಕಾತುರರಾಗಿರುತ್ತಾರೆ. ಈಗ ಕನ್ನಡ ಧಾರಾವಾಹಿಗಳ 10ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಬಾರಿಯೂ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಲರ್ಸ್ ಕನ್ನಡದ ಯಾವ ಧಾರಾವಾಹಿಗಳೂ ಟಾಪ್ ಐದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಟಾಪ್ ಐದು ಧಾರಾವಾಹಿಗಳ ಬಗ್ಗೆ ಇಲ್ಲಿದೆ ವಿವರ.

‘ಲಕ್ಷ್ಮಿ ನಿವಾಸ’

ಪಕ್ಕಾ ಮಧ್ಯಮ ವರ್ಗದವರ ಕಥೆಯನ್ನು ‘ಲಕ್ಷ್ಮಿ ನಿವಾಸ ಧಾರಾವಾಹಿ ಹೊಂದಿದೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ ತೋರಿಸಲಾಗಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜನ ಮೆಚ್ಚುಗೆ ಪಡೆದಿದೆ. ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿರುವ ಈ ಧಾರಾವಾಹಿ ಹಳ್ಳಿ ಸೊಗಡಿನಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಉಮಾಶ್ರೀ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಇದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಜೊತೆ ಟಫ್ ಫೈಟ್ ನೀಡುತ್ತಿದೆ. ಮೂರನೇ ಸ್ಥಾನದಲ್ಲಿ ಇರುವ ಈ ಧಾರಾವಾಹಿ ಸಖತ್ ಕಾಂಪಿಟೇಷನ್ ನೀಡುತ್ತಿದೆ. ಈ ಧಾರಾವಾಹಿ ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಬಾರಿ ಧಾರಾವಾಹಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಈ ಧಾರಾವಾಹಿಯೂ ವೀಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿರೋ ಟಾಪ್​ ಐದು ಕನ್ನಡದ ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಐದನೇ ಸ್ಥಾನ

ಐದನೇ ಸ್ಥಾನದಲ್ಲಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಹಾಗೂ ಗಗನ್ ಚಿನ್ನಪ್ಪ ಮತ್ತು ವೈಷ್ಣವಿ ಗೌಡ ನಟನೆಯ ‘ಸೀತಾ ರಾಮ’ ಇದೆ. ಎರಡೂ ಧಾರಾವಾಹಿಗಳ ಮಧ್ಯೆ ಸಮಬಲದ ಸ್ಪರ್ಧೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ