Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ

Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ-ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 10, 2022 | 2:54 PM

ಮೇಘಾ ಶೆಟ್ಟಿ (Megha Shetty) ಅವರು ಶನಿವಾರ (ಏಪ್ರಿಲ್​ 9) ಮಹೇಶ್​ ಬಾಬು (Mahesh Babu) ಜತೆಗಿನ ಫೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಈ ಫೋಟೋಗಳು ಅವರ ಅಭಿಮಾನಿ ಬಳಗದಲ್ಲಿ ಸಖತ್​ ವೈರಲ್ ಆಗಿತ್ತು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಮೇಘಾ ಶೆಟ್ಟಿ ಅವರು ಪೋಸ್ಟ್​ನಲ್ಲಿ ಉತ್ತರ ನೀಡಿರಲಿಲ್ಲ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಸಖತ್ ಖುಷಿಪಟ್ಟರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎಂಬ ಪ್ರಶ್ನೆಗೆ ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial)  ನಟಿ ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡ ನಟ-ನಟಿಯರು ಒಟ್ಟಾಗಿ ಫೋಟೋಗೆ ಪೋಸ್​​ ನೀಡಿದರೆ ಸಾಕು, ಹೊಸ ಸಿನಿಮಾ ಬಗ್ಗೆ ವದಂತಿ ಹುಟ್ಟಿಕೊಳ್ಳುತ್ತದೆ. ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ. ‘ಜಾಹೀರಾತೊಂದಕ್ಕಾಗಿ ನಾನು ಅವರನ್ನು ಭೇಟಿ ಮಾಡಿದ್ದೆ’ ಎಂದು ಮೇಘಾ ಶೆಟ್ಟಿ ಟಿವಿ9 ಕನ್ನಡ ಡಿಜಿಟಲ್​ಗೆ ತಿಳಿಸಿದ್ದಾರೆ.

ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 9.8 ಲಕ್ಷ ಹಿಂಬಾಲಕರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅಭಿಮಾನಿಗಳ ಜತೆ ಚರ್ಚೆ ನಡೆಸುವ ಅವರು, ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡುತ್ತಾರೆ.

ನಿರ್ಮಾಣದಲ್ಲೂ ಬ್ಯುಸಿ ಆದ ಮೇಘಾ

‘ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಿಂದ ಮೇಘಾ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಇದಲ್ಲದೆ, ಹಿರಿ ತೆರೆಯಿಂದಲೂ ಮೇಘಾಗೆ ಬೇಡಿಕೆ ಬರುತ್ತಿದ್ದು, ಕೆಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಮೇಘಾ ಶೆಟ್ಟಿಗೆ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಕೆಂಡಸಂಪಿಗೆ’ ಎಂಬ ಧಾರಾವಾಹಿ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಮೇಘಾ ಶೆಟ್ಟಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಮಹೇಶ್ ಬಾಬು ಜತೆ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ; ಗುಟ್ಟು ಬಿಟ್ಟುಕೊಡದ ನಟಿ

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ