AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಮೂಲ ನಿಯಮ ಮುರಿದ ಕಿರಣ್ ಶಾಸ್ತ್ರಿಗೆ ಕಠಿಣ ಶಿಕ್ಷೆ

ಕಿರಣ್ ಶಾಸ್ತ್ರಿ ಅವರು ಪದೇ ಪದೇ ಬಿಗ್ ಬಾಸ್ ಮನೆಯಲ್ಲಿ ಮೂಲ ನಿಯಮವನ್ನು ಮುರಿದಿದ್ದಾರೆ. ಹಾಗಾಗಿ ಅವರಿಗೆ ಶಿಕ್ಷೆ ನೀಡಲಾಗಿದೆ. ಶಿಕ್ಷೆ ನೀಡಿದ ಬಳಿಕ ಕಿರಣ್ ಶಾಸ್ತ್ರಿ ಅವರು ಗಳಗಳನೆ ಅತ್ತಿದ್ದಾರೆ. ಅಲ್ಲದೇ, ಶಿಕ್ಷೆ ಪಾಲಿಸುವ ಬದಲು ಇನ್ನುಳಿದ ಸ್ಪರ್ಧಿಗಳ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಪ್ಲ್ಯಾನ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಮೂಲ ನಿಯಮ ಮುರಿದ ಕಿರಣ್ ಶಾಸ್ತ್ರಿಗೆ ಕಠಿಣ ಶಿಕ್ಷೆ
Kiran ShastriImage Credit source: Colors Kannada
ಮದನ್​ ಕುಮಾರ್​
|

Updated on: Sep 17, 2026 | 10:37 PM

Share

‘ಬಿಗ್ ಬಾಸ್ ಕನ್ನಡ’ ಶೋನಲ್ಲಿ ಕೆಲವು ಮೂಲ ನಿಯಮಗಳು ಇವೆ. ಅದರಲ್ಲಿ ಮುಖ್ಯವಾಗಿದ್ದು ಏನೆಂದರೆ, ಲೈಟ್ ಆಫ್ ಆಗುವುದಕ್ಕೂ ಮುನ್ನ ಯಾರೂ ನಿದ್ರೆ ಮಾಡುವಂತಿಲ್ಲ. ಒಂದು ವೇಳೆ ಈ ನಿಯಮ ಮುರಿದರೆ ಶಿಕ್ಷೆ ನೀಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಲೈಟ್ ಆಫ್ ಆಗುವುದಕ್ಕೂ ಮುನ್ನ ಕಿರಣ್ ಶಾಸ್ತ್ರಿ ನಿದ್ರೆ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಹಾಗಾಗಿ ಅವರಿಗೆ ಶಿಕ್ಷೆ ನೀಡಲಾಗಿದೆ.

ಸ್ಪರ್ಧಿಗಳು ಪದೇಪದೇ ನಿದ್ರೆ ಮಾಡಿರುವುದು ಬಿಗ್ ಬಾಸ್ ಗಮನಕ್ಕೆ ಬಂದಿದೆ. ಆದ್ದರಿಂದ ಸ್ಪರ್ಧಿಗಳು ತಮ್ಮಲ್ಲೇ ಚರ್ಚಿಸಿ ಇಬ್ಬರು ತಪ್ಪಿತಸ್ತರ ಹೆಸರನ್ನು ತಿಳಿಸುವಂತೆ ಸೂಚಿಸಲಾಯಿತು. ಎಲ್ಲರೂ ಸೇರಿ ಕಿರಣ್ ಶಾಸ್ತ್ರಿ ಮತ್ತು ಲಿಖಿತ್ ಹೆಸರನ್ನು ಅಂತಿಮಗೊಳಿಸಿದರು. ಹಾಗಾಗಿ ಈ ಇಬ್ಬರು ಸ್ಪರ್ಧಿಗಳಿಗೆ ಬಿಗ್​ ಬಾಸ್ ಒಂದು ಶಿಕ್ಷೆ ನೀಡಿದರು.

ಕಿರಣ್ ಶಾಸ್ತ್ರಿ ಮತ್ತು ಲಿಖಿತ್ ಅವರ ಹಾಸಿಗೆ, ದಿಂಬು ಮತ್ತು ಹೊದಿಕೆಯನ್ನು ಹಿಂಪಡೆಯಲಾಗಿದೆ. ಆದ್ದರಿಂದ ರಾತ್ರಿ ವೇಳೆ ಮಲಗುವುದು ಕಷ್ಟ ಆಗಲಿದೆ. ಎಲ್ಲರೂ ಸೇರಿ ತಮ್ಮನ್ನು ಟಾರ್ಗೆಟ್ ಮಾಡಿದ್ದಕ್ಕೆ ಕಿರಣ್ ಶಾಸ್ತ್ರಿ ಅವರಿಗೆ ಬೇಸರ ಆಗಿದೆ. ಎಲ್ಲರ ಎದುರಲ್ಲಿ ಅವರು ಕಣ್ಣೀರು ಹಾಕಿದ್ದಾರೆ. ಸಂಗೀತಾ ಭಟ್, ಆಸಿಯಾ ಮುಂತಾದವರು ಶಾಸ್ತ್ರಿಯನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ.

ಲಿಖಿತ್ ಮತ್ತು ಕಿರಣ್ ಶಾಸ್ತ್ರಿಗೆ ಶಿಕ್ಷೆ ನೀಡಲಾಗಿದ್ದರೂ ಕೂಡ ಆ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಇನ್ನುಳಿದ ಸ್ಪರ್ಧಿಗಳಿಗೆ ನೀಡಲಾಗಿದೆ. ಒಂದು ವೇಳೆ ಲಿಖಿತ್ ಮತ್ತು ಕಿರಣ್ ಶಾಸ್ತ್ರಿ ಶಿಕ್ಷೆ ಅನುಭವಿಸುವಲ್ಲಿ ವಿಫಲವಾದರೆ ಅದರ ಪರಿಣಾಮವನ್ನು ಬೇರೆ ಎಲ್ಲ ಸ್ಪರ್ಧಿಗಳೂ ಎದುರಿಸಬೇಕಾಗುತ್ತದೆ. ಹಾಗಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ.

ಇದನ್ನೂ ಓದಿ: ‘ಬಳೆ ಹಾಕಿಕೊಂಡು ಕುಳಿತುಕೊಳ್ಳಿ’ ಎಂದ ಕಿರಣ್ ಶಾಸ್ತ್ರಿ; ಬಿಗ್ ಬಾಸ್‌ ಮನೆಯಲ್ಲಿ ಮತ್ತೆ ಬಳೆ ವಿವಾದ

ಬಿಗ್ ಬಾಸ್ ನೀಡಿರುವ ಶಿಕ್ಷೆಯನ್ನು ಅನುಭವಿಸದೇ ಬೆಡ್ ಮೇಲೆ ಮಲಗಲು ಕಿರಣ್ ಶಾಸ್ತ್ರಿ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆ ರೀತಿ ಮಾಡುವುದರಿಂದ ಇನ್ನುಳಿದ ಸ್ಪರ್ಧಿಗಳಿಗೆ ಶಿಕ್ಷೆ ಕೊಡಿಸಲು ಅವರು ನಿರ್ಧರಿಸಿದ್ದಾರೆ. ಇದು ನಿದ್ರೆಯ ವಿಚಾರವಾದರೆ ಇನ್ನೂ ಹಲವು ನಿಯಮಗಳನ್ನು ಕೂಡ ಕೆಲವು ಸ್ಪರ್ಧಿಗಳು ಸರಿಯಾಗಿ ಪಾಲಿಸುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ