ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ

ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ
ಕಿಚ್ಚ ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 19, 2022 | 2:23 PM

ಕನ್ನಡದಲ್ಲಿ ಬಿಗ್ ಬಾಸ್ (Bigg Boss) ಆರಂಭ ಆದಾಗಿನಿಂದ ಕಿಚ್ಚ ಸುದೀಪ್ ಅವರೇ ಸಾರಥ್ಯ ವಹಿಸಿಕೊಂಡಿದ್ದಾರೆ. ಸ್ಪರ್ಧಿಗಳನ್ನು ಅವರು ಮನೆ ಸದಸ್ಯರಂತೆ ನೋಡುತ್ತಾರೆ. ಬಿಗ್ ಬಾಸ್​ನಿಂದ ಹೊರ ಬಂದ ನಂತರವೂ ಸ್ಪರ್ಧಿಗಳ ಜತೆ ಒಳ್ಳೆಯ ಬಾಂಧವ್ಯವನ್ನು ಅವರು ಮುಂದುವರಿಸುತ್ತಾರೆ. ಕೆಲ ಸೀಸನ್​ಗಳಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕೊಟ್ಟಿದ್ದರು. ಈ ಬಾರಿಯೂ ಅದು ಮುಂದುವರಿದೆ. ಈ ಬಾರಿ ಅವರು ಸ್ಪರ್ಧಿಗಳಿಗೆ ವಿವಿಧ ಬಗೆಯ ಅಡುಗೆ ಮಾಡಿ ಕಳುಹಿಸಿದ್ದಾರೆ.

‘ಕನ್ನಡ ಬಿಗ್ ಬಾಸ್ ಸೀಸನ್ 9’ ಸಾಕಷ್ಟು ಕುತೂಹಲ ಮೂಡಿಸಿದೆ. ಹಳೆಯ ಸ್ಪರ್ಧಿಗಳ ಜತೆ ಹೊಸ ಸ್ಪರ್ಧಿಗಳು ಬೆರೆತಿದ್ದಾರೆ. ಮನೆ ಆಗಾಗ ರಣರಂಗವಾದ ಉದಾಹರಣೆಯೂ ಇದೆ. ಅಡುಗೆ ವಿಚಾರದಲ್ಲಿ ಮನೆಯಲ್ಲಿ ಸಾಕಷ್ಟು ಬಾರಿ ಕಿತ್ತಾಟ ನಡೆದಿದೆ. ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಿಚ್ಚ ಸುದೀಪ್ ಅವರು ಕಿಚನ್​ನಲ್ಲಿ ಅಡುಗೆ ಮಾಡುತ್ತಿರುವುದು, ಮಾಡಿದ ಅಡುಗೆಯನ್ನು ಮನೆಯವರಿಗೆ ಕಳುಹಿಸಿದ್ದು, ಮನೆ ಮಂದಿ ಅದನ್ನು ಸವಿದು ರಿಯಾಕ್ಷನ್ ನೀಡಿದ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸ್ಪರ್ಧಿಗಳಂತೂ ಕಿಚ್ಚನ ಕೈರುಚಿ ಸವಿದು ಸಖತ್ ಖುಷಿಪಟ್ಟಿದ್ದಾರೆ.

ಈ ವಾರ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಆಟದಿಂದ ಎಲ್ಲರೂ ದಣಿದಿದ್ದಾರೆ. ಅಲ್ಲದೆ, ಮನೆಯಲ್ಲಿ ದಿನಸಿ ಕಡಿಮೆ ಇತ್ತು. ಇದು ಸ್ಪರ್ಧಿಗಳ ಚಿಂತೆ ಹೆಚ್ಚಿಸಿತ್ತು. ವಾರಾಂತ್ಯಕ್ಕೆ ಉಪವಾಸ ಇರುವ ಪರಿಸ್ಥಿತಿ ಬಂದೊದಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಕಿಚ್ಚ ಸುದೀಪ್ ಅವರ ಕೈರುಚಿ ಸವಿಯುವ ಅವಕಾಶ ಸ್ಪರ್ಧಿಗಳಿಗೆ ಸಿಕ್ಕಿದೆ.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿ ಒಪ್ಪಂದಗಳಿಗಿಲ್ಲ ಬೆಲೆ; ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ತೆಗೆದುಕೊಳ್ಳಲಿದ್ದಾರೆ ಕ್ಲಾಸ್?

ಕಳೆದ ವರ್ಷ ಬಿಗ್ ಬಾಸ್ ವೇಳೆ ಸ್ಪರ್ಧಿಗಳಿಗೆ ಇದೇ ರೀತಿಯ ಸದಾವಕಾಶ ಸಿಕ್ಕಿತ್ತು. ಸ್ಪರ್ಧಿಗಳಿಗೋಸ್ಕರ ಕಿಚ್ಚ ಸುದೀಪ್ ಅವರು ಅಡುಗೆ ಮಾಡಿ ಕಳುಹಿಸಿದ್ದರು. ಈ ವಾರ ಮನೆಯಲ್ಲಿ ಬಹುತೇಕರು ನಾಮಿನೇಟ್ ಆಗಿದ್ದಾರೆ. ಆ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ