AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿಯಲ್ಲಿ ಆಷಾಢದ ಟ್ವಿಸ್ಟ್; ಮೆಕ್ಯಾನಿಕ್ ವೇಷದಲ್ಲಿ ಬಂದ ಕಥಾನಾಯಕ

ಜೀ ಕನ್ನಡದ ಜನಪ್ರಿಯ 'ಕರ್ಣ' ಧಾರಾವಾಹಿಯಲ್ಲಿ ಆಷಾಢದ ಪ್ರಯುಕ್ತ ನಾಯಕ ಕರ್ಣ ಹಾಗೂ ನಿಧಿ ಜೋಡಿಗೆ ಹೊಸ ತಿರುವು ಎದುರಾಗಿದೆ. ಮನೆಯವರ ಕಣ್ಣು ತಪ್ಪಿಸಿ ನಿಧಿಯನ್ನು ಭೇಟಿಯಾಗಲು ಕರ್ಣ ಮೆಕ್ಯಾನಿಕ್ ವೇಷ ಧರಿಸಿ ಆಕೆಯ ಮನೆಗೆ ಬಂದಿದ್ದು, ಅಜ್ಜಿಗೆ ಸಿಕ್ಕಿಬೀಳುವ ರೋಚಕ ಪ್ರಸಂಗ ಎದುರಾಗಿದೆ. ಇನ್ನೊಂದೆಡೆ, ನಟಿ ನಮ್ರತಾ ಗೌಡ (ನಿತ್ಯಾ) ಧಾರಾವಾಹಿಯಿಂದ ಕಾಣೆಯಾಗಿದ್ದು ವೀಕ್ಷಕರಲ್ಲಿ ಮತ್ತು ಅವರ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ.

'ಕರ್ಣ' ಧಾರಾವಾಹಿಯಲ್ಲಿ ಆಷಾಢದ ಟ್ವಿಸ್ಟ್; ಮೆಕ್ಯಾನಿಕ್ ವೇಷದಲ್ಲಿ ಬಂದ ಕಥಾನಾಯಕ
'ಕರ್ಣ' ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 17, 2026 | 10:31 AM

Share

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಕರ್ಣ’ದಲ್ಲಿ ಈಗ ರೋಚಕ ತಿರುವು ಎದುರಾಗಿದೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ಕಥಾನಾಯಕ ಕರ್ಣ ಹಾಗೂ ನಿಧಿ ಜೋಡಿಗೆ ಹೊಸ ಸಂಕಷ್ಟ ಎದುರಾಗಿದೆ. ಇಬ್ಬರೂ ಮನೆಯವರ ಕಣ್ಣು ತಪ್ಪಿಸಿ ಕದ್ದುಮುಚ್ಚಿ ಪ್ರೀತಿ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ಫನ್ ಎಪಿಸೋಡ್ ವೀಕ್ಷಕರಿಗೆ ಸಾಕಷ್ಟು ಮನರಂಜನೆ ನೀಡುತ್ತಿದೆ. ಈ ಧಾರಾವಾಹಿ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಸಾಗುತ್ತದೆ ಎನ್ನುವ ಕುತೂಹಲ ಮೂಡಿದೆ.

ಹೇಗಾದರೂ ಮಾಡಿ ನಿಧಿಯನ್ನು ಭೇಟಿಯಾಗಲು ಕರ್ಣ ಹೊಸ ಪ್ಲಾನ್ ಮಾಡಿದ್ದಾನೆ. ಆತ ಗ್ಯಾಸ್ ರಿಪೇರಿ ಮಾಡುವ ಮೆಕ್ಯಾನಿಕ್ ವೇಷ ಧರಿಸಿ ನಿಧಿ ಮನೆಗೆ ಬಂದಿದ್ದಾನೆ. ಈ ವೇಳೆ ಕಿಚನ್‌ನಲ್ಲಿ ಇಬ್ಬರೂ ಕದ್ದುಮುಚ್ಚಿ ಮಾತನಾಡುತ್ತಾ ಪ್ರೀತಿಯ ಕ್ಷಣಗಳನ್ನು ಕಳೆಯುತ್ತಾರೆ. ಆದರೆ ಈ ಖುಷಿ ಹೆಚ್ಚು ಹೊತ್ತು ಇರುವುದಿಲ್ಲ.

View this post on Instagram

A post shared by Zee Kannada (@zeekannada)

ಅಷ್ಟರಲ್ಲೇ ಮನೆಗೆ ಅಜ್ಜಿಯ ಎಂಟ್ರಿ ಆಗುತ್ತದೆ. ಹೊರಗಿರುವ ಪುರುಷರ ಚಪ್ಪಲಿ ನೋಡಿ ಅಜ್ಜಿಗೆ ಅನುಮಾನ ಶುರುವಾಗುತ್ತದೆ. ತಕ್ಷಣವೇ ಅಲರ್ಟ್ ಆಗುವ ನಿಧಿ, ಆತನನ್ನು ಫ್ಯಾನ್ ರಿಪೇರಿ ಮಾಡುವ ಮೆಕ್ಯಾನಿಕ್ ಎಂದು ಸುಳ್ಳು ಹೇಳುತ್ತಾಳೆ. ಅಜ್ಜಿ ಆತನಿಗೆ ಫ್ಯಾನ್ ಜೊತೆಗೆ ಐರನ್ ಬಾಕ್ಸ್ ಕೂಡ ರಿಪೇರಿ ಮಾಡಲು ಕೊಟ್ಟು ಪರೀಕ್ಷಿಸುತ್ತಾರೆ. ಈ ಕದ್ದುಮುಚ್ಚಿ ಪ್ರೀತಿಯ ಆಟ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ‘ಕರ್ಣ’ ಧಾರಾವಾಹಿಯಿಂದ ಕಾಣೆಯಾದ ನಟಿ ನಮ್ರತಾ ಗೌಡ 

ನಿತ್ಯಾ ಕಾಣೆ

ನಿತ್ಯಾ ಪಾತ್ರ ಮಾಡುತ್ತಿರುವ ನಮ್ರತಾ ಗೌಡ ಅವರು ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ವೀಕ್ಷಿರಿಗೆ ಸಾಕಷ್ಟು ಬೇಸರ ಮೂಡಿಸಿದೆ. ಅವರು ಯಾವಾಗ ಧಾರಾವಾಹಿಗೆ ಮರಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅವರು ಇಲ್ಲದೆ ಇರುವುದು ನಮ್ರತಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರನ್ನು ಈ ರೀತಿ ಸೈಡ್ಲೈನ್ ಮಾಡಿದ್ದು ಸರಿ ಅಲ್ಲ ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’