AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ

'ಕಾಂತಾರ: ಚಾಪ್ಟರ್ 1' ಸಿನಿಮಾ 600 ಕೋಟಿ ರೂ.ಗೂ ಹೆಚ್ಚು ಗಳಿಸಿ ಬ್ಲಾಕ್‌ಬಸ್ಟರ್ ಆಯಿತು. ರಿಷಬ್ ಶೆಟ್ಟಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. 'ಕಾಂತಾರ: ಚಾಪ್ಟರ್ 2' ಬರಲಿದೆ ಎಂದು ಘೋಷಿಸಲಾಗಿದ್ದರೂ, ಸದ್ಯಕ್ಕೆ ಅದರ ಕೆಲಸ ಆರಂಭ ಆಗಿಲ್ಲ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 14, 2025 | 7:57 AM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬುದು ವಿಶೇಷ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಈ ಸಿನಿಮಾಗೆ ಮತ್ತೊಂದು ಭಾಗ ಬರಲಿದೆ ಎಂದು ಚಾಪ್ಟರ್ 1 ಕ್ಲೈಮ್ಯಾಕ್ಸ್​ನಲ್ಲಿ ಹೇಳಲಾಗಿತ್ತು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಆ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಮಾಡೋದಾಗಿ ತಂಡದವರು ಹೇಳಿದರು. ರಿಷಬ್ ಅವರು ಒಂದು ವರ್ಷಗಳ ಕಾಲ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು.

ಇದನ್ನೂ ಓದಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬರಲಿದೆ ಎಂಬ ಮಾಹಿತಿ ನೀಡಲಾಗಿದೆ. ‘ಕಾಂತಾರ’ ಸಿನಿಮಾದ ಸೀಕ್ವೆಲ್ ಇದಾಗಲಿದೆ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂಬ ಬಗ್ಗೆ ರಿಷಬ್ ಅವರು ಇಷ್ಟು ದಿನ ಪ್ರತಿಕ್ರಿಯೆ ನೀಡಿರಿಲಿಲ್ಲ. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ರಿಷಬ್ ಸದ್ಯ ಬ್ರೇಕ್​ನಲ್ಲಿ ಇದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಜೀ ಕನ್ನಡದಲ್ಲಿ ರಿಷಬ್

View this post on Instagram

A post shared by Zee Kannada (@zeekannada)

ಜೀ ಕನ್ನಡದಲ್ಲಿ ‘ಜೀ ಕುಟುಂಬ ಅವಾರ್ಡ್ಸ್’ ಪ್ರಸಾರ ಕಾಣುವುದಿದೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ರಿಷಬ್ ಶೆಟ್ಟಿ ಅವರು ಇದಕ್ಕೆ ಅತಿಥಿಯಾಗಿ ತೆರಳಿದ್ದರು. ಆಗ ‘ಕಾಂತಾರ: ಚಾಪ್ಟರ್ 2’ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಯಿತು. ‘ನೆಕ್ಸ್ಟ್​ ರೆಸ್ಟ್’ ಎಂದು ರಿಷಬ್ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ವಿಶ್ವ ಮಟ್ಟದಲ್ಲಿ 700 ಕೋಟಿ; ಕನ್ನಡಕ್ಕಿಂತ ಹಿಂದಿಯಲ್ಲೇ ಹೆಚ್ಚು ಗಳಿಕೆ

‘ನನಗೆ ಕೆರ್ಕೊಳಕೆ ಪುರುಸೊತ್ತು ಇರಬಾರದು, ಅಷ್ಟು ಕೆಲಸ ಕೊಡಬೇಕು’ ಎಂದು ರಿಷಬ್ ದೇವರ ಬಳಿ ಕೇಳಿಕೊಂಡಿದ್ದರಂತೆ. ಅದು ಈಗ ಈಡೇರಿದೆ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಸದ್ಯಕ್ಕಂತೂ, ‘ಕಾಂತಾರ: ಚಾಪ್ಟರ್ 2’ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು