AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಎಲಿಮಿನೇಟ್ ಆಗಲು..’; ಲಿಖಿತ್ ಆರೋಪ ಹೊರಿಸಿದ್ದು ಯಾರ ಮೇಲೆ?

ಕನ್ನಡ ಬಿಗ್ ಬಾಸ್ ಮನೆಯಿಂದ ಸ್ಪರ್ಧಿ ಲಿಖಿತ್ ಎಲಿಮಿನೇಟ್ ಆಗಿದ್ದಾರೆ. ನಾಮಿನೇಟ್ ಆಗಿದ್ದ ಆರು ಸ್ಪರ್ಧಿಗಳಲ್ಲಿ ಕನಿಷ್ಠ ಮತ ಪಡೆದ ಅವರು ದೊಡ್ಮನೆಯಿಂದ ನಿರ್ಗಮಿಸಿದ್ದಾರೆ. ಅತಿಯಾದ ಕೋಪ, ಮನೆಯಲ್ಲಿ ಪದೇ ಪದೇ ಕಿರಿಕ್ ಹಾಗೂ ಕಿರಿಕಿರಿ ನಡವಳಿಕೆಯೇ ಅವರ ಎಲಿಮಿನೇಷನ್‌ಗೆ ಪ್ರಮುಖ ಕಾರಣವಾಗಿದೆ. ವೇದಿಕೆ ಮೇಲೆ ತಮ್ಮ ಕೋಪದ ತಪ್ಪನ್ನು ಲಿಖಿತ್ ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದಾರೆ.

‘ನಾನು ಎಲಿಮಿನೇಟ್ ಆಗಲು..’; ಲಿಖಿತ್ ಆರೋಪ ಹೊರಿಸಿದ್ದು ಯಾರ ಮೇಲೆ?
ಲಿಖಿತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 05, 2026 | 7:00 AM

Share

ಮುಖ್ಯಾಂಶಗಳು

  • ಅಗ್ನಿಪರೀಕ್ಷೆಯಿಂದ ಬಂದ ಸ್ಪರ್ಧಿಯ ಪಯಣ ಅಂತ್ಯ
  • ಕನಿಷ್ಠ ವೋಟ್ ಪಡೆದು ಔಟ್
  • ಕೋಪವೇ ಮುಳುವಾಯ್ತಾ?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಲ್ಲಿ ಭಾನುವಾರ ಎಲಿಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸ್ಪರ್ಧಿ ಲಿಖಿತ್ ಅವರು ದೊಡ್ಮನೆಯಿಂದ ಹೊರಬಿದ್ದಿದ್ದಾರೆ. ಆರಂಭದಿಂದಲೂ ತಮ್ಮದೇ ಶೈಲಿಯ ಆಟದಿಂದ ಗಮನಸೆಳೆಯಲು ಯತ್ನಿಸಿದ್ದ ಲಿಖಿತ್, ವೀಕ್ಷಕರ ವೋಟಿಂಗ್ ಲೆಕ್ಕಾಚಾರದಲ್ಲಿ ಹಿನ್ನಡೆ ಅನುಭವಿಸಿ ತಮ್ಮ ಬಿಗ್ ಬಾಸ್ ಪಯಣವನ್ನು ಮುಗಿಸಿದ್ದಾರೆ. ಈ ಮೂಲಕ ಅಗ್ನಿಪರೀಕ್ಷೆಯಿಂದ ಬಂದವರ ಪೈಕಿ ಮೊದಲು ಹೊರ ಹೋದವರು ಇವರಾಗಿದ್ದಾರೆ.

ಕಳೆದ ವಾರದ ನಾಮಿನೇಷನ್ ಪಟ್ಟಿಯಲ್ಲಿದ್ದ ಕಿರಣ್, ಧನುಷ್, ಮಂಜು, ಸಂಗೀತಾ, ಯಶಸ್ ಮತ್ತು ಲಿಖಿತ್ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ, ವೀಕ್ಷಕರಿಂದ ಬಂದ ಅಂತಿಮ ಮತಗಳ ಆಧಾರದ ಮೇಲೆ ಲಿಖಿತ್ ಅವರು ಕನಿಷ್ಠ ವೋಟ್ ಪಡೆದ ಕಾರಣಕ್ಕೆ ಮನೆಯಿಂದ ಎಲಿಮಿನೇಟ್ ಆಗಬೇಕಾಯಿತು.

ಲಿಖಿತ್ ಅವರ ಈ ಅಕಾಲಿಕ ನಿರ್ಗಮನಕ್ಕೆ ಮನೆಯಲ್ಲಿದ್ದ ಅವರ ಸಿಟ್ಟಿನ ಸ್ವಭಾವವೇ ಮುಖ್ಯ ಕಾರಣ ಎನ್ನಲಾಗಿದೆ. ಸಣ್ಣಪುಟ್ಟ ವಿಚಾರಗಳಿಗೂ ಬಿಗ್ ಬಾಸ್ ಸದಸ್ಯರೊಂದಿಗೆ ಪದೇ ಪದೇ ಕಿರಿಕ್ ಮಾಡಿಕೊಳ್ಳುತ್ತಿದ್ದದ್ದು ಮತ್ತು ವೀಕ್ಷಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದದ್ದು ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರಿತು.

ಎಲಿಮಿನೇಟ್ ಆದ ಬಳಿಕ ವೇದಿಕೆ ಮೇಲೆ ಸುದೀಪ್ ಜೊತೆ ಮಾತನಾಡಿದ ಲಿಖಿತ್, ತಮ್ಮ ತಪ್ಪನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡರು. ‘ನನ್ನ ಆ್ಯಂಗರ್ ಇಶ್ಯೂ ನನಗೆ ಮುಳುವಾಯ್ತು ಅನಿಸುತ್ತೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಪ್ರೇಕ್ಷಕರನ್ನು ಹಾಗೂ ಮನೆಯವರನ್ನು ನಗಿಸುವ ಸಾಕಷ್ಟು ಅವಕಾಶಗಳಿದ್ದವು. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟು ಆ ಒಳ್ಳೆಯ ಅವಕಾಶವನ್ನು ಮಿಸ್ ಮಾಡಿಕೊಂಡೆ. ಈ ವಾರ ನಾನೇ ಹೋಗ್ತೀನಿ ಅಂತ ಗೊತ್ತಿತ್ತು’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಗ್​​ಬಾಸ್ ಮನೆಗೆ ನುಗ್ಗಿದ ಕಮಾಂಡೋಗಳು: ಹೊರಗೆಳೆದುಕೊಂಡು ಹೋಗಿದ್ದು ಯಾರನ್ನು?

ಒಟ್ಟಿನಲ್ಲಿ ಬಿಗ್ ಬಾಸ್‌ನಂತಹ ದೊಡ್ಡ ವೇದಿಕೆಯಲ್ಲಿ ಸಮಯಕ್ಕೆ ತಕ್ಕಂತೆ ತಾಳ್ಮೆ ಕಾಯ್ದುಕೊಳ್ಳುವುದು ಎಷ್ಟು ಮುಖ್ಯ ಎಂಬುದಕ್ಕೆ ಲಿಖಿತ್ ಅವರ ಎಲಿಮಿನೇಷನ್ ಉದಾಹರಣೆಯಾಗಿದೆ. ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ಆಡಿದ್ದರೆ ಅವರು ಇನ್ನು ಕೆಲವು ವಾರಗಳ ಕಾಲ ಮನೆಯಲ್ಲಿ ಮುಂದುವರಿಯುವ ಸಾಧ್ಯತೆಯಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್