AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್

ಕನ್ನಡ ಧಾರಾವಾಹಿಗಳ 39ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಪ್ರತಿವರವೂ ಧಾರಾವಾಹಿಗಳು ಬಹುತೇಕ ಒಂದೇ ರೀತಿಯ ಸ್ಥಾನದಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬೇರೆ ಬೇರೆ ಧಾರಾವಾಹಿಗಳು ಟಾಪ್ ಐದರಲ್ಲಿ ಸ್ಥಾನ ಪಡೆದಿವೆ.

ಟಿಆರ್​ಪಿ ರೇಸ್​​ನಲ್ಲಿ ಎಲ್ಲರನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ ‘ಅಮೃತಧಾರೆ’; ಟಾಪ್ ಐದು ಸೀರಿಯಲ್ಸ್
ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on:Oct 04, 2024 | 2:21 PM

Share

‘ಅಮೃತಧಾರೆ’ ಧಾರಾವಾಹಿ ಆರಂಭ ಆಗಿ ವರ್ಷಗಳೇ ಕಳೆದಿವೆ. ಆರಂಭದ ದಿನಗಳಲ್ಲಿ ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಗುತ್ತಿತ್ತು. ನಂತರದ ದಿನಗಳಲ್ಲಿ ಅಷ್ಟಾಗಿ ಟಿಆರ್​ಪಿ ಸಿಕ್ಕಿಲ್ಲ. ಈಗ 39ನೇ ವಾರದ ಲಿಸ್ಟ್​​ನಲ್ಲಿ ‘ಅಮೃತಧಾರೆ’ ಧಾರಾವಾಹಿ ಕರ್ನಾಟಕದಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಈ ಮೂಲಕ ಅಚ್ಚರಿಯ ಕಂಬ್ಯಾಕ್ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಟಾಪ್ ಐದರಲ್ಲಿ ಇರುವ ಧಾರಾವಾಹಿಗಳ ಪಟ್ಟಿ ಇಲ್ಲಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ನಟಿಸುತ್ತಿದ್ದಾರೆ. ಈ ದಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಈ ಧಾರಾವಾಹಿಯ ಕಂಬ್ಯಾಕ್ ಫ್ಯಾನ್ಸ್​ಗೆ ಖುಷಿ ಕೊಟ್ಟಿದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಪುಟ್ಟಕ್ಕನ ಮಕ್ಕಳು’ ಸಮಯ ಬದಲಾವಣೆ ನಂತರದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ನಂಬರ್ 1 ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.  ನಾಲ್ಕನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಈ ಧಾರಾವಾಹಿಯ  ಸಮಯ ಬದಲಾವಣೆ ಆದರೂ ಟಿಆರ್​ಪಿಯಲ್ಲಿ ಹೆಚ್ಚಿನ ವ್ಯತ್ಯಾಸ ಏನು ಆಗಿಲ್ಲ ಅನ್ನೋದು ವಿಶೇಷ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ. ಆರನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಇತ್ತೀಚೆಗೆ ಆರಂಭವಾದ ಈ ಧಾರಾವಾಹಿ ಅಂದುಕೊಂಡಷ್ಟು ಟಿಆರ್​ಪಿಯನ್ನು ಪಡೆದುಕೊಳ್ಳುತ್ತಿಲ್ಲ ಅನ್ನೋದು ಬೇಸರದ ವಿಚಾರ. ‘ಸೀತಾ ರಾಮ’ ಧಾರಾವಾಹಿಯ ಟಿಆರ್​ಪಿ ಕೂಡ ಕುಗ್ಗಿದೆ.

ಇದನ್ನೂ ಓದಿ: ಭರ್ಜರಿ ಟಿಆರ್​ಪಿ ಪಡೆದ ‘ಅಮೃತಧಾರೆ’ಗೆ ಎರಡನೇ ಸ್ಥಾನ; ಯಾವ ಧಾರಾವಾಹಿಗೆ ಎಷ್ಟನೇ ರ‍್ಯಾಂಕ್?

ಈಗಾಗಲೇ ಬಿಗ್ ಬಾಸ್ ಆರಂಭ ಆಗಿದೆ. ಮುಂದಿನ ವಾರದಿಂದ ಬಿಗ್ ಬಾಸ್​ ಟಿಆರ್​ಪಿ ಕೂಡ ಇದರಲ್ಲಿ ಲಭ್ಯವಾಗಲಿದೆ. ಬಿಗ್ ಬಾಸ್ ಸಮಯದಲ್ಲಿ ಪ್ರಸಾರ ಕಾಣುವ ಇತರ ಧಾರಾವಾಹಿಗಳ ಟಿಆರ್​ಪಿ ಕುಗ್ಗೋ ಸಾಧ್ಯತೆ ಇದೆ. ಒಂದೊಮ್ಮೆ ಸುದೀಪ್ ಅವರು ಲಾಯರ್ ಜಗದೀಶ್​ಗೆ ಕ್ಲಾಸ್ ತೆಗೆದುಕೊಂಡರೆ ವೀಕೆಂಡ್​ನಲ್ಲಿ ಬಿಗ್ ಬಾಸ್​ಗೆ ಭರ್ಜರಿ ಟಿಆರ್​ಪಿ ಸಿಗೋ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:21 pm, Fri, 4 October 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ