‘ಕನ್ನಡತಿ’ ರಂಜನಿ ರಾಘವನ್​ ಬರೆದ ಕಥಾ ಸಂಕಲನದ ಹೆಸರೇನು? ಸರಿ ಉತ್ತರ ಹೇಳಿದವರಿಗೆ ಇದೆ ಬಹುಮಾನ

ರಂಜನಿ ಅವರು ಬರೆದ ಕಥಾ ಸಂಕಲನ ಮುಂದಿನ ವಾರ ಬಿಡುಗಡೆ ಆಗಲಿದೆ. ಇದಕ್ಕೆ ಅವರು ಈಗಾಗಲೇ ಹೆಸರನ್ನು ಇಟ್ಟಿದ್ದಾರೆ. ಆದರೆ, ಅದನ್ನು ಬಹಿರಂಗ ಮಾಡಿಲ್ಲ.

‘ಕನ್ನಡತಿ’ ರಂಜನಿ ರಾಘವನ್​ ಬರೆದ ಕಥಾ ಸಂಕಲನದ ಹೆಸರೇನು? ಸರಿ ಉತ್ತರ ಹೇಳಿದವರಿಗೆ ಇದೆ ಬಹುಮಾನ
‘ಕನ್ನಡತಿ’ ರಂಜನಿ ರಾಘವನ್​ ಬರೆದ ಕಥಾ ಸಂಕಲನದ ಹೆಸರೇನು? ಸರಿ ಉತ್ತರ ಹೇಳಿದವರಿಗೆ ಇದೆ ಬಹುಮಾನ
Follow us
TV9 Web
| Updated By: ಮದನ್​ ಕುಮಾರ್​

Updated on:Sep 24, 2021 | 7:47 AM

‘ಕನ್ನಡತಿ’ ರಂಜನಿ ರಾಘವನ್​ ಅವರು ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರು ನಿರ್ವಹಿಸುತ್ತಿರುವ ಭುವನೇಶ್ವರಿ ಪಾತ್ರ ಸಾಕಷ್ಟು ಜನರಿಗೆ ಇಷ್ಟವಾಗಿದೆ. ಈ ಧಾರಾವಾಹಿ ಮೂಲಕ ಕನ್ನಡವನ್ನು ಬೆಳೆಸುವ ಕಾರ್ಯ ಕೂಡ ಆಗುತ್ತಿದೆ. ಈ ಕಾರಣಕ್ಕೂ ಧಾರಾವಾಹಿ ಹೆಚ್ಚು ಜನರಿಗೆ ಇಷ್ಟವಾಗಿದೆ. ರಂಜನಿ ಕೇವಲ ನಟನೆ ಮಾತ್ರವಲ್ಲ ಬರಹದ ಮೂಲಕವೂ ಗುರುತಿಸಿಕೊಂಡಿದ್ದಾರೆ. ಈಗ ಅವರು ಕಥಾಸಂಕಲನ ಹೊರ ತರುತ್ತಿದ್ದಾರೆ.

ರಂಜನಿ ಅವರು ಬರೆದ ಕಥಾ ಸಂಕಲನ ಮುಂದಿನ ವಾರ ಬಿಡುಗಡೆ ಆಗಲಿದೆ. ಇದಕ್ಕೆ ಅವರು ಈಗಾಗಲೇ ಹೆಸರನ್ನು ಇಟ್ಟಿದ್ದಾರೆ. ಆದರೆ, ಅದನ್ನು ಬಹಿರಂಗ ಮಾಡಿಲ್ಲ. ಕಥಾ ಸಂಕಲನಕ್ಕೆ ಯಾವ ಹೆಸರು ಇಡಲಾಗಿದೆ ಎಂಬುದನ್ನು ಹೇಳೋಕೆ ಅಭಿಮಾನಿಗಳಿಗೆ ಅವಕಾಶ ನೀಡಿದ್ದಾರೆ. ಮೊದಲು ಸರಿ ಉತ್ತರ ನೀಡಿದ ಮೂವರಿಗೆ ಬಹುಮಾನದ ರೂಪದಲ್ಲಿ ಪುಸ್ತಕವನ್ನು ಉಚಿತವಾಗಿ ನೀಡಲಾಗುತ್ತಿದೆ.

ಕ_ _ ಬ್ಬಿ ಎಂದು ಬರೆದುಕೊಂಡು ಕಥಾ ಸಂಕಲನದ ಹೆಸರನ್ನು ಊಹಿಸಿ ಎಂದು ಚಾಲೆಂಜ್​ ನೀಡಿದ್ದಾರೆ ರಂಜನಿ. ಕೆಲವರು ಕಥಾ ಡಬ್ಬಿ, ಕಥಾ ಗುಬ್ಬಿ ಎಂಬಿತ್ಯಾದಿ ಹೆಸರನ್ನು ಊಹಿಸಿ ಕಮೆಂಟ್​ ಬಾಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಯಾವುದು ಸರಿ ಉತ್ತರ ಎಂಬುದು ಶೀಘ್ರವೇ ತಿಳಿದುಬರಲಿದೆ.

ರಂಜನಿ ಈ ಮೊದಲು ಸಾಕಷ್ಟು ಕಥೆಗಳನ್ನು ಬರೆದಿದ್ದಾರೆ. ಅವೆಲ್ಲವನ್ನೂ ಸೇರಿಸಿ ಈಗ ಪುಸ್ತಕದ ರೂಪದಲ್ಲಿ ಹೊರ ತರುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿ ಆಗಿದ್ದಾರೆ. ಅಲ್ಲದೆ, ಈ ಪುಸ್ತಕ ಯಾವಾಗ ಬರುತ್ತದೆ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ.

ಕನ್ನಡತಿ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದುಕೊಳ್ಳುತ್ತಿದೆ. ರಂಜನಿ ನಿರ್ವಹಿಸುತ್ತಿರುವ ಭುವಿ ಪಾತ್ರ ದಿನಕಳೆದಂತೆ ಮತ್ತಷ್ಟು ಸ್ಟ್ರಾಂಗ್​ ಆಗುತ್ತಿದೆ. ಕನ್ನಡತಿ ಬಗ್ಗೆ ವೀಕ್ಷಕರಿಗೆ ಸಾಕಷ್ಟು ಕುತೂಹಲಗಳನ್ನು ಹುಟ್ಟು ಹಾಕುವ ಕೆಲಸವನ್ನು ಧಾರಾವಾಹಿ ತಂಡ ಮಾಡುತ್ತಿದೆ.

ಇದನ್ನೂ ಓದಿ: ಕನ್ನಡತಿ ಅಪ್​ಡೇಟ್​; ತಿಳಿದೂ ತಪ್ಪು ಮಾಡಿದ ಸಾನಿಯಾ; ಎಂ.ಡಿ. ಪಟ್ಟ ಭುವಿಗೆ

Published On - 7:29 am, Fri, 24 September 21

ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು