AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರು ಧ್ವನಿಯಲ್ಲಿ ಮಾತಾಡುತ್ತಿದ್ದ ಕಾಕ್ರೋಚ್ ಸುಧಿ: ಖಡಕ್ ತಿರುಗೇಟು ಕೊಟ್ಟ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ವೀಕೆಂಡ್ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡರು. ಟಾಸ್ಕ್ ರದ್ದಾದ ಬಳಿಕ ಏರು ಧ್ವನಿಯಲ್ಲಿ ಮಾತನಾಡಿದ್ದ ಕಾಕ್ರೋಚ್ ಸುಧಿ ಅವರಿಗೆ ಸುದೀಪ್ ತಿರುಗೇಟು ನೀಡಿದರು. ಅಲ್ಲದೇ ಇನ್ನುಳಿದ ಸ್ಪರ್ಧಿಗಳಿಗೂ ಸುದೀಪ್ ಅವರು ಎಚ್ಚರಿಕೆ ನೀಡಿದರು. ಶನಿವಾರದ ಸಂಚಿಕೆ ಬಗ್ಗೆ ಇಲ್ಲದೆ ವಿವರ..

ಏರು ಧ್ವನಿಯಲ್ಲಿ ಮಾತಾಡುತ್ತಿದ್ದ ಕಾಕ್ರೋಚ್ ಸುಧಿ: ಖಡಕ್ ತಿರುಗೇಟು ಕೊಟ್ಟ ಸುದೀಪ್
Cockroach Sudhi, Kichcha Sudeep (1)
ಮದನ್​ ಕುಮಾರ್​
|

Updated on: Oct 05, 2025 | 10:11 AM

Share

ನಟ ಕಾಕ್ರೋಚ್ ಸುಧಿ (Cockroach Sudhi) ಅವರು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಫೇಮಸ್ ಆಗಿದ್ದಾರೆ. ಹೀರೋಗಳ ಎದುರು ಅವರು ವಿಲನ್ ಆಗಿ ಅಬ್ಬರಿಸಿದ್ದಾರೆ. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಕೂಡ ಅವರು ಅಬ್ಬರಿಸುತ್ತಿದ್ದಾರೆ. ಸಂದರ್ಭ ಬಂದಾಗಲೆಲ್ಲ ಏರುಧ್ವನಿಯಲ್ಲಿ ಮಾತನಾಡುತ್ತಿದ್ದಾರೆ. ಆದರೆ ತಮ್ಮ ತಪ್ಪು ಇದ್ದಾಗಲೇ ಏರುಧ್ವನಿಯಲ್ಲೇ ಮಾತನಾಡಲು ಬಂದ ಕಾಕ್ರೋಚ್ ಸುಧಿಗೆ ಕಿಚ್ಚ ಸುದೀಪ್ (Kichcha Sudeep)  ಅವರು ಖಡಕ್ ತಿರುಗೇಟು ನೀಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಹೇಗಿರಬೇಕು ಎಂಬ ಪಾಠವನ್ನು ಸುದೀಪ್ ಅವರು ಮಾಡಿದ್ದಾರೆ.

ಅಷ್ಟಕ್ಕೂ ಕಿಚ್ಚ ಸುದೀಪ್ ಅವರು ಗರಂ ಆಗಲು ಕಾರಣ ಇದೆ. ಮೊದಲ ವಾರದಲ್ಲಿ ಸ್ಪರ್ಧಿಗಳಿಗೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಆದರೆ ಆ ಟಾಸ್ಕ್​​ನ ನಿಯಮಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ಪರ್ಧಿಗಳು ವಿಫಲರಾದರು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದರಿಂದ ಆಟ ಅರ್ಧಕ್ಕೆ ನಿಂತಿತು. ಅಂತಿಮವಾಗಿ ಟಾಸ್ಕ್ ರದ್ದಾಯಿತು. ಆಗ ಕಾಕ್ರೋಚ್ ಸುಧಿ ಅವರು ಕೂಗಾಡಿದ್ದರು.

ಟಾಸ್ಕ್ ರದ್ದಾಗಿದ್ದಕ್ಕೆ ಉಸ್ತುವಾರಿ ಹಾಗೂ ಇತರ ಸ್ಪರ್ಧಿಗಳೇ ಕಾರಣ ಎಂದು ಕಾಕ್ರೋಚ್ ಸುಧಿ ಅವರು ಗರಂ ಆಗಿ ಮಾತನಾಡಿದ್ದರು. ಆ ಬಗ್ಗೆ ವಾರದ ಪಂಚಾಯ್ತಿಯಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡರು. ಆಗಲೂ ಕೂಡ ಸುಧಿ ಅವರು ತಮ್ಮನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಕಿಚ್ಚ ಸುದೀಪ್ ಅವರು ತಮ್ಮದೇ ಶೈಲಿಯಲ್ಲಿ ಬುದ್ದಿ ಹೇಳಿ ಸುಧಿಯ ವಾಲ್ಯೂಮ್ ಕಡಿಮೆ ಆಗುವಂತೆ ಮಾಡಿದರು.

‘ಏರುಧ್ವನಿಯಲ್ಲಿ ವಾದ ಮಾಡುವುದಲ್ಲ. ಮಾಡುವ ವಾದದಲ್ಲಿ ಸತ್ವ ಇದ್ದರೆ ಏರುಧ್ವನಿಯ ಅಗತ್ಯವೇ ಇಲ್ಲ’ ಎಂಬುದನ್ನು ಸುದೀಪ್ ಅವರು ಅರ್ಥ ಮಾಡಿಸಿದರು. ಬಿಗ್ ಬಾಸ್ ಮನೆಗೆ ಕಾಲಿಡುವಾಗ ಕಾಕ್ರೋಚ್ ಸುಧಿ ಅವರು ದೊಡ್ಡ ದೊಡ್ಡ ಡೈಲಾಗ್ ಹೊಡೆದಿದ್ದರು. ‘ನನ್ನನ್ನು ನಾನು ನೋಡಿಕೊಳ್ಳಲು ಬಿಗ್ ಬಾಸ್ ಬೇಕಿಲ್ಲ. ನನ್ನನ್ನು ಜಗತ್ತಿಗೆ ತೋರಿಸಲು ಇಲ್ಲಿಗೆ ಬಂದಿದ್ದೇನೆ’ ಎಂಬರ್ಥದಲ್ಲಿ ಅವರು ಮಾತನಾಡಿದ್ದರು. ಆದರೆ ಒಂದು ವಾರ ಕಳೆದರೂ ಕೂಡ ಸುಧಿ ಅವರು ನುಡಿದಂತೆ ನಡೆದುಕೊಂಡಿಲ್ಲ ಎಂಬುದನ್ನು ಕಿಚ್ಚ ಸುದೀಪ್ ನೆನಪಿಸಿದ್ದಾರೆ.

ಇದನ್ನೂ ಓದಿ: ಎಲ್ಲ ಸ್ಪರ್ಧಿಗಳನ್ನು ಮನೆಗೆ ಕಳಿಸಬಹುದು: ಸುಳಿವು ಕೊಟ್ಟ ಸುದೀಪ್

ಮೊದಲ ವಾರದ ಟಾಸ್ಕ್ ರದ್ದಾಗುವಲ್ಲಿ ಕಾಕ್ರೋಚ್ ಸುಧಿ ಮಾತ್ರವಲ್ಲದೇ ಬೇರೆ ಸ್ಪರ್ಧಿಗಳ ಹೊಣೆ ಕೂಡ ಇದೆ. ಹಾಗಾಗಿ ಎಲ್ಲರಿಗೂ ಸುದೀಪ್ ಅವರು ವಾರ್ನಿಂಗ್ ನೀಡಿದರು. ಒಂದು ಟಾಸ್ಕ್ ರೂಪಿಸುವುದರ ಹಿಂದೆ ಬಿಗ್ ಬಾಸ್ ತಂಡದ ಶ್ರಮ ಇರುತ್ತದೆ. ಮುಂದಿನ ದಿನಗಳಲ್ಲಿ ಮತ್ತೆ ಮತ್ತೆ ಟಾಸ್ಕ್ ರದ್ದಾದರೆ ಅದರ ಪರಿಣಾಮ ಬೇರೆ ರೀತಿ ಇರುತ್ತದೆ ಎಂದು ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ