ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

|

Updated on: Oct 13, 2024 | 10:55 PM

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಡುವೆಯೂ ಸುದೀಪ್​ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ
ಕಿಚ್ಚ ಸುದೀಪ್​
Follow us on

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ.

‘ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್

11ನೇ ಸೀಸನ್​ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್​ ಬಾಸ್​ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್​ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು. ಆದರೆ ಇದು ಅವರ ಕೊನೆಯ ಸೀಸನ್​ ಆಗುತ್ತಿದೆ. ‘ನೀವು ಇಲ್ಲದೇ ಬಿಗ್ ಬಾಸ್​ ಕಾರ್ಯಕ್ರಮವನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಸರಿಯಾದ ನಿರ್ಧಾರ’ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.