‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ

‘ಕಾಂತಾರ: ಚಾಪ್ಟರ್ 1’ ಕೇವಲ ಎಂಟೇ ದಿನಗಳಲ್ಲಿ 500 ಕೋಟಿ ಗಳಿಸಿದೆ. ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಸುತ್ತದೆಯೇ ಎಂಬ ಪ್ರಶ್ನೆಗೆ ದೀಪಾವಳಿ ಹಬ್ಬದ ಕಲೆಕ್ಷನ್ ನಿರ್ಣಾಯಕ ಆಗಲಿದೆ. ಅಕ್ಟೋಬರ್ 20-22ರ ದೀಪಾವಳಿ ಸಮಯದಲ್ಲಿ ವಿಶ್ವ ಮಟ್ಟದಲ್ಲಿ 200 ಕೋಟಿ ಗಳಿಸಿದರೆ, 1000 ಕೋಟಿ ಗುರಿ ತಲುಪುವ ನಿರೀಕ್ಷೆಯಿದೆ.

‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ
ರುಕ್ಮಿಣಿ

Updated on: Oct 11, 2025 | 12:30 PM

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಕೇವಲ ಎಂಟೇ ದಿನಕ್ಕೆ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕನ್ನಡ ಮಾತ್ರವಲ್ಲದೆ, ಪರಭಾಷೆಯ ಜನರು ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಇದರಿಂದ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಲು ಸಾಧ್ಯವಾಯಿತು. ಈ ಚಿತ್ರದ ಕಲೆಕ್ಷನ್ ಮುಂದಿನ ಕೆಲ ವಾರ ಭರ್ಜರಿಯಾಗಿ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಆದರೆ, ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡಿತು. ಈಗ ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಚಿತ್ರ ಕೇವಲ ಒಂದೇ ವಾರಕ್ಕೆ 500 ಕೋಟಿ ರೂಪಾಯಿ ಗಡಿ ತಲುಪಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಆ ಒಂದು ದಿನ ಸಿನಿಮಾಗೆ ನಿರ್ಣಾಯಕವಾಗಲಿದೆ.

ಯಾವುದೇ ವಿಶೇಷ ಹಬ್ಬಗಳು ಬಂದಾಗ ಸಿನಿಮಾ ನೋಡಲು ತೆರಳುವವರ ಸಂಖ್ಯೆ ಹೆಚ್ಚಲಿದೆ. ಈಗ ದೀಪಾವಳಿ ಸಮೀಪಿಸಿದೆ. ಕೆಲವೇ ದಿನಗಳಲ್ಲಿ ಹಿಂದೂಗಳ ಈ ಪ್ರಮುಖ ಹಬ್ಬ ಆಗಮಿಸಲಿದೆ. ಆ ಸಮಯದಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬುದರ ಆಧಾರದ ಮೇಲೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ನಿರ್ಧಾರವಾಗಲಿದೆ.
ದೀಪಾವಳಿ ಹಬ್ಬವನ್ನು ಅಕ್ಟೋಬರ್ 20, 21 ಹಾಗೂ 22ರಂದು ಆಚರಿಸಲಾಗುತ್ತಿದೆ. ಈ ಸಮಯದಲ್ಲಿ ಸಿನಿಮಾ ವಿಶ್ವ ಮಟ್ಟದಲ್ಲಿ ಕನಿಷ್ಠ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕು. ಒಂದೊಮ್ಮೆ ಇದು ಸಂಭವಿಸಿದಲ್ಲಿ ಸಿನಿಮಾದ ಒಟ್ಟಾರೆ ಕಲೆಕ್ಷನ್ 1000 ಕೋಟಿ ರೂಪಾಯಿ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

ಇದನ್ನೂ ಓದಿ: ಹಿಂದಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಭರ್ಜರಿ ಕಲೆಕ್ಷನ್; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ರಿಷಬ್ ಅವರು ದೈವದ ಕಥೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ‘ಕಾಂತಾರ: ಚಾಪ್ಟರ್ 2’ ಸಿನಿಮಾ ಕೂಡ ಮಾಡೋದಾಗಿ ಘೋಷಿಸಿದ್ದಾರೆ. ಆ ಸಿನಿಮಾ ಸಿದ್ಧವಾದರೆ ಅದರ ಬಜೆಟ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us