AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಹೊರಗಡೆ ಚೆನ್ನಾಗಿ ಕಾಣಿಸಲ್ಲ: ಮಾನಸಾಗೆ ನೇರವಾಗಿ ಹೇಳಿದ ಐಶ್ವರ್ಯಾ

ಮಾನಸಾ ಅವರು ತಮ್ಮದೇ ರೀತಿಯಲ್ಲಿ ಬಿಗ್ ಬಾಸ್​ ಮನೆಯೊಳಗೆ ಗುರುತಿಸಿಕೊಂಡಿದ್ದಾರೆ. ಹೊರಗಡೆ ಕೆಲವರು ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ. ಈಗ ದೊಡ್ಮನೆ ಒಳಗೆ ಐಶ್ವರ್ಯಾ ಅವರು ಮಾನಸಾ ಜೊತೆ ಜಗಳ ಮಾಡಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಐಶ್ವರ್ಯಾಗೆ ಮಾನಸಾ ಅವರು ಏಕವಚನದಲ್ಲಿ ಬೈಯ್ದಿದ್ದಾರೆ.

ನೀವು ಹೊರಗಡೆ ಚೆನ್ನಾಗಿ ಕಾಣಿಸಲ್ಲ: ಮಾನಸಾಗೆ ನೇರವಾಗಿ ಹೇಳಿದ ಐಶ್ವರ್ಯಾ
ಮಾನಸಾ, ಐಶ್ವರ್ಯಾ
ಮದನ್​ ಕುಮಾರ್​
|

Updated on: Oct 23, 2024 | 10:12 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಈಗ ಇಬ್ಬರು ಕ್ಯಾಪ್ಟನ್ ಆಗಿದ್ದಾರೆ. ತ್ರಿವಿಕ್ರಮ್ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದಾರೆ. ಈ ವಾರದ ನಾಮಿನೇಷನ್​ಗೆ ಅವರಿಬ್ಬರು ಇನ್ನಿಬ್ಬರನ್ನು ನೇರವಾಗಿ ನಾಮಿನೇಟ್​ ಮಾಡಬೇಕಿತ್ತು. ಅದಕ್ಕೆ ಉಗ್ರಂ ಮಂಜು ಮತ್ತು ಮಾನಸಾ ಅವರ ಹೆಸರನ್ನು ನಾಮಿನೇಟ್ ಮಾಡಿದ್ದಾರೆ. ಆದರೆ ಮಾನಸಾ ಅವರು ಈ ನಾಮಿನೇಷನ್​ ಅನ್ನು ಒಪ್ಪಿಕೊಂಡಿಲ್ಲ. ತಮ್ಮ ನಾಮಿನೇಷನ್​ಗೆ ಐಶ್ವರ್ಯಾ ನೀಡಿದ ಕಾರಣಗಳನ್ನು ಮಾಸನಾ ವಿರೋಧಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಬ್ಬರ ನಡುವೆ ಜಗಳ ನಡೆದಿದೆ.

ಮಾನಸಾ ಅವರು ಅವಕಾಶ ಸಿಕ್ಕಾಗಲೆಲ್ಲ ಜಗಳ ಮಾಡುತ್ತಾರೆ. ಆ ಗುಣ ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವೊಮ್ಮೆ ಅವರು ಅಳುತ್ತಾ ಕೂತಿರುತ್ತಾರೆ. ಆ ಸಂದರ್ಭದಲ್ಲಿ ಅವರನ್ನು ಸಮಾಧಾನ ಮಾಡಲು ಹೋದವರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಐಶ್ವರ್ಯಾ ಹೇಳಿದ್ದಾರೆ. ಈ ಹಿಂದೆ ಮಾಸನಾ ಅವರಿಗೆ ವಹಿಸಿದ ಕೆಲಸಗಳನ್ನು ಸರಿಯಾಗಿ ಮಾಡಿಲ್ಲ ಎಂದು ಕೂಡ ಹೇಳಲಾಗಿದೆ. ಈ ಕಾರಣವನ್ನು ಕೂಡ ಮಾನಸಾ ಅವರು ವಿರೋಧಿಸಿದ್ದಾರೆ.

ನಾಮಿನೇಷನ್​ ಪ್ರಕ್ರಿಯೆ ಮುಗಿದ ಬಳಿಕ ಮಾನಸಾ ಮತ್ತು ಐಶ್ವರ್ಯಾ ನಡುವೆ ಮಾತಿನ ಚಕಮಕಿ ಜೋರಾಯಿತು. ‘ನಾನು ಅಳುವಾಗ ಸಮಾಧಾನ ಮಾಡೋಕೆ ನೀನು ಯಾವಳು’ ಎಂದರು ಮಾನಸಾ. ಅದರಿಂದ ಐಶ್ವರ್ಯಾ ಅವರಿಗೆ ಸಿಕ್ಕಾಪಟ್ಟೆ ಸಿಟ್ಟು ಬಂದಿದೆ. ‘ಯಾವಳು ಅಂತೆಲ್ಲ ಈ ರೀತಿ ಮಾತನಾಡಬೇಡಿ. ನೀವು ಹೊರಗಡೆ ಚೆನ್ನಾಗಿ ಕಾಣಿಸಲ್ಲ’ ಎಂದು ಮಾನಸಾಗೆ ಐಶ್ವರ್ಯಾ ಹೇಳಿದ್ದಾರೆ. ‘ಕಾಣಿಸೋದು ಬೇಡ ಬಿಡು’ ಎಂದು ಮಾನಸಾ ಇನ್ನಷ್ಟು ಕೂಗಾಡಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ನಡುವಿನ ವಯಸ್ಸಿನ ಅಂತರವೆಷ್ಟು? ಅಭಿಷೇಕ್ ಹಿರಿಯರಲ್ಲ

ಈ ವಾರದ ಎಲಿಮಿನೇಷನ್​ಗೆ ಗೋಲ್ಡ್​ ಸುರೇಶ್​, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಗೌತಮಿ ಜಾಧವ್, ಭವ್ಯಾ ಗೌಡ, ಹಂಸಾ, ಶಿಶಿರ್, ಉಗ್ರಂ ಮಂಜ ಹಾಗೂ ಮಾನಸಾ ಅವರು ನಾಮಿನೇಟ್​ ಆಗಿದ್ದಾರೆ. ‘ಎಂಟರ್​ಟೇನ್ಮೆಂಟ್​ ನೀಡುತ್ತಿಲ್ಲ’ ಎಂದು ಕಾರಣವನ್ನು ನೀಡಿ ತಮ್ಮನ್ನು ನಾಮಿನೇಟ್​ ಮಾಡಿದ್ದಕ್ಕೆ ಉಗ್ರಂ ಮಂಜು ಕೂಡ ಕೂಗಾಡಿದ್ದಾರೆ. ನಾನು ಇನ್ಮೇಲೆ ಮನೆಯ ಕೆಲಸ ಮಾಡಲ್ಲ, ಬರೀ ಮನರಂಜನೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದರಿಂದ ಮನೆಯ ಕ್ಯಾಪ್ಟನ್ ತ್ರಿವಿಕ್ರಮ್ ಮತ್ತು ಮಂಜು ನಡುವೆ ಕಿರಿಕ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್