ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’: ಬಂತು ಹೊಸ ಪ್ರೋಮೋ
ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ವೀಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಸುದೀಪ್ ಅವರ ಗೆಟಪ್ ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಸೆಪ್ಟೆಂಬರ್ 28ರ ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ಆಗಲಿದೆ.

ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್ ರಿಯಾಲಿಟಿ ಶೋ ಎಂದರೆ ಸಖತ್ ಇಷ್ಟ. ಈಗಾಗಲೇ ಕನ್ನಡದಲ್ಲಿ 11 ಸೀಸನ್ಗಳು ಯಶಸ್ವಿಯಾಗಿ ಮುಗಿದಿವೆ. ಈಗ 12ನೇ ಸೀಸನ್ (Bigg Boss Kannada 12) ಆರಂಭಕ್ಕೆ ದಿನಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೀಘ್ರದಲ್ಲೇ ಆರಂಭ ಆಗಲಿದೆ. ಕಿಚ್ಚ ಸುದೀಪ್ (Kichcha Sudeep) ಅವರು ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆಗಲಿದ್ದು, ಈಗ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಂದಿದೆ.
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾಗಾಗಿ ಉದ್ದ ಕೂದಲು ಬಿಟ್ಟಿದ್ದಾರೆ. ಅವರ ಈ ಹೇರ್ ಸ್ಟೈಲ್ ಎಲ್ಲರಿಗೂ ಇಷ್ಟ ಆಗಿದೆ. ಅದೇ ಗೆಟಪ್ನಲ್ಲಿ ಅವರು ಬಿಗ್ ಬಾಸ್ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದಾರೆ. ‘ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರೋಮೋ ಹಂಚಿಕೊಳ್ಳಲಾಗಿದೆ.
‘ಕರ್ನಾಟಕದಲ್ಲಿ ಸಖತ್ ವೈವಿದ್ಯತೆ ಇದೆ. ಊಟ, ಉಡುಗೆ, ಅಭಿರುಚಿಯಲ್ಲೂ ತುಂಬ ವೈವಿದ್ಯತೆ ಇದೆ. ಕೆಲವರಿಗೆ ಸುದ್ದಿ ಇಷ್ಟ, ಇನ್ನು ಕೆಲವರಿಗೆ ಸಿನಿಮಾ ಇಷ್ಟ. ಮತ್ತೆ ಕೆಲವರಿಗೆ ಕ್ರೀಡೆ ಇಷ್ಟ. ಆದರೆ ಎಲ್ಲರನ್ನೂ ಒಂದಾಗಿಸುವ ಶಕ್ತಿ ಇರುವುದು ಬಿಗ್ ಬಾಸ್ ಶೋಗೆ ಮಾತ್ರ’ ಎಂದು ಈ ಪ್ರೋಮೋದಲ್ಲಿ ಹೇಳಲಾಗಿದೆ. ವೀಕ್ಷಕರಿಗೆ ಹೊಸ ಪ್ರೋಮೋ ಇಷ್ಟ ಆಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ ಪ್ರೋಮೋ:
View this post on Instagram
‘ನನ್ನ ಪ್ರೀತಿಯ ಸಮಸ್ತ ಕನ್ನಡಿಗರ ಕುಟುಂಬಕ್ಕೆ ಸ್ವಾಗತ’ ಎಂಬ ಧ್ವನಿಯೊಂದಿಗೆ ಕಿಚ್ಚ ಸುದೀಪ್ ಅವರು ಎಂಟ್ರಿ ನೀಡಿದ್ದಾರೆ. ಅವರನ್ನು ಪ್ರೋಮೋದಲ್ಲಿ ನೋಡಿ ಅಭಿಮಾನಿಗಳಿಗೆ ಬಹಳ ಖುಷಿ ಆಗಿದೆ. ‘ಹೊಸ ಸೆಟ್ ರೆಡಿ ಆಗಿದೆ, ಹೊಸ ಸ್ಪರ್ಧಿಗಳು ಕೂಡ ರೆಡಿ, 7 ಕೋಟಿ ಕನ್ನಡಿಗರೂ ರೆಡಿ. ಸರ್ ನೀವು ರೆಡಿನಾ’ ಎಂದು ಸುದೀಪ್ ಅವರಿಗೆ ಕೇಳಲಾಗಿದೆ. ಎಂದಿನ ಗತ್ತಿನಲ್ಲಿ ಸುದೀಪ್ ಕೂಡ ‘ರೆಡಿ..’ ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇದನ್ನೂ ಓದಿ: ನಟ್ಟು ಬೋಲ್ಟು ವಿವಾದಕ್ಕೆ ಸಾಧು ಕೋಕಿಲ ಕಿತಾಪತಿ ಕಾರಣ: ಸುದೀಪ್ ನೇರ ಮಾತು
ಸೆಪ್ಟೆಂಬರ್ 28ರ ಭಾನುವಾರದಂದು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರಬಹುದು ಎಂಬುದರ ಲೆಕ್ಕಾಚಾರ ಈಗಲೇ ಶುರುವಾಗಿದೆ. ಸುದೀಪ್ ಅವರು ‘ಮಾರ್ಕ್’ ಮತ್ತು ‘ಬಿಲ್ಲ ರಂಗ ಭಾಷಾ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಅವರು ಬಿಗ್ ಬಾಸ್ ಶೋ ನಡೆಸಿಕೊಡಲು ಸಜ್ಜಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




