ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ
ಬಿಎಂಡಬ್ಲ್ಯು ಹಾಗೂ ಎಂಜಿ ಹೆಕ್ಟರ್ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿದೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ನಟಿ ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡರು. ಅವರ ಖ್ಯಾತಿ ಕರ್ನಾಟಕದಾದ್ಯಂತ ಹಬ್ಬಿದೆ. ಈಗ ಅವರ ಮನೆಗೆ ಎರಡು ಐಷಾರಾಮಿ ಹೊಸ ಕಾರು ಆಗಮಿಸಿವೆ. ಈ ಬಗ್ಗೆ ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದಾರೆ.
ಬಿಎಂಡಬ್ಲ್ಯು ಹಾಗೂ ಎಂಜಿ ಹೆಕ್ಟರ್ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿವೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಹಾಕಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.
‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೊರ ನಡೆದಿದ್ದಾರೆ ಹಾಗೂ ಅವರು ಈ ಧಾರಾವಾಹಿಯಲ್ಲಿ ಮುಂದುವರಿಯುವುದಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿತ್ತು. ‘ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದಗಳು. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ’ ಎಂದಿದ್ದರು ಮೇಘಾ ಶೆಟ್ಟಿ.
‘ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ’ ಎಂದು ಮೇಘಾ ಶೆಟ್ಟಿ ಕೋರಿದ್ದರು.
ಇದನ್ನೂ ಓದಿ: ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ