AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ ಒನ್; ಹೊಸ ಧಾರಾವಾಹಿಗಳೆಲ್ಲ ಹಿಂದಕ್ಕೆ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸಂಜನಾ ಬುರ್ಲಿ, ಉಮಾಶ್ರೀ ಮೊದಲಾದವರು ನಟಿಸಿದ್ದಾರೆ. ಪಕ್ಕಾ ಹಳ್ಳಿಯ ಸೊಗಡಿನ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಕಾರಣಕ್ಕೆ ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿದೆ.

ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ ಒನ್; ಹೊಸ ಧಾರಾವಾಹಿಗಳೆಲ್ಲ ಹಿಂದಕ್ಕೆ
ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ ಒನ್; ಹೊಸ ಧಾರಾವಾಹಿಗಳೆಲ್ಲ ಹಿಂದಕ್ಕೆ
ರಾಜೇಶ್ ದುಗ್ಗುಮನೆ
|

Updated on: May 24, 2024 | 7:26 AM

Share

ಟಿಆರ್​ಪಿ ವಿಚಾರದಲ್ಲಿ ಯಾವ ಧಾರಾವಾಹಿ ಮೊದಲಿರುತ್ತದೆ, ಯಾವ ಧಾರಾವಾಹಿ ಕೊನೆಯಲ್ಲಿ ಇರುತ್ತವೆ ಎಂದು ಮೊದಲೇ ಊಹಿಸೋದು ಕಷ್ಟ. ಇತರ ವಾಹಿನಿಗಳ ಕಾರ್ಯಕ್ರಮ, ಐಪಿಎಲ್ ಮ್ಯಾಚ್ (IPL Match) ಹೀಗೆ ಹಲವು ವಿಚಾರಗಳು ಟಿಆರ್​ಪಿ ಮೇಲೆ ಪ್ರಭಾವ ಬಿರುತ್ತವೆ. ಈಗ 20ನೇ ವಾರದ ಟಿಆರ್​ಪಿ ಹೊರಬಿದ್ದಿದೆ. ಇದರಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಂಬರ್ ಒನ್ ಪಡೆದುಕೊಂಡಿದೆ. ಹೊಸ ಧಾರಾವಾಹಿಗಳನ್ನು ಹಿಂದಿಕ್ಕಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸಂಜನಾ ಬುರ್ಲಿ, ಉಮಾಶ್ರೀ ಮೊದಲಾದವರು ನಟಿಸಿದ್ದಾರೆ. ಪಕ್ಕಾ ಹಳ್ಳಿಯ ಸೊಗಡಿನ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿ ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಕಾರಣಕ್ಕೆ ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿದೆ.

ಎರಡನೇ ಸ್ಥಾನದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಇದೆ. ‘ಪು ಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕೋಕೆ ಈ ಧಾರಾವಾಹಿಗೆ ಸಾಧ್ಯವಾಗುತ್ತಿಲ್ಲ. ಮೂರನೇ ಸ್ಥಾನದಲ್ಲಿ ಹೊಸ ಧಾರಾವಾಹಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಗೌಡ, ರಾಮನ ಪಾತ್ರದಲ್ಲಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಇಬ್ಬರ ಮಧ್ಯೆ ಪ್ರೀತಿ ಮೂಡಿದೆ. ನಿಶ್ಚಿತಾರ್ಥದ ಸಿದ್ಧತೆ ಕೂಡ ಆಗುತ್ತಿದೆ. ಈ ಕಾರಣಕ್ಕೆ ಈ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಗುತ್ತಿದೆ.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್​ಪಿಯಲ್ಲಿ ಸಖತ್ ಏರಿಕೆ

ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿ ಇದೆ. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ.  ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. 20ನೇ ವಾರದ ಟಿಆರ್​ಪಿಯಲ್ಲಿ ಟಾಪ್​ ಐದರಲ್ಲಿ ಇರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದ ಧಾರಾವಾಹಿಗಳು ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ