AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೆಂಟ್​ಗೋಸ್ಕರ ಅತ್ತಿದ್ದೀನಿ; ಶಾಕಿಂಗ್ ಹೇಳಿಕೆ ನೀಡಿದ ಕಿಚ್ಚ ಸುದೀಪ್

ಬಿಗ್‌ಬಾಸ್ ವೇದಿಕೆಯಲ್ಲಿ ಕಣ್ಣೀರಿಟ್ಟಿದ್ದ ಕಿಚ್ಚ ಸುದೀಪ್ ತಾವು ಕಂಟೆಂಟ್ ಗೋಸ್ಕರ ಅತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾಯಿಯ ನೆನಪಾಗಿ ಅತ್ತಿರುವುದಾಗಿ ತಿಳಿಸಿರುವ ಸುದೀಪ್ ಅವರ ಈ ಭಾವನಾತ್ಮಕ ಮಾತುಗಳು ವೀಕ್ಷಕರ ಹಾಗೂ ಸ್ಪರ್ಧಿಗಳ ಕಣ್ಣಲ್ಲಿ ನೀರು ತರಿಸಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಂಟೆಂಟ್​ಗೋಸ್ಕರ ಅತ್ತಿದ್ದೀನಿ; ಶಾಕಿಂಗ್ ಹೇಳಿಕೆ ನೀಡಿದ ಕಿಚ್ಚ ಸುದೀಪ್
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 11, 2026 | 9:45 PM

Share

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್ ರಿಯಾಲಿಟಿ ಶೋನ ಶನಿವಾರದ ಪಂಚಾಯ್ತಿ ಎಪಿಸೋಡ್‌ನಲ್ಲಿ ಭಾವುಕರಾಗಿದ್ದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಶನಿವಾರದ ಸಂಚಿಕೆಯಲ್ಲಿ ಕಣ್ಣೀರಿಟ್ಟಿದ್ದ ಸುದೀಪ್, ಭಾನುವಾರದ ಸಂಚಿಕೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಅಸಲಿ ವಿಷಯವನ್ನು ಬಿಚ್ಚಿಟ್ಟಿದ್ದಾರೆ.

ಭಾನುವಾರದ ಎಪಿಸೋಡ್‌ನಲ್ಲಿ ಸ್ಪರ್ಧಿ ತಾಂಡವ್ ರಾಮ್ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ‘ನಿಮ್ಮ ಕಣ್ಣಲ್ಲಿ ನೀರು ಹಾಕಿಸಿದ್ದಕ್ಕೆ ನಮಗೆ ಬೇಸರವಾಗುತ್ತಿದೆ’ ಎಂದರು. ಇದಕ್ಕೆ ಉತ್ತರಿಸಿದ ಕಿಚ್ಚ ಸುದೀಪ್, ‘ನಾನು ಕಂಟೆಂಟ್​​ಗೋಸ್ಕರ ಅತ್ತಿದ್ದು, ಅಳಬೇಕು ಅಂತ ಅತ್ತಿದ್ದಲ್ಲ’ ಎಂದು ಹೇಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದರು.

ಸುದೀಪ್ ಅವರ ಈ ಮಾತನ್ನು ಕೇಳಿ ಮನೆಯಲ್ಲಿದ್ದ ಸ್ಪರ್ಧಿಗಳು ಒಮ್ಮೆ ಶಾಕ್ ಆದರು. ತಕ್ಷಣವೇ ಅಸಲಿ ಕಾರಣವನ್ನು ವಿವರಿಸಿದ ಸುದೀಪ್, ‘ನಾನು ಅತ್ತಿದ್ದು ತಾಯಿ ನೆನಪಾಗಿ. ಎಲ್ಲರೂ ಒಂದು ದಿನ ತಮ್ಮ ತಾಯಿಯನ್ನು ಕಳೆದುಕೊಳ್ಳುತ್ತಾರೆ. ಆಗ ಎಲ್ಲರಿಗೂ ಇದರ ನೋವು ಗೊತ್ತಾಗುತ್ತದೆ’ ಎಂದು ಕಣ್ಣೀರಿನ ಹಿಂದಿನ ನಿಜವಾದ ಭಾವನೆಯನ್ನು ಹಂಚಿಕೊಂಡರು.

ಇದನ್ನೂ ಓದಿ: ‘ಫೇವರಿಸಂ ಮಾಡಲ್ಲ’; ಬಿಗ್ ಬಾಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ತಾಂಡವ್-ಗಗನ್​ಗೆ ಕಿಚ್ಚ ಸುದೀಪ್ ಕ್ಲಾಸ್

ತಾಯಿಯ ನೆನಪು ಹಾಗೂ ಅಗಲಿಕೆಯ ನೋವು ಎಲ್ಲರಿಗೂ ಸಾಮಾನ್ಯ ಎಂಬ ಸುದೀಪ್ ಅವರ ಈ ನುಡಿಗಳು ವೀಕ್ಷಕರ ಮನಸ್ಸನ್ನು ಭಾರವಾಗಿಸಿತು ಮತ್ತು ಬಿಗ್‌ಬಾಸ್ ವೇದಿಕೆಯಲ್ಲಿ ಮತ್ತೊಮ್ಮೆ ಭಾವುಕ ವಾತಾವರಣ ನಿರ್ಮಾಣವಾಯಿತು. ಕಿಚ್ಚ ಸುದೀಪ್ ಅವರು ತಮ್ಮ ತಾಯಿಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಬಳಿಕ ಅವರು ಸಾಕಷ್ಟು ನೋವು ತಿಂದಿದ್ದಾರೆ. ಹಲವು ಸಂದರ್ಭದಲ್ಲಿ ಅವರು ತಾಯಿಯನ್ನು ನೆನಪು ಮಾಡಿಕೊಂಡು ಅತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ