ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ

ಈ ವಿಡಿಯೋಗೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ
ಕಪಿಲ್​ ಶರ್ಮಾ-ಅಕ್ಷಯ್​ ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 16, 2022 | 6:00 PM

ನಟ, ನಿರೂಪಕ ಕಪಿಲ್​ ಶರ್ಮಾ (Kapil Sharma) ಇತ್ತೀಚೆಗೆ ಸಖತ್​ ಸುದ್ದಿಯಲ್ಲಿದ್ದಾರೆ. ‘ದಿ ಕಪಿಲ್​ ಶರ್ಮಾ ಶೋ’ಗೆ (The Kapil Sharma Show) ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ತಂಡಕ್ಕೆ ಆಹ್ವಾನ ನೀಡೋಕೆ ಅವರು ನಿರಾಕರಿಸಿದ್ದರು ಎನ್ನುವ ವಿಚಾರ ದೊಡ್ಡ ಚರ್ಚೆ ಹುಟ್ಟುಹಾಕಿತ್ತು. ಈಗ ಕಪಿಲ್​ ಶರ್ಮಾ ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಅವರು ಮುಂಜಾನೆ ನಾಲ್ಕು ಗಂಟೆಗೆ ವರ್ಕೌಟ್​ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ಕಪಿಲ್ ಶರ್ಮಾ ಅವರನ್ನು ಕಾಲೆಳೆಯುತ್ತಿದ್ದಾರೆ.

ಮುಂಜಾನೆ ನಾಲ್ಕು ಗಂಟೆಗೆ ಜಿಮ್​ ಮಾಡುತ್ತಿರುವುದಾಗಿ ಕಪಿಲ್​ ಶರ್ಮಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.  ‘ಆರು ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು ಎಂದಾದಾಗ ನಾಲ್ಕು ಗಂಟೆಗೆ ಜಿಮ್​ಗೆ ತೆರಳಬೇಕು’ ಎಂದು ಅವರು ವಿಡಿಯೋಗೆ ಕ್ಯಾಪ್ಶನ್​ ನೀಡಿದ್ದಾರೆ. ಇದಕ್ಕೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್ ಅವರು ಮುಂಜಾನೆ ನಾಲ್ಕು ಗಂಟೆಗೆ ಎದ್ದು ಜಿಮ್​ ಮಾಡುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಅನೇಕ ಬಾರಿ ಈ ವಿಚಾರವನ್ನು ಅವರು ಹೇಳಿಕೊಂಡಿದ್ದಿದೆ. ಇದೇ ವಿಚಾರ ಇಟ್ಟುಕೊಂಡು ಕಪಿಲ್​ ಅವರ ಕಾಲು ಎಳೆಯಲಾಗಿದೆ. ‘ಅಕ್ಷಯ್​ ಕುಮಾರ್ ಬರುತ್ತೇನೆ ಎಂದು ಹೇಳಿರಬೇಕು ಅದಕ್ಕೆ ನೀವು ಇಷ್ಟು ಬೇಗ ಎದ್ದಿದ್ದೀರಾ’ ಎಂದು ಅಭಿಮಾನಿಯೋರ್ವ ಕಮೆಂಟ್​ ಮಾಡಿದ್ದಾರೆ. ‘ಅಕ್ಷಯ್​ ಕುಮಾರ್ ಅವರು ನಿಮಗೆ ತರಬೇತಿ ನೀಡುತ್ತಿದ್ದಾರೆ ಅನಿಸುತ್ತಿದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು, ‘ಕಪಿಲ್ ಶರ್ಮಾ ಶೋಗೆ ಯಾವುದೋ ಜನಪ್ರಿಯ ಹೀರೋಯಿನ್​ ಬರುತ್ತಿದ್ದಾರೆ. ಹೀಗಾಗಿ, ಅವರು ಫಿಟ್​ ಆಗುತ್ತಿದ್ದಾರೆ’ ಎಂದಿದ್ದಾರೆ.

ಹುಟ್ಟಿತ್ತು ವಿವಾದ..

1990ರಲ್ಲಿ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದುಗಳನ್ನು ಹತ್ಯೆ ಮಾಡಿದ ಕಥೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಿದ್ಧಗೊಂಡಿದೆ. ಈ ಸಿನಿಮಾ ತಂಡವನ್ನು ಕಪಿಲ್​ ಶರ್ಮಾ ಶೋಗೆ ಕರೆಯದೇ ಇರೋದಕ್ಕೆ ಕೆಲವರು ಅಸಮಾಧಾನಗೊಂಡಿದ್ದರು. ಈ ಬಗ್ಗೆ ಕಪಿಲ್​ ಶರ್ಮಾ ಅವರನ್ನು ಪ್ರಶ್ನೆ ಮಾಡಿದ್ದರು. ಆದರೆ, ಇದು ಸುಳ್ಳು ಎಂದು ಕಪಿಲ್​ ಶರ್ಮಾ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಅಕ್ಕಿಗೆ ಕಪಿಲ್​ ಶರ್ಮಾ ನಂಬಿಕೆ ದ್ರೋಹ​; ‘ದಿ ಕಪಿಲ್​ ಶರ್ಮಾ ಶೋ’ ಬೈಕಾಟ್​ ಮಾಡಿದ ಅಕ್ಷಯ್​ ಕುಮಾರ್

ಒಟಿಟಿ ಸಂಸ್ಥೆಯಿಂದ 135 ಕೋಟಿ ರೂಪಾಯಿ ಬಾಚಿದ ಅಕ್ಷಯ್​ ಕುಮಾರ್ ಕುಮಾರ್ ಸಿನಿಮಾ

Published On - 5:59 pm, Wed, 16 March 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್