ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಪ್ರಶಾಂತ್ ಸಂಬರ್ಗಿ ಅವರನ್ನು ಕನ್ನಡ ಪರ ಹೋರಾಟಗಾರರಿಗೆ ಇತ್ತೀಚೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2022 | 9:38 PM

ತಪ್ಪು ಮಾಡಿದ ಸ್ಪರ್ಧಿಗಳಿಗೆ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಕ್ಲಾಸ್ ತೆಗೆದುಕೊಳ್ಳುತ್ತಾರೆ. ಅವರು ಸಿಟ್ಟಲ್ಲಿ ಖಡಕ್ ಎಚ್ಚರಿಕೆ ನೀಡೋದು ವೀಕ್ಷಕರಿಗೆ ಇಷ್ಟ ಆಗುತ್ತದೆ. ಈ ವಾರ ಕಿಚ್ಚ ಸುದೀಪ್ ಅವರು ಅನುಪಮಾ ಗೌಡ ಹಾಗೂ ಪ್ರಶಾಂತ್ ಸಂಬರ್ಗಿಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಬ್ಬರಿಗೂ ಅವರು ಹಲವು ವಿಚಾರಕ್ಕೆ ಪಾಠ ಮಾಡಿದ್ದಾರೆ. ಶನಿವಾರದ (ನವೆಂಬರ್ 5) ಎಪಿಸೋಡ್​ನಲ್ಲಿ ಸುದೀಪ್ ಖಡಕ್ ಎಚ್ಚರಿಕೆ ಹೈಲೈಟ್ ಆಗಿದೆ.

ಪ್ರಶಾಂತ್​ಗೆ ಪಾಠ

ಪ್ರಶಾಂತ್ ಸಂಬರ್ಗಿ ಅವರುಇತ್ತೀಚೆಗೆ ಕನ್ನಡ ಪರ ಹೋರಾಟಗಾರರಿಗೆ  ಅವಮಾನ ಮಾಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಈ ವಿಚಾರಕ್ಕೆ ಪ್ರಶಾಂತ್ ಸಂಬರ್ಗಿ ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ‘ಕೋಪದಲ್ಲಿ ಒಂದು ಮಾತು ಬರುತ್ತೆ, ಹೋಗುತ್ತೆ. ಆದರೆ, ಅದು ವೀಕ್ಷಕರ ಭಾವನೆಗೆ ನೋವಾಗಬಾರದು. ನೀವು ಮನೆಯ ಒಳಗಿನ ವಿಚಾರ ಚರ್ಚೆ ಮಾಡಿ ತಪ್ಪಿಲ್ಲ. ಆದರೆ, ಹೊರಗಿನ ವಿಚಾರ ಎಳೆದು ತರಬೇಡಿ. ಮನೆ ಹೊರಗೆ ನಿಮ್ಮ ಮಧ್ಯೆ ಏನೇ ಇರಬಹುದು. ಆದರೆ, ಇದನ್ನು ಒಳಗೆ ಚರ್ಚಿಸಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ ಸುದೀಪ್.

ಅನುಪಮಾ ಗೌಡ ಸುದೀಪ್ ಪಾಠ

ಅನುಪಮಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಅವರು ಫೇವರಿಸಂ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ಅನುಪಮಾ ಗೌಡ ವಿರೋಧ ವ್ಯಕ್ತಪಡಿಸಿದ್ದರು. ನನ್ನಿಂದ ಆ ರೀತಿ ಆಗಿಲ್ಲ ಎಂದು ಅನುಪಮಾ ಗೌಡ ಹೇಳುತ್ತಲೇ ಬಂದಿದ್ದರು. ಇನ್ನು, ಬಿಗ್ ಬಾಸ್ ಮನೆಯಲ್ಲಿ ಈ ವಾರದ ಟಾಸ್ಕ್​​ನಲ್ಲಿ ಅನುಪಮಾ ತಮ್ಮದೇ ರೂಲ್ಸ್ ಮಾಡಿದ್ದಾರೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಸುದೀಪ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಮೊದಲು ನೀವು ಅಪೀಲ್ ಮಾಡಿ ಅಂದಾಗ ಮಾಡಿಲ್ಲ. ಅರುಣ್ ಅವರು ಕೇಳಿದಾಗ ನೀವು ಅಪೀಲ್ ಮಾಡಿದಿರಿ. ಒಬ್ಬರಿಗೊಂದು ಮಾಡಿದ್ರಿ, ಮತ್ತೊಬ್ಬರಿಗೊಂದು ಮಾಡಿದ್ರಿ ಎಂದು ಅನಿಸಿಯೇ ಅನಿಸುತ್ತದೆ’ ಎಂದು ಸುದೀಪ್ ಹೇಳಿದರು. ಅನುಪಮಾಗೆ ತಾವು ಮಾಡಿದ್ದು ತಪ್ಪು ಎನ್ನುವ ವಿಚಾರ ಗೊತ್ತಾಗಿದೆ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ