ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

Kannada TV Serial TRP: 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ
ಧಾರಾವಾಹಿ ಟಿಆರ್​ಪಿ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Aug 18, 2023 | 1:05 PM

ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇರುತ್ತವೆ. ಹೊಸ ಮಾದರಿಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರುವ ಪ್ರಯತ್ನ ನಿರಂತರವಾಗಿ ಆಗುತ್ತಲೇ ಇರುತ್ತದೆ. ಧಾರಾವಾಹಿಗಳ ಜನಪ್ರಿಯತೆ ಅಳೆಯೋಕೆ ಇರೋ ಮಾನದಂಡ ಟಿಆರ್​ಪಿ. ಒಳ್ಳೆಯ ಟಿಆರ್​ಪಿ (TRP) ಗಳಿಕೆಗೆ ಎಲ್ಲಾ ವಾಹಿನಿಗಳು ರೇಸ್​ಗೆ ಇಳಿದಿವೆ. ಧಾರಾವಾಹಿಗಳನ್ನು ಅದ್ದೂರಿಯಾಗಿ ಸಿದ್ಧಪಡಿಸಲಾಗುತ್ತಿದೆ. ಈಗ 32ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಜೀ ಕನ್ನಡದಲ್ಲಿ (Zee Kannada) ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಧಾರಾವಾಹಿಯ ಟಿಆರ್​ಪಿ ಕೊಂಚ ತಗ್ಗಿದೆ. ‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ, ಸಂಜನಾ ಬುರುಳಿ ಮೊದಲಾದವರು ನಟಿಸಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿ ಕಳೆದ ಕೆಲ ತಿಂಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಕೆಲವು ಪ್ರಮುಖ ತಿರುವುಗಳಲ್ಲಿ ಧಾರಾವಾಹಿಯ ಕಥೆ ಸಾಗಿದ್ದರಿಂದ ಈ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಸೀತಾ ರಾಮ

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ‘ಸೀತಾ ರಾಮ’ ಧಾರಾವಾಹಿ ಗಮನ ಸೆಳೆಯುತ್ತಿದೆ. ಕಾಮಿಡಿ ಹಾಗೂ ಅಮ್ಮ-ಮಗಳ ಎಮೋಷನ್ ವರ್ಕ್ ಆಗುತ್ತಿದೆ.

‘ಗಟ್ಟಿಮೇಳ’

ನಿಶಾ ರವಿಕೃಷ್ಣನ್, ರಕ್ಷಿತ್ ಗೌಡ ಮೊದಲಾದವರು ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸಾವಿರ ಎಪಿಸೋಡ್ ಮುಗಿಸಿರುವ ಈ ಧಾರಾವಾಹಿ ಇಷ್ಟು ದಿನ ಎರಡನೇ ಸ್ಥಾನದಲ್ಲಿ ಇತ್ತು. ಈಗ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಗೆ ದೊಡ್ಡ ವೀಕ್ಷಕರ ವರ್ಗ ಇದೆ.

ಇದನ್ನೂ ಓದಿ: ಹೊರಬಿತ್ತು ಧಾರಾವಾಹಿ ಟಿಆರ್​ಪಿ ಲಿಸ್ಟ್​; ‘ಗಟ್ಟಿಮೇಳ’-‘ಸೀತಾ ರಾಮ’ ಮಧ್ಯೆ ಭರ್ಜರಿ ಸ್ಪರ್ಧೆ

‘ಸತ್ಯ’

‘ಸತ್ಯ’ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಧಾರಾವಾಹಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಈ ಧಾರಾವಾಹಿ ಪ್ರಬಲ ಸ್ಪರ್ಧೆ ನೀಡುತ್ತಿದೆ.

ಅಮೃತಧಾರೆ- ಶ್ರೀರಸ್ತು ಶುಭಮಸ್ತು

ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಮದುವೆ ನಡೆಯುತ್ತಿದೆ. ಈ ಧಾರಾವಾಹಿ ಈ ಬಾರಿ ಐದನೇ ಸ್ಥಾನ ಅಲಂಕರಿಸಿದೆ. ಇದರ ಜೊತೆ ಸುಧಾರಾಣಿ ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿಯಲ್ಲೂ ಮದುವೆ ವಿಚಾರ ಹೈಲೈಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Fri, 18 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ