ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಅವರು ಈ ಬಾರಿ ಬಿಗ್ ಬಾಸ್​ನಿಂದ ಹೊರ ಹೋಗುತ್ತಾರೆ ಎಂದು ಹೇಳಲಾಗಿತ್ತು. ಈ ಬೆನ್ನಲ್ಲೇ ಪ್ರೋಮೋದಲ್ಲಿ ಬದಲಾವಣೆ ಮಾಡಲಾಗಿದೆ.

ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Sep 10, 2024 | 6:50 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ ನೋಡಲು ವೀಕ್ಷಕರು ಕಾದು ಕೂತಿದ್ದಾರೆ. ಈ ಬಾರಿ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಬಲವಾಗಿ ಕಾಡುತ್ತಿದೆ. ಕಿಚ್ಚ ಸುದೀಪ್ ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದರು. ಇನ್ನೂ ಮಾತುಕತೆ ನಡೆಯುತ್ತಿದೆ ಎಂದಿದ್ದರು. ಸುದೀಪ್ ಬರುತ್ತಾರೆ ಎಂದು ಕಾದು ಕೂತವರಿಗೆ ಕಲರ್ಸ್ ಕನ್ನಡ ಶಾಕ್ ಕೊಟ್ಟಿದೆ. ಸುದೀಪ್ ಬರೋದು ಅನುಮಾನವಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ವಾರದ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ರಿಲೀಸ್ ಆಗಿತ್ತು. ಈ ಪ್ರೋಮೋದಲ್ಲಿ ಕೇವಲ ಲೋಗೋ ಇತ್ತು. ಅಲ್ಲದೆ, ಹೊಸ ಸೀಸನ್ ಶೀಘ್ರವೇ ಆರಂಭ ಆಗಲಿದೆ ಎಂದು ಬರೆಯಲಾಗಿತ್ತು. #KichchaSudeep ಎಂದು ಬರೆಯುವ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಲಾಗಿತ್ತು. ಸುದೀಪ್ ಈ ಸೀಸನ್​ನಲ್ಲಿ ಇರುತ್ತಾರೆ ಅನ್ನೋದು ಬಹುತೇಕ ಖಚಿತವಾಯಿತು. ಆದರೆ, ಈಗ ಈ ಹ್ಯಾಶ್​ಟ್ಯಾಗ್ ತೆಗೆಯಲಾಗಿದೆ.

ಬಿಗ್ ಬಾಸ್ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಇನ್​ಸ್ಟ್ರಾಗ್ರಾಮ್​ನಲ್ಲಿ ಪಿನ್ ಮಾಡಿ ಇಟ್ಟಿದೆ. ಈ ವಿಡಿಯೋಗೆ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಈಗ ಒಂದು ದಿನದ ಹಿಂದೆ ಈ ಪ್ರೋಮೋದ ಕ್ಯಾಪ್ಶನ್ ಎಡಿಟ್ ಮಾಡಲಾಗಿದ್ದು, ಸುದೀಪ್ ಹ್ಯಾಶ್​ಟ್ಯಾಗ್ ಕಾಣೆಯಾಗಿದೆ.

ಇದನ್ನೂ ಓದಿ: ‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು

ಸುದೀಪ್ ಅವರು ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಒಟ್ಟಿಗೆ ಅವರು ಮೂರ್ನಾಲ್ಕು ಸಿನಿಮಾ ಮಾಡುವ ಭರವಸೆ ನೀಡಿದ್ದಾರೆ. ಇಷ್ಟೊಂದು ಸಿನಿಮಾ ಕೆಲಸಗಳು ಇರುವಾಗ ಅವರಿಗೆ ಬಿಗ್ ಬಾಸ್ ನಿರೂಪಣೆ ಮಾಡಲು ಸಾಧ್ಯವಿಲ್ಲ ಎಂದೆನಿಸಿತೋ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ. ಇತ್ತೀಚೆಗೆ ತಮಿಳು ಬಿಗ್ ಬಾಸ್​ಗೆ ಹೊಸ ನಿರೂಪಕನ ಆಗಮನ ಆಗಿದೆ. ಕಮಲ್ ಹಾಸನ್ ಬದಲು ವಿಜಯ್ ಸೇತುಪತಿ ಅವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ