AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಕ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಆರಂಭದಲ್ಲೇ ಒಂದು ವಿಘ್ನ ಎದುರಾಗಿದೆ. ಸರಿಯಾದ ರೀತಿಯಲ್ಲಿ ತಾಜ್ಯ ವಿಲೇವಾರಿ ಮಾಡದ ಕಾರಣದಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಲಾಗಿದೆ.

ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಕ್
Bigg Boss Kannada 12
Shivaraj
| Edited By: |

Updated on: Oct 06, 2025 | 7:47 PM

Share

ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂಬ ಖ್ಯಾತಿ ಹೊಂದಿರುವ ‘ಬಿಗ್ ಬಾಸ್’ ಒಂದಷ್ಟು ವಿಘ್ನಗಳನ್ನು ಎದುರಿಸುತ್ತಿದೆ. ಕಳೆದ ಸೀಸನ್​​ನಲ್ಲಿ ಮಹಿಳಾ ಆಯೋಗದಿಂದ ಬಿಗ್ ಬಾಸ್​ ಆಯೋಜಕರಿಗೆ ನೋಟಿಸ್ ನೀಡಲಾಗಿತ್ತು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (Pollution Control Board) ನೋಟಿಸ್ ಜಾರಿ ಮಾಡಲಾಗಿದೆ. ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಆಯೋಜಕರು ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್​ ನೀಡಲಾಗಿದೆ. ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ನೋಟಿಸ್ ಕೊಡಲಾಗಿದೆ.

ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಈ ಬಾರಿಯ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದೆ. ಒಟ್ಟು 19 ಜನರು ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ನೀಡಿದ್ದರು. ಬಳಿಕ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ತೆರೆ ಹಿಂದೆ ನೂರಾರು ಮಂದಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ಸಾಕಷ್ಟು ತಾಜ್ಯ ಉಂಟಾಗಲಿದೆ.

ಜಾಲಿವುಡ್ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ ಎಂಬ ಆರೋಪ ಎದುರಾಗಿದೆ. ಅಲ್ಲದೇ, ಜಾಲಿವುಡ್ ಸ್ಡುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆದಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿದ್ದು, ಬಂದ್ ಮಾಡುವಂತೆ ಸೂಚಿಸಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಒಂದು ಅಮ್ಯೂಸ್​​ಮೆಂಟ್ ಪಾರ್ಕ್. ಅದರಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದೇ ಹೊರಗೆ ಬಿಡಲಾಗುತ್ತಿದೆ. ಅದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದ್ದನ್ನು ಕೂಡ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂಬ ಆರೋಪ ಇದೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಸ್ಪರ್ಧಿಸಿದ ಈ ಸ್ಪರ್ಧಿಗಳದ್ದು ಅಕಾಲಿಕ ಮರಣ

ಈ ಎಲ್ಲ ಕಾರಣಗಳಿಂದಾಗಿ ಜಾಲಿವುಡ್ ಸ್ಟುಡಿಯೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ವಿಘ್ನ ಎದುರಾದಂತೆ ಆಗಿದೆ. ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಂಡರೆ ಶೋ ನಿಲ್ಲುವ ಸಾಧ್ಯತೆ ಇರುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್​​ಗೆ ಬಿಗ್ ಬಾಸ್ ಆಯೋಜಕರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್