
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ಗೆ (Bigg Boss) ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ವಿಚಾರ ಯಾವಾಗಲೂ ರಿವೀಲ್ ಆಗಿಲ್ಲ. ಪ್ರತಿಬಾರಿ ಸುದ್ದಿಗೋಷ್ಠಿ ಆಯೋಜನೆ ಆದಾಗ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಈ ಬಾರಿಯ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಸುದೀಪ್ ಅವರು ಇದಕ್ಕೆ ಜಾಣತನದ ಉತ್ತರ ನೀಡಿದ್ದಾರೆ. ಸುದೀಪ್ ಅವರು ಈ ಮೊದಲು ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಈಗ ಅವರು ನಿರ್ಧಾರವನ್ನು ಬದಲಿಸಿದ್ದಾರೆ.
ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಆದರೆ, ಅವರು ಇದು ವೈಯಕ್ತಿಕ ಎಂದರು. ಅಲ್ಲದೆ, ಈ ಪ್ರಶ್ನೆ ಉತ್ತರಿಸಲು ಸಾಧ್ಯವಿಲ್ಲ ಎಂದರು. ‘ಮನೆ ಬಾಡಿಗೆಗೆ ಹೋದರೆ 10 ಪರ್ಸೆಂಟ್ ಇನ್ಕ್ರಿಮೆಂಟ್ ಇರುತ್ತೆ. ನಾನು ಲೀಸ್ಗೂ ಅಲ್ಲ, ರೆಂಟ್ಗೂ ಅಲ್ಲ. ನಮ್ಮದೊಂದು ಇರುತ್ತೆ ತಾನೇ’ ಎಂದರು ಸುದೀಪ್.
‘ಟ್ವೀಟ್ ಮಾಡುವಾಗ ಸಂಭಾವನೆ ವಿಚಾರ ತಲೆಯಲ್ಲಿ ಇರಲಿಲ್ಲ. ಟ್ವೀಟ್ ಮಾಡದೆಯೂ ಸಂಭಾವನೆ ಹೆಚ್ಚು ಬೇಕು ಎಂದು ಕೇಳಬಹುದಲ್ಲ. ಅದು ಪಬ್ಲಿಕ್ನಲ್ಲಿ ಮಾತನಾಡುವ ವಿಚಾರ ಅಲ್ಲ. ಹಣ ಅನ್ನೋದು ಲಾಸ್ಟ್. ನಾನು ಸಿನಿಮಾದಲ್ಲಿ ಎಷ್ಟು ಸಂಭಾವನೆ ಪಡೆಯುತ್ತೇನೆ ಎಂಬ ಸರಿಯಾದ ಲೆಕ್ಕ ಯಾರಿಗೂ ಸಿದಲ್ಲ. ಏಕೆಂದರೆ ಪ್ರತಿ ಚಿತ್ರವೂ ಭಿನ್ನ, ಪ್ರತಿ ಚಿತ್ರದ ಬಜೆಟ್ ಕೂಡ ಬೇರೆ ಬೇರೆ ಇರುತ್ತದೆ’ ಎಂದು ಸುದೀಪ್ ಹೇಳಿದ್ದಾರೆ.
‘ನಾನು ರೇಟ್ ಕಟ್ಟೋಕೆ ಹೋಗಲ್ಲ. ನಾನು ಚೀಪ್ ಅಲ್ಲ. ದೊಡ್ಡ ಬಜೆಟ್ ಸಿನಿಮಾ ಇದ್ದಾಗ ನಾವು ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೊದಲ ಸೀಸನ್ನಲ್ಲಿ ಪಡೆದಿದ್ದ ಸಂಭಾವನೆಯನ್ನು ಈಗಲೂ ಪಡೆಯೋಕೆ ಆಗುತ್ತಾ? ಹೆಚ್ಚು ಬೇಕಾಗುತ್ತದೆ. ಪ್ರತಿ ಶೋಗೂ ಅದರದ್ದೇ ಆದ ಬಜೆಟ್ ಇರುತ್ತದೆ. ಸ್ಪರ್ಧಿಗಳಿಗೂ ಸಂಭಾವನೆ ಕೊಡಬೇಕು’ ಎಂದಿದ್ದಾರೆ ಅವರು.
ಇದನ್ನೂ ಓದಿ: ಬಿಗ್ ಬಾಸ್ ಬಗ್ಗೆ ಸುದೀಪ್ಗೆ ಇದ್ದ ಅಸಮಾಧಾನ ಏನು? ನೇರವಾಗಿ ವಿವರಿಸಿದ ಕಿಚ್ಚ
ಈ ಮೊದಲು ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಆ ಬಳಿಕ ಅವರು ಮನಸ್ಸು ಬದಲಿಸಿದ್ದಾರೆ. ಶೋನಲ್ಲಿ ಕನ್ನಡಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.