AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಬಿಗ್ ಬಾಸ್ ಮನೆಯಲ್ಲಿ ಕೊನೆಯ ದಿನಗಳಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಜಗಳ ಏರ್ಪಟ್ಟಿತ್ತು. ಇದನ್ನು ಅವರು ಮುಂದುವರಿಸಿಲ್ಲ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ -ನಮ್ರತಾ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್
ಕಾರ್ತಿಕ್-ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Feb 05, 2024 | 10:31 AM

Share

‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಗೌಡ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ಇಬ್ಬರೂ ಕೈ ಕೈ ಹಿಡಿದು ಸುತ್ತಾಡಿಕೊಂಡಿದ್ದರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಮಧ್ಯೆ ಇದ್ದ ಬಾಂಡಿಂಗ್ ಮುಂದುವರಿದಿದೆ. ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು ಕಾರ್ತಿಕ್. ಈ ವೇಳೆ ಕಾರ್ತಿಕ್ ಅವರು ನಮ್ರತಾನ ಅಂದ ಹೊಗಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾರ್ತಿಕ್ ಮಹೇಶ್ ಅವರು ನಮ್ರತಾ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದಾರೆ. ಬಿಗ್ ಬಾಸ್ ವೀಕ್ಷಕರಿಗೆ ಇದು ಗೊತ್ತಾಗಿತ್ತು. ಕೊನೆಯ ದಿನಗಳಲ್ಲಿ ಇಬ್ಬರ ಮಧ್ಯೆ ಜಗಳ ಏರ್ಪಟ್ಟಿತ್ತು. ಆದರೆ, ಇದನ್ನು ಅವರು ಮುಂದುವರಿಸಿಲ್ಲ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ ಹಾಗೂ ನಮ್ರತಾ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

ಇತ್ತೀಚೆಗೆ ಕಾರ್ತಿಕ್ ಮಹೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ನಮ್ರತಾನಾ ಸೇರ್ಪಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಮ್ರತಾ ಡ್ಯಾನ್ಸ್ ಕ್ಲಾಸ್​ನಲ್ಲಿ ಇದ್ದರು. ಆದರೂ ಅವರು ಕಾರ್ತಿಕ್​ಗೋಸ್ಕರ ಸಮಯ ಮಾಡಿಕೊಂಡಿದ್ದಾರೆ. ‘ಡ್ಯಾನ್ಸ್ ಕ್ಲಾಸ್​ನಲ್ಲಿ ಇದ್ದರೂ ಚೆನ್ನಾಗಿ ಕಾಣುತ್ತಾ ಇದೀರಾ. ಸೈಡ್​ಗೆ ತಿರುಗಿದ್ರಲ್ಲ ಆಗ ನಿಮ್ಮ ಮೂಗುಬೊಟ್ಟು ಚೆನ್ನಾಗಿ ಕಾಣುತ್ತಿತ್ತು’ ಎಂದರು ಕಾರ್ತಿಕ್. ‘ಇದನ್ನು ನಿಲ್ಲಿಸಿ’ ಎಂದರು ನಮ್ರತಾ.

ವೈರಲ್ ಆದ ವಿಡಿಯೋ

ಈ ವಿಡಿಯೋ ವೈರಲ್ ಆಗಿದೆ. ಕೆಲವರು ಸ್ನೇಹಿತ್ ಅವರನ್ನು ಎಳೆದು ತಂದಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಸ್ನೇಹಿತ್ ಹಾಗೂ ನಮ್ರತಾ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಈ ಗೆಳೆತನ ಉಳಿದುಕೊಂಡಿಲ್ಲ. ಹೀಗಾಗಿ, ಈ ವಿಡಿಯೋ ಕೊನೆಯಲ್ಲಿ ಸ್ನೇಹಿತ್ ಫೋಟೋ ಹಾಕಿ ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಕಲಾಗಿದೆ.

ಇದನ್ನೂ ಓದಿ: ಶೀಘ್ರವೇ ಬರಲಿದೆ ‘ಬಿಗ್ ಬಾಸ್ ಕನ್ನಡ’ ಒಟಿಟಿ ಸೀಸನ್? ಹುಟ್ಟಿದೆ ಹೀಗೊಂದು ಸುದ್ದಿ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮುಗಿದು ವಾರ ಕಳೆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆ ನಿಂತಿಲ್ಲ. ಹೀಗಿರುವಾಗಲೇ ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 2’ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಈ ಬಗ್ಗೆ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ