AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದಿವೆ.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on: Jun 27, 2024 | 1:05 PM

Share

25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಎರಡನೇ ಸ್ಥಾನ ಪಡೆದಿದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಕಳೆದ ವಾರಗಳ ಕಾಲ ಮೊದಲ ಸ್ಥಾನದಲ್ಲಿ ಇತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇದು ಹೊಸ ಧಾರಾವಾಹಿ. ಈ ಧಾರಾವಾಹಿಗೆ ಭರ್ಜರಿ ಟಿಆಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಟಿಆಆರ್​ಪಿಯಲ್ಲಿ ಮೂರನೇ ಸ್ಥಾನದಲ್ಲಿ ಪಡೆದಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ಇದನ್ನೂ ಓದಿ: ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಐದನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮಿ ಬಾರಮ್ಮ’ ಅನ್ನೋದು ವಿಶೇಷ. ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್