AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

ಮೀರಾ ಮಿಥುನ್​ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಜಾತಿ ನಿಂದನೆ ಆರೋಪದಡಿಯಲ್ಲಿ ಮೀರಾ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿದ್ದವು.

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​
ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​
TV9 Web
| Edited By: |

Updated on: Aug 15, 2021 | 3:56 PM

Share

‘ತಮಿಳು ಬಿಗ್​ ಬಾಸ್​ 3’ ಸ್ಪರ್ಧಿ ಮೀರಾ ಮಿಥುನ್​ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಜಾತಿ ನಿಂದನೆ ಆರೋಪದಡಿಯಲ್ಲಿ ಶನಿವಾರ (ಆಗಸ್ಟ್​ 14) ಕೇರಳದಲ್ಲಿ ಅವರನ್ನು ಬಂಧಿಸಲಾಗಿದೆ. ಈ ಮಧ್ಯೆ ಅವರ ಬಾಯ್​ಫ್ರೆಂಡ್​ ಸ್ಯಾಮ್​ ಅಭಿಷೇಕ್​ ಕೂಡ ಈಗ ಜೈಲು ಪಾಲಾಗಿದ್ದಾರೆ. ಮೀರಾಗೆ ಬೆಂಬಲಿಸಿದ ಆರೋಪದಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ದಲಿತರ ಬಗ್ಗೆ ಮೀರಾ ಕೀಳಾಗಿ ಮಾತನಾಡಿದ್ದರು. ಇದರಿಂದ ಆಕ್ರೋಶಗೊಂಡ ಅನೇಕರು ಅವರ ವಿರುದ್ಧ ದೂರು ದಾಖಲು ಮಾಡಿದ್ದರು. ಇದರನ್ವಯ ಪೊಲೀಸರು ಮೀರಾ ಅವರನ್ನು ಬಂಧಿಸಿದ್ದಾರೆ. ಮೀರಾ ಜತೆಗೆ ಅವರ ಬಾಯ್​ಫ್ರೆಂಡ್ ಕೂಡ ಅರೆಸ್ಟ್ ಆಗಿದ್ದಾರೆ. ಮೀರಾ ಅವರು ಸ್ಯಾಮ್​ ಜತೆ ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಇಬ್ಬರೂ ರಿಲೇಶನ್​ಶಿಪ್​ನಲ್ಲಿರುವ ವಿಚಾರವನ್ನು ಬಹಿರಂಗ ಪಡಿಸಿದ್ದರು. ಮೀರಾ ಜಾತಿ ನಿಂದನೆಗೆ ಸ್ಯಾಮ್​ ಕುಮ್ಮಕ್ಕು ಇರುವುದು ಪೊಲೀಸರಿಗೆ ಸ್ಪಷ್ಟವಾಗಿದೆ.  ಹೀಗಾಗಿ, ಸ್ಯಾಮ್​ ಬಂಧನ ನಡೆದಿದೆ.

‘ಅನೈತಿಕ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಪರಿಶಿಷ್ಟ ಜಾತಿ ಜನರು ಪಾಲ್ಗೊಂಡಿರುವುದರಿಂದ ಅವರು ಸಮಸ್ಯೆ ಎದುರಿಸುತ್ತಾರೆ. ಕಾರಣ ಇಲ್ಲದೇ ಯಾರೂ ಯಾರ ಬಗ್ಗೆಯೂ ಕೆಟ್ಟದ್ದು ಮಾತನಾಡುವುದಿಲ್ಲ. ಚಿತ್ರರಂಗದಲ್ಲಿ ಆಗುತ್ತಿರುವ ಕೆಡುಕುಗಳಿಗೆ ಪರಿಶಿಷ್ಟ ಜಾತಿಯ ನಿರ್ದೇಶಕರು ಕಾರಣ. ಅಂಥವರನ್ನೆಲ್ಲ ಚಿತ್ರರಂಗದಿಂದ ತೊಲಗಿಸಲು ಇದು ಸರಿಯಾದ ಸಮಯ ಅಂತ ನನಗೆ ಅನಿಸುತ್ತದೆ’ ಎಂದು ಸಂದರ್ಶನವೊಂದರಲ್ಲಿ ಮೀರಾ ಹೇಳಿಕೆ ನೀಡಿದ್ದರು.

ಮೀರಾ ಮಿಥುನ್​ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಜಾತಿ ನಿಂದನೆ ಆರೋಪದಡಿಯಲ್ಲಿ ಮೀರಾ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಅವರಿಗೆ ಸಮನ್ಸ್​ ಜಾರಿ ಮಾಡಿದ್ದರು. ಈಗ ಮೀರಾ ಹಾಗೂ ಅವರ ಬಾಯ್​ಫ್ರೆಂಡ್​ ಬಂಧನ ನಡೆದಿದೆ. ನಟಿ ವಿರುದ್ಧ ಐಪಿಸಿ ಸೆಕ್ಷನ್​ 153, 153ಎ(1)(ಎ), 505(1)(ಬಿ), 505 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮೀರಾ ಕಾಲಿವುಡ್​ನಲ್ಲಿ ಅಷ್ಟು ಚಿರಪರಿಚಿತ ಮುಖವಲ್ಲ. ಅವರು ನಟಿಸಿದ್ದು ಬೆರಳೆಣಿಕೆ ಸಿನಿಮಾಗಳು. ಮೀರಾಗೆ, ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಪಾತ್ರ ಸಿಕ್ಕಿಲ್ಲ. ತಮಿಳು ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ಮೀರಾ ಎಂಟ್ರಿ ಕೊಟ್ಟಿದ್ದರು. ನಂತರ ಅವರ ಜನಪ್ರಿಯತೆ ಕೊಂಚ ಹೆಚ್ಚಿತ್ತು.

ಇದನ್ನೂ ಓದಿ: ಕಸದ ಚೀಲದಿಂದ ಮಾನ ಮುಚ್ಚಿಕೊಂಡ ನಟಿ; ಬಿಗ್​ ಬಾಸ್​ ಮನೆಯಲ್ಲಿ ಯಾಕಿಂಥ ಪರಿಸ್ಥಿತಿ?

ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು