AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್

Kichcha Sudeep social service: ಸುದೀಪ್ ಅವರು ದಶಕಗಳಿಂದಲೂ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ. ಹೆಚ್ಚಿನ ಅಬ್ಬರಗಳಿಲ್ಲದೆ ಸರಳವಾಗಿ, ಅಗತ್ಯವಾದವರಿಗೆ ಅಗತ್ಯ ರೀತಿಯ ನೆರವುಗಳನ್ನು, ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇದೀಗ ಸುದೀಪ್ ಅವರು ತಮ್ಮ ಅಗಲಿದ ತಾಯಿಯವರ ನೆನಪಿನಲ್ಲಿ ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾಗಿದ್ದಾರೆ.

ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್
Sudeep Social Service1
ಮಂಜುನಾಥ ಸಿ.
|

Updated on:Aug 30, 2026 | 4:09 PM

Share

ಸುದೀಪ್ (Sudeep) ಅವರ ತಾಯಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಿಧನ ಹೊಂದಿದ್ದರು. ತಾಯಿಯ ಬಗ್ಗೆ ವಿಶೇಷ ಕಾಳಜಿ, ಗೌರವ ಮತ್ತು ಪ್ರೀತಿಗಳನ್ನು ಸುದೀಪ್ ಹೊಂದಿದ್ದರು. ತಾಯಿ ನಿಧನವಾಗುವ ಕೆಲ ದಿನಗಳ ಮುಂಚೆ ಸಹ ಬಿಗ್​​ಬಾಸ್ ವೇದಿಕೆಯಿಂದಲೇ ತಾಯಿಯೊಟ್ಟಿಗೆ ಮಾತನಾಡಿದ್ದರು. ತಾಯಿ ನಿಧನ ಹೊಂದಿದಾಗ ತೀವ್ರ ಭಾವುಕರಾಗಿದ್ದ ಸುದೀಪ್, ತಾಯಿಯ ಹೆಸರಲ್ಲಿ ಗಿಡಗಳನ್ನು ನೆಡುವ ಕಾರ್ಯ ಸೇರಿದಂತೆ ಇನ್ನಿತರೆ ಕೆಲ ಕಾರ್ಯಗಳನ್ನು ಮಾಡಿದ್ದರು. ಇದೀಗ ಸುದೀಪ್ ಅವರು, ತಮ್ಮ ತಾಯಿಯವರ ಸ್ಮರಣೆಯಲ್ಲಿ ನಾಲ್ಕು ಬಡ ಕುಟುಂಬಗಳಿಗೆ ಬೆಳಕಾಗಿದ್ದಾರೆ.

ಸುದೀಪ್ ಅವರು ನಾಲ್ಕು ಬಡ ಕುಟುಂಬಗಳನ್ನು ಗುರುತಿಸಿ ಅವರ ಜೀವನಾನುಕೂಲಕ್ಕಾಗಿ ಆಟೋಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಚ್ಚ ಸುದೀಪ್ ಅವರ ಅನುಪಸ್ಥಿತಿಯಲ್ಲಿ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಮತ್ತು ಅವರ ಅಕ್ಕನ ಮಗ ಸಂಚಿತ್ ಸಂಜೀವ್ ಅವರುಗಳು ಸುದೀಪ್ ಬದಲಿಗೆ ಬಡ ಕುಟುಂಬಗಳಿಗೆ ಆಟೋಗಳ ಕೀ ಹಸ್ತಾಂತರ ಮಾಡುವ ಜೊತೆಗೆ ಉಡುಗೊರೆಗಳನ್ನು ಸಹ ನೀಡಿ ಶುಭ ಹಾರೈಸಿದ್ದಾರೆ. ಈ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕುಟುಂಬಗಳು ಸಬಲರಾಗುವ ಅವಕಾಶವನ್ನು ಒದಗಿಸಿಕೊಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ವರ್ಷಗಳಿಂದಲೂ ಇಂಥ ಅರ್ಥಪೂರ್ಣ ಸಾಮಾಜಿಕ ಕಾರ್ಯವನ್ನು ಮಾಡುತ್ತಲೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಸಹ ತಮ್ಮ ಅಭಿಮಾನಿ ಸಂಘದ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಸುದೀಪ್ ಮಾಡಿದ್ದರು. ಶಾಲೆಯನ್ನು ದತ್ತು ತೆಗೆದುಕೊಳ್ಳುವ ಕಾರ್ಯವನ್ನೂ ಸಹ ಸುದೀಪ್ ಆಗ ಮಾಡಿದ್ದರು. ದಶಕಗಳಿಂದಲೂ ಸಹ ಸುದೀಪ್ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರೆಸುತ್ತಲೇ ಬಂದಿದ್ದಾರೆ.

ಇದನ್ನೂ ಓದಿ:ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಶುರು; ಅಧಿಕೃತವಾಗಿ ತಿಳಿಸಿದ ಕಿಚ್ಚ ಸುದೀಪ್

ಸುದೀಪ್ ಹುಟ್ಟುಹಬ್ಬ ಇನ್ನು ಕೆಲವೇ ದಿನಗಳಷ್ಟೆ ಇದೆ. ಈ ಬಾರಿ ಹುಟ್ಟುಹಬ್ಬಕ್ಕೆ ತಾವು ಅಭಿಮಾನಿಗಳ ಕೈಗೆ ಸಿಗುವುದಿಲ್ಲ ಆದರೆ, ಆ ದಿನ ಅಭಿಮಾನಿಗಳು ತಾವಿದ್ದ ಜಾಗದಲ್ಲಿಯೇ ಮಾಡುವ ಸಾಮಾಜಿಕ ಕಾರ್ಯಗಳು ತಮಗೆ ನೀಡಿದ ಆಶೀರ್ವಾದದಂತೆ ಎಂದಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳು ಸಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಅವರು ಸಂದೇಶ ನೀಡಿದ್ದಾರೆ. ತಾವು ಸಾಮಾಜಿಕ ಕಾರ್ಯ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿ ಆಗಿದ್ದು, ಅವರಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sun, 30 August 26

Follow Us
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ