AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ; ದಾಖಲೆಯ ಟಿಆರ್​ಪಿ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್​

Kantara Movie On TV: ‘ಕಾಂತಾರ’ ಚಿತ್ರದ ಟೆಲಿವಿಷನ್​ ಪ್ರೀಮಿಯರ್​ಗೆ ಸಮಯ ಹತ್ತಿರವಾಗಿದೆ. ಈ ಕುರಿತು ‘ಸ್ಟಾರ್​ ಸುವರ್ಣ’ ವಾಹಿನಿ ಗುಡ್​ ನ್ಯೂಸ್​ ನೀಡಿದೆ.

Kantara: ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ; ದಾಖಲೆಯ ಟಿಆರ್​ಪಿ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್​
ಕಾಂತಾರ
TV9 Web
| Edited By: |

Updated on:Jan 03, 2023 | 8:26 PM

Share

ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ’ (Kantara Movie) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ನಂತರ ಒಟಿಟಿಗೆ ಕಾಲಿಟ್ಟು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಈಗ ಈ ಚಿತ್ರದ ಟೆಲಿವಿಷನ್​ ಪ್ರೀಮಿಯರ್​ಗೆ (Kantara Movie Television Premiere) ಸಮಯ ಹತ್ತಿರ ಆಗಿದೆ. ‘ಸ್ಟಾರ್​ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದೆ. ಶೀಘ್ರದಲ್ಲೇ ಟಿವಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಅದನ್ನು ತಿಳಿಸುವ ಸಲುವಾಗಿ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಹಂಚಿಕೊಳ್ಳಲಾಗಿದೆ. ಅದನ್ನು ಕಂಡು ವೀಕ್ಷಕರು ಎಗ್ಸೈಟ್​ ಆಗಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ನಟನೆ, ನಿರ್ದೇಶನದ ಈ ಸಿನಿಮಾವನ್ನು ಟಿವಿಯಲ್ಲಿ ನೋಡಿ ಆನಂದಿಸಲು ವೀಕ್ಷಕರು ಕಾದಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಕನ್ನಡದ ‘ಕಾಂತಾರ’ ಸಿನಿಮಾ ಬೇರೆ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆ ಆಯಿತು. ಎಲ್ಲ ರಾಜ್ಯಗಳಲ್ಲೂ ಈ ಚಿತ್ರಕ್ಕೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಯ್ತು. ಎಲ್ಲ ಭಾಷೆಗಳಿಂದ ಸೇರಿ ‘ಕಾಂತಾರ’ ಗಳಿಸಿದ್ದು 400 ಕೋಟಿ ರೂಪಾಯಿಗಿಂತಲೂ ಅಧಿಕ. ಕನ್ನಡ ಸಿನಿಮಾದ ಈ ಸಾಧನೆಗೆ ಇಡೀ ದೇಶವೇ ಸಲಾಂ ಎಂದಿದೆ. ಇಂಥ ಚಿತ್ರವನ್ನು ಮನೆಯಲ್ಲೇ ಕುಳಿತು ಟಿವಿ ಪರದೆಯಲ್ಲಿ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ‘ಸ್ಟಾರ್​ ಸುವರ್ಣ’ ವಾಹಿನಿ ಗುಡ್​ ನ್ಯೂಸ್​ ನೀಡಿದೆ.

ಇದನ್ನೂ ಓದಿ: Kantara Painting: ಮೈಸೂರಿನ ಉರಗ ಸಂರಕ್ಷಕ ಸ್ನೇಕ್ ಶ್ಯಾಮ್ ಮನೆಯ ಗೋಡೆಯಲ್ಲಿ ಮಹಿಷಾಸುರ, ಕಾಂತಾರ

ಟಿವಿಯಲ್ಲಿ ‘ಕಾಂತಾರ’ ಚಿತ್ರ ಯಾವಾಗ ಪ್ರಸಾರ ಆಗಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಪ್ರಸಾರ ದಿನಾಂಕದ ಬಗ್ಗೆ ಸದ್ಯದಲ್ಲೇ ವಾಹಿನಿಯವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಚಿತ್ರ ಪ್ರಸಾರ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಈ ಸಿನಿಮಾಗಾಗಿ ಹಲವು ದಿನಗಳಿಂದ ಕಾದಿರುವುದಾಗಿ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ‘ಕಾಂತಾರ’ ಸಿನಿಮಾ ದಾಖಲೆ ಮಾಡಿದ್ದಾಗಿದೆ. ಈಗ ಟಿವಿಯಲ್ಲಿ ಪ್ರಸಾರವಾದರೆ ದಾಖಲೆ ಮಟ್ಟದ ಟಿಆರ್​ಪಿ ಸಿಗುವುದು ಗ್ಯಾರಂಟಿ ಎಂದು ರಿಷಬ್​ ಶೆಟ್ಟಿ ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ. ‘ನಾಡಿಗೆ ನಾಡೇ ಭಕ್ತಿಯಿಂದ ಕೈಮುಗಿದು ಎದೆಗೊತ್ತಿಕೊಂಡ ಕನ್ನಡದ ಹೆಮ್ಮೆಯ ಕಳಶ ಕಾಂತಾರ. ಅತೀ ಶೀಘ್ರದಲ್ಲಿ ನಿಮ್ಮ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ’ ಎಂಬ ಕ್ಯಾಪ್ಷನ್​ ಜೊತೆಗೆ ಪ್ರೋಮೋ ಹಂಚಿಕೊಳ್ಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:26 pm, Tue, 3 January 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ