AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಫೇಲ್ ಆದ್ರಿ’; ಸುದೀಪ್ ಮಾತಿಗೆ ಕಣ್ಣೀರು ಹಾಕಿದ ಆಸಿಯಾ

ಬಿಗ್ ಬಾಸ್ ಮನೆಯಲ್ಲಿ ಈ ವಾರ ಉಸ್ತುವಾರಿಯಾಗಿದ್ದ ಆಸಿಯಾ ಅವರು ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪ ಕೇಳಿಬಂತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಿಚ್ಚ ಸುದೀಪ್, ನೀವು ಉಸ್ತುವಾರಿಯಾಗಿ ಸಂಪೂರ್ಣವಾಗಿ ಫೇಲ್ ಆದ್ರಿ ಎಂದು ತರಾಟೆಗೆ ತೆಗೆದುಕೊಂಡರು. ಸುದೀಪ್ ಅವರ ಈ ಖಡಕ್ ಮಾತಿನಿಂದ ನೊಂದ ಆಸಿಯಾ ಕಣ್ಣೀರು ಹಾಕಿದರು.

‘ನೀವು ಫೇಲ್ ಆದ್ರಿ’; ಸುದೀಪ್ ಮಾತಿಗೆ ಕಣ್ಣೀರು ಹಾಕಿದ ಆಸಿಯಾ
ಆಸಿಯಾ-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 10, 2026 | 11:13 PM

Share

ಬಿಗ್ ಬಾಸ್ ಕನ್ನಡ ಸೀಸನ್‌ನಲ್ಲಿ ವಾರದ ಕಥೆಯ ವೀಕೆಂಡ್‌ ಸಂಚಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳ ತಪ್ಪುಗಳನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಅದರಲ್ಲೂ ಈ ಬಾರಿ ಮನೆಯ ಉಸ್ತುವಾರಿಯಾಗಿದ್ದ ಆಸಿಯಾ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುದೀಪ್, ನೀವು ಉಸ್ತುವಾರಿಯಾಗಿ ಫೇಲ್ ಆದ್ರಿ ಎಂದು ನೇರವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಆಸಿಯಾ ಅವರಿಗೆ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಗಿತ್ತು. ಅವರು ಉತ್ತರಮವಾಗಿ ಆಡಿದ್ದಾರೆ ಎಂದು ಮನೆಯವರು ಹೇಳಿದ್ದರು. ಆದರೆ, ಸುದೀಪ್ ಇದನ್ನು ಒಪ್ಪಿಲ್ಲ. ಮಂಜು ಕೆಟ್ಟದಾಗಿ ಮಾತನಾಡಿದ್ದನ್ನು ಅವರು ತಡೆಯಬೇಕಿತ್ತು ಎಂದರು.

ಆಸಿಯಾ ಆಟದ ಶೈಲಿ ಹಾಗೂ ಜವಾಬ್ದಾರಿ ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಗೂ ಸಮಾನ ಅವಕಾಶವಿರುವ ಮನೆಯಲ್ಲಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಆಸಿಯಾ ಮಾಡಿದ್ದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಗನ್ ತಾಯಿಗೆ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ಉಸ್ತುವಾರಿ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಆಸಿಯಾ ವಿಫಲರಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ ಸುದೀಪ್, ನೀವು ಈ ಜವಾಬ್ದಾರಿಯಲ್ಲಿ ಸಂಪೂರ್ಣವಾಗಿ ಫೇಲ್ ಆದ್ರಿ, ದೊಡ್ಡ ಅವಕಾಶವೊಂದನ್ನು ಕಳೆದುಕೊಂಡಿರಿ ಎಂದು ನೇರವಾಗಿ ಹೇಳಿದರು. ಅಲ್ಲದೆ, ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳದೆ ಅದಕ್ಕೆ ಸಮರ್ಥನೆಗಳನ್ನು ನೀಡಲು ಮುಂದಾದಾಗ, ಅದನ್ನು ಸಮರ್ಥಿಸಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದರು. ಸುದೀಪ್ ಅವರ ಈ ಖಡಕ್‌ ಮಾತಿನಿಂದ ಮನನೊಂದ ಆಸಿಯಾ ಬಿಗ್ ಬಾಸ್ ಮನೆಯಲ್ಲೇ ಕಣ್ಣೀರು ಹಾಕಿದರು.

‘ನಾನು ಯಾರಿಗೂ ಫೇವರಿಸಂ ಮಾಡಲ್ಲ’ ಎಂದು ಸುದೀಪ್ ಅವರು ಮತ್ತೊಮ್ಮೆ ಒತ್ತಿ ಹೇಳಿದರು. ಈ ವಿಷಯ ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ