AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು?

Karnataka Television Producers: ಕಿರುತೆರೆ ನಿರ್ಮಾಪಕರ ಸಂಘವು ಕಲಾವಿದರಿಗೆ ಎಚ್ಚರಿಕೆ ನೀಡಿದೆ, ನಿರ್ಮಾಪಕರ ಬಗ್ಗೆ ಕ್ಷುಲ್ಲಕ ಹೇಳಿಕೆಗಳನ್ನು ನೀಡುವ, ಅಗೌರವದಿಂದ ಸಾರ್ವಜನಿಕ ಹೇಳಿಕೆ ನೀಡುವ ಕಲಾವಿದರ ವಿರುದ್ಧ ಸಂಘದ ನಿಯಮಾವಳಿಗಳ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ. ಕಿರುತೆರೆ ನಿರ್ಮಾಪಕರ ಸಂಘ (ಕೆಟಿಪಿಎ) ಈ ಬಗ್ಗೆ ವಿವರವಾದ ಹೇಳಿಕೆ ಬಿಡುಗಡೆ ಮಾಡಿದ್ದು, ನಟಿ ಹಂಸಾ, ಬಿಗ್​​ಬಾಸ್ ಸ್ಪರ್ಧಿ ಧ್ರುವಂತ್, ಬರಹಗಾರ ಸುಂದರ್ ಇನ್ನಿತರರ ಹೇಳಿಕೆಗಳನ್ನು ಖಂಡಿಸಿದೆ.

ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು?
Tv Producers
ಮಂಜುನಾಥ ಸಿ.
|

Updated on: Aug 07, 2026 | 4:48 PM

Share

ಕಿರುತೆರೆ ನಿರ್ಮಾಪಕರ (Television Producers) ಸಂಘವು ಕಲಾವಿದರಿಗೆ ಎಚ್ಚರಿಕೆ ನೀಡಿದೆ, ನಿರ್ಮಾಪಕರ ಬಗ್ಗೆ ಕ್ಷುಲ್ಲಕ ಹೇಳಿಕೆಗಳನ್ನು ನೀಡುವ, ಅಗೌರವದಿಂದ ಸಾರ್ವಜನಿಕ ಹೇಳಿಕೆ ನೀಡುವ ಕಲಾವಿದರ ವಿರುದ್ಧ ಸಂಘದ ನಿಯಮಾವಳಿಗಳ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ. ಕಿರುತೆರೆ ನಿರ್ಮಾಪಕರ ಸಂಘ (ಕೆಟಿಪಿಎ) ಈ ಬಗ್ಗೆ ವಿವರವಾದ ಹೇಳಿಕೆ ಬಿಡುಗಡೆ ಮಾಡಿದ್ದು, ನಟಿ ಹಂಸಾ, ಬಿಗ್​​ಬಾಸ್ ಸ್ಪರ್ಧಿ ಧ್ರುವಂತ್, ಬರಹಗಾರ ಸುಂದರ್ ಇನ್ನಿತರರ ಹೇಳಿಕೆಗಳನ್ನು ಖಂಡಿಸಿದೆ.

ಸಂಭಾವನೆ ಬಾಕಿ ಉಳಿಸಿಕೊಂಡ ನಿರ್ಮಾಪಕರ ವಿರುದ್ಧ ನಟಿ ಹಂಸಾ ಅವರು ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಉಲ್ಲೇಖಿಸಿರುವ ನಿರ್ಮಾಪಕರ ಸಂಘ, ‘ನಿರ್ಮಾಪಕರೊಬ್ಬರ ವಿರುದ್ಧ ಟಿವಿ ಮಾಧ್ಯಮಗಳಲ್ಲಿ ಕಿರುತೆರೆ ನಟಿ ಹಂಸ ಬಳಸಿದ ಭಾಷೆ ಅಸಮಂಜಸವಾಗಿದೆ. ಯಾವುದೇ ವೈಯಕ್ತಿಕ ಅಥವಾ ವೃತ್ತಿಪರ ಸಮಸ್ಯೆಗಳಿದ್ದರೂ ಅದನ್ನು ಸಂಘದ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಸಾರ್ವಜನಿಕವಾಗಿ ನಿರ್ಮಾಪಕರನ್ನು ನಿಂದಿಸುವ ಅಗತ್ಯ ಇರಲಿಲ್ಲ ಎಂದಿದೆ ಸಂಘ. ನಟ, ಮಾಜಿ ಬಿಗ್​​ಬಾಸ್ ಸ್ಪರ್ಧಿ ಧ್ರುವಂತ್ ನಿರ್ಮಾಪಕರ ಬಗ್ಗೆ ಬಳಸಿರುವ ಭಾಷೆಯ ಬಗ್ಗೆಯೂ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಕೆಲ ನಿರ್ಮಾಪಕರು, ಹೊಸ ಕಲಾವಿದರನ್ನು ಬಳಸಿಕೊಂಡು ಕಳಪೆ ಧಾರಾವಾಹಿ ನಿರ್ಮಿಸುತ್ತಿದ್ದಾರೆ ಎಂದು ಬರಹಗಾರ ಸುಂದರ್ ನೀಡಿರುವ ಹೇಳಿಕೆಗೆ ಉತ್ತರಿಸಿರುವ ನಿರ್ಮಾಪಕರ ಸಂಘ, ‘ಹಿರಿಯ ಕಲಾವಿದರು ಸಹ ಒಂದೊಮ್ಮೆ ಹೊಸ ಕಲಾವಿದರೇ ಆಗಿದ್ದರು. ಅವರಿಗೂ ಆಗ ನಿರ್ಮಾಪಕರು ಅವಕಾಶ ನೀಡಿದ್ದರು. ಕಾಲ ಕಾಲಕ್ಕೆ ಹೊಸ ಕಲಾವಿದರಿಗೆ ಅವಕಾಶ ನೀಡುವುದು ನಿರ್ಮಾಪಕರ ಜವಾಬ್ದಾರಿ ಅದನ್ನೇ ಮಾಡಲಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ:‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ

ನಟ ದಿಲೀಪ್ ರಾಜ್ ಸಾವಿನ ಸಂದರ್ಭದಲ್ಲಿ ಕೇಳಿ ಬಂದ ಕೆಲ ಆರೋಪಗಳಿಗೂ ಸ್ಪಷ್ಟನೆ ನೀಡಿರುವ ನಿರ್ಮಾಪಕರ ಸಂಘ, ‘ದಿಲೀಪ್ ರಾಜ್ ಸಾವಿಗೆ ವಾಹಿನಿಗಳು ನೀಡಿರುವ ಒತ್ತಡ ಕಾರಣ ಎನ್ನಲಾಗಿತ್ತು, ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಂಘ, ‘ಆಧಾರರಹಿತವಾಗಿ ಈ ರೀತಿಯ ಹೇಳಿಕೆಗಳನ್ನು ನೀಡಿದ್ದು ತಪ್ಪು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ