ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

Kannada Serials TRP: ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ
ಕನ್ನಡ ಧಾರಾವಾಹಿ ಟಿಆರ್​ಪಿ
Follow us
ರಾಜೇಶ್ ದುಗ್ಗುಮನೆ
|

Updated on:Aug 24, 2023 | 1:06 PM

ಟಿಆರ್​ಪಿ ರೇಸ್​ನಲ್ಲಿ ಧಾರಾವಾಹಿಗಳ ಸ್ಥಾನಪಲ್ಲಟ ಆಗೋದು ಸಾಮಾನ್ಯ. ವಾರದಿಂದ ವಾರಕ್ಕೆ ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾಗುತ್ತಲೇ ಇರುತ್ತದೆ. ಆದರೆ, ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನ ಪಡೆದುಕೊಳ್ಳುತ್ತಿದೆ. ವಿಶೇಷ ಎಂಬಂತೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಗೀತಾ’ ಧಾರಾವಾಹಿಯ (Geetha Serials) ಟಿಆರ್​ಪಿ ಏಕಾಏಕಿ ಏರಿಕೆ ಕಂಡಿದೆ. ಹಾಗಾದರೆ ಈ ವಾರ ಯಾವ ಧಾರಾವಾಹಿ ಯಾವ ಸ್ಥಾನವನ್ನು ಕಾಪಾಡಿಕೊಂಡಿದೆ? ಇತ್ತೀಚೆಗೆ ಆರಂಭ ಆದ ಧಾರಾವಾಹಿಗಳಿಗೆ ಎಷ್ಟನೇ ಸ್ಥಾನ ಸಿಕ್ಕಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ 33ನೇ ವಾರದ ಟಿಆರ್​ಪಿ ಪಟ್ಟಿಯಲ್ಲಿದೆ ಮಾಹಿತಿ.

‘ಪುಟ್ಟಕ್ಕನ ಮಕ್ಕಳು’

ಉಮಾಶ್ರೀ ಅವರು ಹಿರಿತೆರೆಯಲ್ಲಿ ಮಿಂಚಿದವರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಸಂಜನಾ ಬುರುಳಿ ಮೊದಲಾದವರು ನಿರ್ವಹಿಸುತ್ತಿರುವ ಪಾತ್ರವೂ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಎರಡಂಕಿ ಟಿಆರ್​ಪಿ ಪಡೆದು ಮೊದಲ ಸ್ಥಾನ ಕಾಪಾಡಿಕೊಂಡಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಯನ್ನು ಬಹಳ ಅದ್ದೂರಿಯಾಗಿ ಕಟ್ಟಿಕೊಡಲಾಗುತ್ತಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ಇದಕ್ಕೆ ಸಿಹಿ (ರೀತು ಸಿಂಗ್) ಸೇತುವೆ ಆಗುತ್ತಿದ್ದಾಳೆ. ಅಶೋಕ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಕಾಮಿಡಿ ಪಂಚ್ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿ ಕಳೆದ ವಾರ ಎರಡನೇ ಸ್ಥಾನದಲ್ಲಿತ್ತು. ಅದನ್ನು ಉಳಿಸಿಕೊಂಡು ಮುಂದೆ ಸಾಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮುಖ್ಯಭೂಮಿಕೆ ನಿಭಾಯಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಹಾಗೂ ‘ಸೀತಾ ರಾಮ’ ಧಾರಾವಾಹಿ ಮಧ್ಯೆ ಟಫ್ ಕಾಂಪಿಟೇಷನ್ ಇದೆ. ‘ಗಟ್ಟಿಮೇಳ’ ಧಾರಾವಾಹಿ ಸಾವಿರ ಎಪಿಸೋಡ್ ದಾಟಿದರೂ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಕಥೆಯಲ್ಲಿ ಪ್ರಮುಖ ತಿರುವು ಸಿಕ್ಕಿರುವುದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಸುಧಾರಾಣಿ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಇದನ್ನೂ ಓದಿ: ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿ ಈ ವಾರ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲಿ ಈ ವಾರ ಮದುವೆ ಇದೆ. ಹೀಗಾಗಿ 34ನೇ ವಾರದಲ್ಲಿ ಟಿಆರ್​ಪಿ ಹೆಚ್ಚಬಹುದು.

ಉಳಿದ ಸ್ಥಾನಗಳು..

ಆರನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಏಳನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಈ ಬಾರಿ ‘ಗೀತಾ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಹೀಗಾಗಿ, ಈ ಧಾರಾವಾಹಿಗೆ ಎಂಟನೇ ಸ್ಥಾನ ಸಿಕ್ಕಿದೆ.

Published On - 1:04 pm, Thu, 24 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು