ಮತ್ತೆ ಮುಗ್ಗರಿಸಿದ ಹೊಸ ಧಾರಾವಾಹಿಗಳು; ಟಿಆರ್ಪಿ ರೇಸ್ನಲ್ಲಿ ಮುಂದಿರೋರು ಯಾರು?
‘ಪುಟ್ಟಕ್ಕನ ಮಕ್ಕಳು’ ಕೆಲವು ವರ್ಷಗಳಿಂದ ಪ್ರಸಾರ ಕಾಣುತ್ತಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಟಿಆರ್ಪಿ ರೇಸ್ನಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.
ಕನ್ನಡದಲ್ಲಿ ಹೊಸ ಹೊಸ ಧಾರಾವಾಹಿಗಳ ಎಂಟ್ರಿ ಆಗುತ್ತಲೇ ಇರುತ್ತವೆ. ಹಳೆಯ ಧಾರಾವಾಹಿಗಳ ಜೊತೆ ಇವು ಸ್ಪರ್ಧೆಗೆ ಇಳಿದಿವೆ. ಈಗ 23ನೇ ವಾರದ ಟಿಆರ್ಪಿ (Serial TRP) ಲಿಸ್ಟ್ ಸಿಕ್ಕಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಧಾರಾವಾಹಿಗಳು ಹೊಸ ಧಾರಾವಾಹಿಗಳನ್ನು ಹಿಂದಿಕ್ಕಿವೆ. ಎಂದಿನಂತೆ ಜೀ ಕನ್ನಡದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ.
‘ಪುಟ್ಟಕ್ಕನ ಮಕ್ಕಳು’ ಕೆಲವು ವರ್ಷಗಳಿಂದ ಪ್ರಸಾರ ಕಾಣುತ್ತಿದೆ. ಈಗಾಗಲೇ ಧಾರಾವಾಹಿ 675 ಎಪಿಸೋಡ್ಗಳನ್ನು ಪೂರ್ಣಗೊಳಿಸಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಟಿಆರ್ಪಿ ರೇಸ್ನಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.
ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆಗಿದೆ. ಈ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇವೆರಡೂ ಧಾರಾವಾಹಿಗಳು ಇತ್ತೀಚೆಗೆ ಪ್ರಸಾರ ಆರಂಭಿಸಿವೆ.
ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ರಾಮ್ ಹಾಗೂ ಸೀತಾಳ ಎಂಗೇಜ್ಮೆಂಟ್ ಆಗಿದೆ. ಇವರ ಮಧ್ಯೆ ಪ್ರೀತಿ ಮೂಡಿದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಟಾಪ್ ಐದರಲ್ಲಿ ಇರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.
ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್ಪಿಯಲ್ಲಿ ಸಖತ್ ಏರಿಕೆ
ಹೊಸ ಧಾರಾವಾಹಿ ‘ನಿನಗಾಗಿ’ ಟಿಆರ್ಪಿ ಕಡಿಮೆ ಆಗಿದೆ. ಈ ಧಾರಾವಾಹಿ 22ನೇ ವಾರದಲ್ಲಿ ಆರನೇ ಸ್ಥಾನ ಪಡೆದಿತ್ತು. 23ನೇ ವಾರದ ಧಾರಾವಾಹಿಯಲ್ಲಿ ಒಂಭತ್ತನೇ ಸ್ಥಾನಕ್ಕೆ ಇಳಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.