ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ

ಜನಪ್ರಿಯ ಟಿವಿ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಮತ್ತು ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಈಗ ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿದ್ದಾರ್ಥ ಪರಸನೂರು ಅವರಿಗೆ ಆಪ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ
Siddartha Parasanura
Edited By:

Updated on: Jun 15, 2026 | 10:48 PM

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯಲ್ಲಿ ಸಿದ್ದಾರ್ಥ ಪರಸನೂರು ಅವರು ವಾಸಿಸುತ್ತಿದ್ದರು. ಮೂರು ದಿನದ ಹಿಂದೆ ಅವರು ಮೃತಪಟ್ಟಿರುವ ಸಾಧ್ಯತೆ ಇದೆ. ಈಗ ಅವರ ಮೃತದೇಹ ಪತ್ತೆ ಆಗಿದೆ. ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿನ ಖಾಲಿ‌ ಜಾಗದಲ್ಲಿ ಮೃತ ದೇಹ ಪತ್ತೆ ಆಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸಿದ್ದಾರ್ಥ ಪರಸನೂರು ಅವರ ಮೃತ ದೇಹವನ್ನು ಗಮನಿಸಿದರೆ ಇದು ಸಹಜ ಸಾವಲ್ಲ ಎಂಬ ಅಭಿಪ್ರಾಯ ಮೇಲ್ನೋಟಕ್ಕೆ ಮೂಡುತ್ತದೆ. ಕರೆಂಟ್ ಹಿಡಿದು ಮೃತಪಟ್ಟಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನುಮಾನ ಬರುವ ರೀತಿಯಲ್ಲಿ ಶವ ಪತ್ತೆ ಆಗಿರುವುದರಿಂದ ಹುಮ್ನಾಬಾದ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ನಿಧನರಾಗಿ ಆರೇ ವರ್ಷಕ್ಕೆ ಸುಶಾಂತ್ ಸಿಂಗ್ ರಜಪೂತ್ ಯಾರಿಗೂ ನೆನಪಿಲ್ಲ; ಪುಣ್ಯತಿಥಿಗೆ ಬಾಲಿವುಡ್ ಮೌನ

ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಈಗ ಅವರ ನಿಧನದಿಂದ ಅಭಿಮಾನಿಗಳು ಮತ್ತು ಆಪ್ತರಿಗೆ ನೋವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುರೇಶ ನಾಯಕ

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us