ಕಿರುತೆರೆ ಲೋಕದಲ್ಲಿ ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ. ಎಲ್ಲಾ ವಾಹಿನಿಯವರು ಹೊಸಹೊಸ ಧಾರಾವಾಹಿಗಳನ್ನು ಪರಿಚಯಿಸುತ್ತಲೇ ಇದ್ದಾರೆ. ಹೊಸಹೊಸ ಕಥೆಯೊಂದಿಗೆ ವೀಕ್ಷಕರ ಎದುರು ಬರುತ್ತಿದ್ದಾರೆ. ಕೆಲವು ಧಾರಾವಾಹಿಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತವೆ. ಇನ್ನೂ ಕೆಲವು ಪ್ರೇಕ್ಷಕರಿಗೆ ಇಷ್ಟ ಆಗುವುದಿಲ್ಲ. ಇದೆಲ್ಲವನ್ನೂ ಟಿಆರ್ಪಿ ಮೂಲಕ ಅಳೆಯಲಾಗುತ್ತದೆ. ಈ ವಾರದ ಟಿಆರ್ಪಿ ಲಿಸ್ಟ್ ಹೊರಬಿದ್ದಿದೆ. ಆ ಪೈಕಿ ಜೀ ಕನ್ನಡ ವಾಹಿನಿಯ ‘ಗಟ್ಟಿಮೇಳ’ ಧಾರಾವಾಹಿ (Gattimela Serial) ಮೊದಲ ಸ್ಥಾನದಲ್ಲಿದೆ. ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಗಟ್ಟಿಮೇಳ’ ಧಾರಾವಾಹಿ ಎಲ್ಲರ ಗಮನ ಸೆಳೆದಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ರಕ್ಷಿತ್ ವೇದಾಂತ್ ಆಗಿ ಗಮನ ಸೆಳೆದರೆ ನಿಶಾ ಅಮೂಲ್ಯ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಈ ವಾರದ ಟಿಆರ್ಪಿ ರೇಸ್ನಲ್ಲಿ ಮೊದಲಿದೆ. ರಾತ್ರಿ 8 ಗಂಟೆಗೆ ಈ ಧಾರಾವಾಹಿ ಪ್ರಸಾರ ಕಾಣುತ್ತದೆ.
‘ಪುಟ್ಟಕ್ಕನ ಮಕ್ಕಳು’ ಹಾಗೂ ಲಕ್ಷ್ಮೀ ಬಾರಮ್ಮ ಎರಡನೇ ಸ್ಥಾನದಲ್ಲಿವೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಮೂಲಕ ಉಮಾಶ್ರೀ ಅವರು ಗಮನ ಸೆಳೆಯುತ್ತಿದ್ದಾರೆ. ಪುಟ್ಟಕ್ಕ ಆಗಿ ಉಮಾಶ್ರೀ ಎಲ್ಲರ ಮನ ಗೆದ್ದಿದ್ದಾರೆ. ಈ ಧಾರಾವಾಹಿ ಟಿಆರ್ಪಿ ಲಿಸ್ಟ್ನಲ್ಲಿ ಎರಡನೇ ಸ್ಥಾನದಲ್ಲಿದೆ. ರಾತ್ರಿ 7.30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣುತ್ತದೆ. ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಕೂಡ ಜನ ಮನ್ನಣೆ ಪಡೆದಿದೆ.
ಸುಧಾರಾಣಿ ಅವರು ಹಿರಿತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡವರು. ಅವರು ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಗಮನ ಸೆಳೆಯುತ್ತಿದ್ದಾರೆ. ತುಳಸಿ ಹೆಸರಿನ ಪಾತ್ರವನ್ನು ಅವರು ಮಾಡಿದ್ದಾರೆ. ಮಾಧವ್ ಆಗಿ ಅಜಿತ್ ಹಂದೆ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ.
‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ.
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಧಾರಾವಾಹಿ ಸಾಗರ್ ಬಿಳಿ ಗೌಡ ಹಾಗೂ ಗೌತಮಿ ಜಾಧವ್ ಮುಖ್ಯಭೂಮಿಕೆ ಮಾಡಿದ್ದಾರೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:51 pm, Thu, 27 April 23