AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು’ ಎಂದು ರಂಜನಿ ರಾಘವನ್​ ಹೇಳಿದ್ದಾರೆ.

Ranjani Raghavan: ಹಳ್ಳಿ ಮಹಿಳೆಯರ ಜೊತೆ ಸೋಬಾನೆ ಪದ ಹಾಡಿದ ‘ಕನ್ನಡತಿ’ ಸೀರಿಯಲ್​ ಭುವಿ; ಇಲ್ಲಿದೆ ವಿಡಿಯೋ
ರಂಜನಿ ರಾಘವನ್
TV9 Web
| Updated By: ಮದನ್​ ಕುಮಾರ್​|

Updated on: Jun 11, 2022 | 9:57 AM

Share

ನಟಿ ರಂಜನಿ ರಾಘವನ್​ (Ranjani Raghavan) ಅವರು ಬಹುಮುಖ ಪ್ರತಿಭೆ. ನಟಿಯಾಗಿ, ಲೇಖಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ‘ಕನ್ನಡತಿ’ ಸೀರಿಯಲ್​ (Kannadathi Serial) ಭುವಿ ಪಾತ್ರದ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ತುಂಬ ಫೇಮಸ್​. ಇನ್​ಸ್ಟಾಗ್ರಾಮ್​ನಲ್ಲಿ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಅಭಿಮಾನಿಗಳಿಗಾಗಿ ತಮ್ಮ ದಿನಚರಿಯ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ರಂಜನಿ ರಾಘವನ್​ ಅವರು ಒಂದು ವಿಶೇಷ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಅವರು ಹಳ್ಳಿ ಮಹಿಳೆಯರ ಜೊತೆ ಸೇರಿ ಸೋಬಾನೆ ಪದ (Sobane Song) ಹಾಡುತ್ತಿರುವುದು ಸೊಗಸಾಗಿದೆ. ಅಭಿಮಾನಿಗಳಿಗೆ ಈ ವಿಡಿಯೋ ತುಂಬ ಇಷ್ಟ ಆಗಿದ್ದು, ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡನ್ನು ಹೇಳಿದ್ದಕ್ಕಾಗಿ ಅವರ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ರಂಜನಿ ಅವರು ವಿಶೇಷವಾಗಿ ಗುರುತಿಸಿಕೊಳ್ಳುತ್ತಾರೆ.

ರಂಜನಿ ರಾಘವನ್​ ಅವರು ಅಪ್ಪಟ ಕನ್ನಡದ ನಟಿ. ಧಾರಾವಾಹಿ ಪಾತ್ರದ ರೀತಿ ನಿಜಜೀವನದಲ್ಲಿಯೂ ಅವರು ಕನ್ನಡ ಭಾಷೆ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಬಾನೆ ಪದ ಕೇಳುವುದು ಕಡಿಮೆ ಆಗಿದೆ. ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಪೀಳಿಗೆಯವರಿಗೆ ಪರಿಚಯಿಸಿದ್ದಕ್ಕಾಗಿ ಅನೇಕರು ರಂಜನಿ ರಾಘವನ್​ಗೆ ಕಮೆಂಟ್​ ಮೂಲಕ ಮೆಚ್ಚುಗೆ ಮತ್ತು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ
Image
ಕನ್ನಡಾಂಬೆ ಭುವನೇಶ್ವರಿ ದೇವಸ್ಥಾನ ಹೇಗಿದೆ? ವಿಶೇಷ ವಿಡಿಯೋ ಮಾಡಿ ಪರಿಚಯಿಸಿದ ನಟಿ ರಂಜನಿ ರಾಘವನ್
Image
‘ಸೈಬರ್ ಲೋಕದಲ್ಲಿ ಹೆಣ್ಮಕ್ಕಳ ಖಾಸಗಿತನಕ್ಕೆ ಸೇಫ್ಟಿ ಇಲ್ಲ ಎಂದರೆ..’: ‘ಟಕ್ಕರ್​’ ಬಗ್ಗೆ ರಂಜನಿ ರಾಘವನ್​ ಮಾತು
Image
ಹರಿದ ಬಟ್ಟೆ, ಹಣೆಯಲ್ಲಿ ರಕ್ತ; ನಟಿ ರಂಜನಿ ರಾಘವನ್ ಹಂಚಿಕೊಂಡ ವಿಡಿಯೋ ನೋಡಿ ಗಾಬರಿಗೊಳ್ಳಬೇಡಿ
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಇದನ್ನೂ ಓದಿ: ‘ಕನ್ನಡತಿ’ ನಟಿ ರಂಜನಿ ರಾಘವನ್​ ಬಳಿ ಎಷ್ಟು ದುಡ್ಡಿದೆ? ಅಚ್ಚರಿಯ ವಿಚಾರ ಬಾಯ್ಬಿಟ್ಟ ಭುವಿ

‘ಜಾನಪದ ಸಾಹಿತ್ಯದಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಈ ಕಲೆಯನ್ನು ಉಳಿಸುವಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು. ಕಂಚಿನ ಕಂಠದಲ್ಲಿ ಮೂಡಿಬರ್ತಿರೋ ಇವರ ಪದ ಇನ್ನಷ್ಟು ಕಿವಿಗಳನ್ನು ತಲುಪಿ ಹೃದಯಗಳನ್ನು ಮುಟ್ಟಲಿ ಅಂತ ಇದನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಈ ವಿಡಿಯೋದ ಜತೆ ಬರೆದುಕೊಂಡಿದ್ದಾರೆ ರಂಜನಿ ರಾಘವನ್​.

(ಇನ್​ಸ್ಟಾಗ್ರಾಮ್​ನಲ್ಲಿ ರಂಜನಿ ಹಂಚಿಕೊಂಡ ಸೋಬಾನೆ ಹಾಡಿನ ವಿಡಿಯೋ ಇಲ್ಲಿದೆ)

‘ಕನ್ನಡತಿ’ ಧಾರಾವಾಹಿಯಲ್ಲಿ ನಟ ಕಿರಣ್​ ರಾಜ್​ ಜೊತೆ ರಂಜನಿ ರಾಘವನ್​ ಅವರ ಕಾಂಬಿನೇಷನ್​ ತುಂಬ ಚೆನ್ನಾಗಿ ಮೂಡಿಬರುತ್ತಿದ್ದು, ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ಸೀರಿಯಲ್​ ಮಾತ್ರವಲ್ಲದೇ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಇದೆ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಟಕ್ಕರ್​’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ