AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಾರಾ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದ ಈ ದಂಪತಿ?

ಶೀಘ್ರದಲ್ಲೇ ‘ತಮಿಳು ಬಿಗ್ ಬಾಸ್ 6’ ಆರಂಭ ಆಗಲಿದೆ. ಕಮಲ್ ಹಾಸನ್ ಅವರು ಶೋ ನಡೆಸಿಕೊಡಲಿದ್ದಾರೆ. ಈ ನವ ದಂಪತಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದೆ ಎನ್ನುವ ಸುದ್ದಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಾರಾ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದ ಈ ದಂಪತಿ?
ಮಹಾಲಕ್ಷ್ಮೀ-ರವೀಂದರ್​ ಚಂದ್ರಶೇಖರನ್
TV9 Web
| Edited By: |

Updated on: Sep 29, 2022 | 8:01 PM

Share

ಕೊವಿಡ್ ಕಡಿಮೆ ಆಗಿದೆ. ಇದರಿಂದ ಸಿನಿಮಾ ರಂಗಕ್ಕೆ ಹೊಸ ಚೇತರಿಕೆ ಸಿಕ್ಕಿದೆ. ಕಿರುತೆರೆಯಲ್ಲಿ ರಿಯಾಲಿಟಿ ಶೋಗಳು ಅಬ್ಬರಿಸುತ್ತಿವೆ. ಅದೇ ರೀತಿ ಬಿಗ್ ಬಾಸ್ ಕೂಡ ಹಲವು ಭಾಷೆಗಳಲ್ಲಿ ಆರಂಭ ಆಗುತ್ತಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈಗಾಗಲೇ ದೊಡ್ಮನೆ ಆಟ ಶುರುವಾಗಿದೆ. ಹಿಂದಿ ಹಾಗೂ ತಮಿಳಿನಲ್ಲಿ ಇನ್ನಷ್ಟೇ ಈ ಶೋ ಆರಂಭ ಆಗಬೇಕಿದೆ. ಇದಕ್ಕೂ ಮೊದಲು ಒಂದು ವದಂತಿ ಹುಟ್ಟಿಕೊಂಡಿದೆ. ಇತ್ತೀಚೆಗೆ ಮದುವೆ ಆಗಿದ್ದ ತಮಿಳಿನ ಜೋಡಿ ಬಿಗ್ ಬಾಸ್ (Bigg Boss) ಮನೆಗೆ ಎಂಟ್ರಿ ಆಗುವ ಸೂಚನೆ ಸಿಕ್ಕಿದೆ.

ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿ ಮಹಾಲಕ್ಷ್ಮೀ ಅವರ ವಿವಾಹ ನಿರ್ಮಾಪಕ ರವೀಂದರ್​ ಚಂದ್ರಶೇಖರನ್ ಜತೆ ಸೆಪ್ಟೆಂಬರ್ 1ರಂದು ನಡೆದಿತ್ತು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆ ಟ್ರೋಲಿಗರು ಹಬ್ಬ ಮಾಡಿದ್ದರು. ಈ ಫೋಟೋಗಳನ್ನು ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ದುಡ್ಡು ಇರುವ ಕಾರಣಕ್ಕೆ ಮಹಾಲಕ್ಷ್ಮೀ ಅವರು ಈ ಮದುವೆ ಆದರು ಎಂಬ ಆರೋಪವೂ ಕೇಳಿ ಬಂತು. ‘ನನ್ನ ಪತಿಯನ್ನು ಟ್ರೋಲ್ ಮಾಡಬೇಡಿ’ ಎಂದು ಮಹಾಲಕ್ಷ್ಮೀ ಕೋರಿದ್ದರು. ಈಗ ಈ ಜೋಡಿ ಬಿಗ್ ಬಾಸ್​ಗೆ ಬರಲಿದೆ ಎನ್ನಲಾಗುತ್ತಿದೆ.

ಶೀಘ್ರದಲ್ಲೇ ‘ತಮಿಳು ಬಿಗ್ ಬಾಸ್ 6’ ಆರಂಭ ಆಗಲಿದೆ. ಕಮಲ್ ಹಾಸನ್ ಅವರು ಶೋ ನಡೆಸಿಕೊಡಲಿದ್ದಾರೆ. ಈ ನವ ದಂಪತಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದೆ ಎನ್ನುವ ಸುದ್ದಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ದೊಡ್ಮನೆಗೆ ಬಂದರೆ ಇವರ ಪ್ರೇಮಕಥೆಯೂ ರಿವೀಲ್ ಆಗಬಹುದು. ಈ ನವದಂಪತಿ ಬರುವ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ರವೀಂದರ್‌ ಚಂದ್ರಶೇಖರನ್ ಹಾಗೂ ಮಹಾಲಕ್ಷ್ಮೀ ಒಂದೇ ಇಂಡಸ್ಟ್ರಿಯಲ್ಲಿ ಇದ್ದಾರೆ. ಈ ಮೊದಲು ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದರು. ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು.

ಇದನ್ನೂ ಓದಿ: ‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’; ಲೈವ್​ ಬಂದು ಟ್ರೋಲಿಗರ ಬಳಿ ಮನವಿ ಮಾಡಿಕೊಂಡ ಮಹಾಲಕ್ಷ್ಮಿ

ಮಹಾಲಕ್ಷ್ಮೀ ಅವರು ತಮಿಳು ಕಿರುತೆರೆ ಮಂದಿಗೆ ಚಿರಪರಿಚಿತರು. ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ನಟನೆಯ ‘ಮಹಾರಸಿ’ ಹೆಸರಿನ ಧಾರಾವಾಹಿ ಪ್ರಸಾರ ಆಗುತ್ತಿದೆ. ರವೀಂದರ್‌ ಅವರು ತಮಿಳು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್