ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ
ಕಾವ್ಯಾ ಗೌಡ ಪತಿ ಸೋಮಶೇಖರ್ ಮೇಲೆ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ. ನಟಿ ಬಣ್ಣದ ಲೋಕದಿಂದ ದೂರವಿದ್ದರೂ, ಅವರ ಜನಪ್ರಿಯತೆಯನ್ನು ಸಹಿಸದೆ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಸಂಬಂಧಿ ರವಿಕುಮಾರ್ ಸೋಮಶೇಖರ್ ಮೇಲೆ ಹಲ್ಲೆ ನಡೆಸಿ, ಕಾವ್ಯಾ ಅವರಿಗೆ ಬೆದರಿಕೆ ಹಾಕಿದ್ದಾರೆ.

‘ಗಾಂಧಾರಿ’, ‘ರಾಧಾ ರಮಣ’ ಧಾರಾವಾಹಿಗಳಲ್ಲಿ (Serial Actress) ನಟಿಸಿರೋ ಕಾವ್ಯಾ ಗೌಡ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೆಲವು ಜಾಹೀರಾತುಗಳಲ್ಲಿ ಮಾತ್ರ ಮಿಂಚುತ್ತಿದ್ದಾರೆ. ಈಗ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಿರುವಾಗಲೇ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಿಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಟಿ ಕಾವ್ಯಾ ಗೌಡ ಅವರು ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದಾರೆ. ಸೋಮಶೇಖರ್ ಹಾಗೂ ನಂದೀಶ್ ಸಹೋದರರು. ಸೋಮಶೇಖರ್- ಕಾವ್ಯಾ ದಂಪತಿ ಮತ್ತು ನಂದೀಶ್ -ಪ್ರೇಮಾ ದಂಪತಿ ಒಂದೇ ಮನೆಯಲ್ಲಿ ವಾಸವಿದ್ದರು. ಇತ್ತೀಚೆಗೆ ಕಾವ್ಯಾ ಮತ್ತು ಪ್ರೇಮಾ ಮಧ್ಯೆ ಮನಸ್ತಾಪ ಆಗುತ್ತಲೇ ಇತ್ತು. ಇತ್ತೀಚೆಗೆ ಕಾವ್ಯಾ ಮತ್ತು ಪ್ರೇಮಾ ಸಂಬಂಧಿಕರು ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಗಲಾಟೆಯಾಗಿದೆ.
ಆಗ ಸಂಬಂಧಿ ರವಿಕುಮಾರ್, ಸೋಮಶೇಖರ್ ಮೇಲೆ ಹಲ್ಲೆ ಮಾಡಿದ್ದಾನೆ. ಮನೆಗೆ ನುಗ್ಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕಾವ್ಯಾ ಗೌಡಗೆ ರೇಪ್ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾನೆ. ಕಾವ್ಯಾ ಮೇಲೂ ಹಲ್ಲೆ ಮಾಡಲಾಗಿದೆ. ಸೋಮಶೇಖರ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾವ್ಯಾ ಅಕ್ಕ ಭವ್ಯಾ ಗೌಡ ಅವರು ಪ್ರೇಮ, ನಂದಿಶ್, ಪ್ರಿಯಾ, ರವಿಕುಮಾರ್ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಇದನ್ನೂ ಓದಿ: ಒಟ್ಟಿಗೆ ಎರಡೆರಡು ದುಬಾರಿ ಕಾರು ಖರೀದಿಸಿದ ಗೌತಮಿ ಜಾಧವ್
‘ನಿನ್ನನ್ನು ರೇಪ್ ಮಾಡ್ತೇನೆ’ ಎಂದು ಕಾವ್ಯಾಗೆ ರವಿಕುಮಾರ್ ಬೆದರಿಕೆ ಹಾಕಿರುವುದರಿಂದ ಅವರು ತುಂಬಾನೇ ನೊಂದಿದ್ದಾರೆ. ಮಾನಸಿಕವಾಗಿ ಅವರಿಗೆ ಹಿಂಸೆ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೌಂಟುಬಿಕ ಕಲಹ ಬೀದಿಗೆ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:49 am, Tue, 27 January 26



