ಟಿಆರ್​ಪಿ ಲಿಸ್ಟ್: ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ

|

Updated on: Aug 31, 2023 | 2:20 PM

34ನೇ ವಾರದ ಟಿಆರ್​ಪಿ ಪಟ್ಟಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ನಗರ ಭಾಗದಲ್ಲಿ ‘ಸೀತಾ ರಾಮ’ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಟಾಪ್​ 5ರ ಧಾರಾವಾಹಿಗಳು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಟಿಆರ್​ಪಿ ಲಿಸ್ಟ್: ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ
ಸೀತಾ ರಾಮ
Follow us on

ಧಾರಾವಾಹಿಗಳು ಯಾವ ಸ್ಥಾನದಲ್ಲಿವೆ ಎಂಬುದನ್ನು ತಿಳಿದುಕೊಳ್ಳೋಕೆ ಟಿಆರ್​ಪಿ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಟಿಆರ್​ಪಿ ಓಟದಲ್ಲಿ ಪ್ರತಿ ವಾರ ಏರಿಳಿತ ಸಾಮಾನ್ಯ. 34ನೇ ವಾರದ ಟಿಆರ್​ಪಿ ಪಟ್ಟಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (Puttakkana Makkalu Serial) ಮೊದಲ ಸ್ಥಾನದಲ್ಲಿದೆ. ನಗರ ಭಾಗದಲ್ಲಿ ‘ಸೀತಾ ರಾಮ’ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಟಾಪ್​ 5ರ ಧಾರಾವಾಹಿಗಳು ಯಾವವು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿ ಕಳೆದ ಹಲವು ತಿಂಗಳಿಂದ ಟಾಪ್​ನಲ್ಲಿದೆ. ಈ ಧಾರಾವಾಹಿಯ ಕಥೆ ಹಾಗೂ ನಿರೂಪಣೆ ಜನರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿಗೆ ಸ್ಪರ್ಧೆಯೇ ಇಲ್ಲದಂತೆ ಆಗಿದೆ.

ಸೀತಾ ರಾಮ

ಸೀತಾ ರಾಮ ಧಾರಾವಾಹಿ ಸಾಕಷ್ಟು ಗಮನ ಸೆಳೆಯುತ್ತಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಧಾರಾವಾಹಿ ಎರಡನೇ ಸ್ಥಾನ ಅಲಂಕರಿಸಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಗಟ್ಟಿಮೇಳ

ಗಟ್ಟಿಮೇಳ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದೆ. ಆದರೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಮುಂದೆ ಸಾಗುತ್ತಿದೆ. ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿಗಳ ನಗರ ಹಾಗೂ ಗ್ರಾಮೀಣ ಭಾಗದ ಟಿಆರ್​ಪಿ ಒಂದೇ ಇದ್ದರೂ ನಗರದ ಟಿಆರ್​ಪಿ ಆಧಾರಾದಲ್ಲಿ ‘ಗಟ್ಟಿಮೇಳ’ಕ್ಕೆ ಮೂರನೇ ಸ್ಥಾನ ನೀಡಬಹುದು.

ಸತ್ಯ

‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವ ಧಾರಾವಾಹಿ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀರಿಯಲ್ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಕಿರುತೆರೆ ಇತಿಹಾಸದಲ್ಲಿ ‘ಅಮೃತಧಾರೆ’ ಹೊಸ ದಾಖಲೆ; ಧಾರಾವಾಹಿ ಹಾಡುಗಳಿಗೊಂದು ಜೂಕ್ ​ಬಾಕ್ಸ್

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಸದ್ಯ ಮದುವೆ ವಿಚಾರ ಹೈಲೈಟ್ ಆಗುತ್ತಿದೆ. ಮಹಿಮಾ ಹಾಗೂ ಜೀವನ್ ಮತ್ತು ಭೂಮಿಕಾ ಹಾಗೂ ಗೌತಮ್ ಮದುವೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಧಾರಾವಾಹಿ ಟಿಆರ್​ಪಿ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ