ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..

ಕೆಲವು ಧಾರಾವಾಹಿಗಳು ಆರಂಭದಲ್ಲಿ ಒಳ್ಳೆಯ ರೀತಿಯಲ್ಲಿ ಪ್ರಸಾರ ಕಂಡು ನಂತರದ ದಿನಗಳಲ್ಲಿ ನಿಧಾನ ಗತಿಯಲ್ಲಿ ಹೆಜ್ಜೆ ಹಾಕುತ್ತಿವೆ. ಈಗ 35ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಯಾವ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..
ಕನ್ನಡ ಸಿರಿಯಲ್ ಟಿಆರ್​ಪಿ
Follow us
|

Updated on: Sep 08, 2023 | 7:32 AM

ಕಿರುತೆರೆ ಲೋಕದಲ್ಲಿ ಭರ್ಜರಿ ಸ್ಪರ್ಧೆ ಇದೆ. ಈ ಮೊದಲಿನಿಂದ ಪ್ರಸಾರ ಕಾಣುತ್ತಿರುವ ಧಾರಾವಾಹಿಗಳ (Kannada Serials) ಜೊತೆ ಹೊಸ ಧಾರಾವಾಹಿಗಳು ರೇಸ್​ಗೆ ಇಳಿದಿವೆ. ಈ ಪೈಕಿ ಹಲವು ಧಾರಾವಾಹಿಗಳು ಯಶಸ್ಸು ಕಂಡಿವೆ. ಇನ್ನೂ ಕೆಲವು ಧಾರಾವಾಹಿಗಳು ಆರಂಭದಲ್ಲಿ ಒಳ್ಳೆಯ ರೀತಿಯಲ್ಲಿ ಪ್ರಸಾರ ಕಂಡು ನಂತರದ ದಿನಗಳಲ್ಲಿ ನಿಧಾನ ಗತಿಯಲ್ಲಿ ಹೆಜ್ಜೆ ಹಾಕುತ್ತಿವೆ. ಈಗ 35ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಯಾವ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಹಲವು ತಿಂಗಳಿಂದ ಈ ಧಾರಾವಾಹಿ ಭರ್ಜರಿ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಗ್ರಾಮೀಣ ಭಾಗದಲ್ಲಿ ಈ ಧಾರಾವಾಹಿಯನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕೆ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಎರಡಂಕಿ ಟಿಆರ್​ಪಿ ಪಡೆಯುತ್ತಿರುವ ಕನ್ನಡದ ಏಕೈಕ ಧಾರಾವಾಹಿ ಇದು.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಪ್ರೇಕ್ಷಕರಿಗೆ ಒಳ್ಳೆಯ ರೀತಿಯಲ್ಲಿ ಕನೆಕ್ಟ್ ಆಗುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಹಾಗೂ ರೀತು ಸಿಂಗ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ಭಾವನಾತ್ಮಕವಾಗಿ ಧಾರಾವಾಹಿ ಸೆಳೆದುಕೊಂಡಿದೆ.

ಗಟ್ಟಿಮೇಳ

ಗಟ್ಟಿಮೇಳ ಧಾರಾವಾಹಿ ತನ್ನದೇ ಆದ ಪ್ರೇಕ್ಷಕ ವರ್ಗವನ್ನು ಹೊಂದಿದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ‘ಸೀತಾ ರಾಮ’ ಬರುವುದಕ್ಕೂ ಮೊದಲು ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಮದುವೆಯ ಸಂಭ್ರಮ. ಸದ್ಯ ಭೂಮಿಕಾ ಹಾಗೂ ಗೌತಮ್ ಮದುವೆ ನಡೆಯುತ್ತಿದೆ. ಈ ಕಾರಣಕ್ಕೆ ಧಾರಾವಾಹಿ ಹೆಚ್ಚು ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

ಸತ್ಯ

‘ಸತ್ಯ’ ಧಾರಾವಾಹಿ ಕೂಡ ಭರ್ಜರಿ ಟಿಆರ್​ಪಿ ಪಡೆದು ಮುಂದೆ ಸಾಗುತ್ತಿದೆ. ಈ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ. ‘ಸತ್ಯ’ ಧಾರಾವಾಹಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ