AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ವಾತಾವರಣ ಹಾಳುಮಾಡೋಣ’; ದುರಹಂಕಾರದಿಂದ ಪಣ ತೊಟ್ಟ ಮೈಕಲ್

‘ಕ್ಯಾಪ್ಟನ್ ಆದಾಗ ನೇರವಾಗಿ ನಾಮಿನೇಟ್ ಮಾಡುವ ಅವಕಾಶ ಸಿಗುತ್ತದೆ. ಆಗ ನನ್ನ ನಾಮಿನೇಟ್ ಮಾಡಿ’ ಎಂದು ದುರಹಂಕಾರ ತೋರಿದರು ಮೈಕಲ್. ‘ಇನ್ನೊಂದು ಸ್ವಲ್ಪ ಹೊತ್ತು ಮಲಗಿ ಮನೆಯ ಪರಿಸ್ಥಿತಿಯನ್ನು ಹಾಳು ಮಾಡೋಣ’ ಎಂದು ಗರ್ವದಿಂದ ಹೇಳಿಕೊಂಡರು ಮೈಕಲ್.

‘ಬಿಗ್ ಬಾಸ್ ವಾತಾವರಣ ಹಾಳುಮಾಡೋಣ’; ದುರಹಂಕಾರದಿಂದ ಪಣ ತೊಟ್ಟ ಮೈಕಲ್
ಮೈಕಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 02, 2024 | 8:33 AM

Share

ಬಿಗ್ ಬಾಸ್ ಮನೆಯಲ್ಲಿ ಮೈಕಲ್ ಅಜಯ್ (Michael Ajay) ಅವರು ಆರಂಭದಲ್ಲಿ ಹಲವು ವಿಚಾರದಲ್ಲಿ ಗಮನ ಸೆಳೆದಿದ್ದರು. ಅವರು ಅನೇಕರಿಗೆ ಇಷ್ಟ ಆಗಿದ್ದರು. ಕಷ್ಟ ಆದರೂ ಕನ್ನಡ ಮಾತನಾಡಲು ಪ್ರಯತ್ನಿಸಿದ್ದರು. ನೇರವಾಗಿ ವಿಚಾರಗಳನ್ನು ಹೇಳಲು ಅವರು ಪ್ರಯತ್ನಿಸುತ್ತಿದ್ದರು. ಆಪ್ತರೇ ಆದರೂ ತಪ್ಪು ಮಾಡಿದಾಗ ಅದನ್ನು ಹೇಳುತ್ತಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ಬದಲಾಗಿದ್ದಾರೆ. ‘ಏನು ಬೇಕಾದರೂ ಮಾಡಿಕೊಳ್ಳಿ. ಐ ಡೋಂಟ್ ಕೇರ್’ ಎನ್ನುವ ಮನೋಭಾವ ಅವರಿಗೆ ಬಂದಿದೆ. ಈ ಮಧ್ಯೆ ಅವರು ಬಿಗ್ ಬಾಸ್ ವಾತವರಣ ಹಾಳುಮಾಡಲು ಅವರು ಪಣ ತೊಟ್ಟಿದ್ದಾರೆ.

ಬೀನ್ ಬ್ಯಾಗ್ ಮೇಲೆ ಕುಳಿತು ವಿನಯ್ ಹಾಗೂ ಮೈಕಲ್ ನಿದ್ರಿಸುತ್ತಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ನಾಯಿ ಬೊಗಳುವ ಸೌಂಡ್ ಹಾಕಿದರು. ಈ ವಾರದ ಕ್ಯಾಪ್ಟನ್ ತನಿಷಾ ಅವರು ಶಿಕ್ಷೆ ನೀಡಲು ಬಂದರು. ‘ನಿದ್ದೆ ಮಾಡಿದ್ದಕ್ಕೆ ಮೂರು ಬಾರಿ ಸ್ವಿಮಿಂಗ್​ಪೂಲ್​ನಲ್ಲಿ ಮುಳುಗೆದ್ದು ಬನ್ನಿ’ ಎಂದರು ತನಿಷಾ. ಇದಕ್ಕೆ ಮೈಕಲ್ ಹಾಗೂ ವಿನಯ್ ಡೋಂಟ್ ಕೇರ್ ಎಂದರು. ‘ಮಾಡಲ್ಲ ಹೋಗು’ ಎಂದರು. ‘ಕ್ಯಾಪ್ಟನ್ ಆದಾಗ ನೇರವಾಗಿ ನಾಮಿನೇಟ್ ಮಾಡುವ ಅವಕಾಶ ಸಿಗುತ್ತದೆ. ಆಗ ನನ್ನ ನಾಮಿನೇಟ್ ಮಾಡಿ’ ಎಂದು ದುರಹಂಕಾರ ತೋರಿದರು ಮೈಕಲ್. ‘ಇನ್ನೊಂದು ಸ್ವಲ್ಪ ಹೊತ್ತು ಮಲಗಿ ಮನೆಯ ಪರಿಸ್ಥಿತಿಯನ್ನು ಹಾಳು ಮಾಡೋಣ’ ಎಂದು ಗರ್ವದಿಂದ ಹೇಳಿಕೊಂಡರು ಮೈಕಲ್.

ಅಡುಗೆ ಮಾಡಲು ಪಾತ್ರೆಗಳನ್ನು ತೊಳೆದಿರಲಿಲ್ಲ. ಇದನ್ನು ಮಾಡುವ ಕೆಲಸ ಮೈಕಲ್ ಅವರದ್ದಾಗಿತ್ತು. ಆದರೆ, ತನಿಷಾ ಅವರು ಪದೇ ಪದೇ ಬಂದು ಮನವಿ ಮಾಡಿಕೊಂಡರೂ ಪಾತ್ರೆ ತೊಳೆಯಲು ಅವರು ಮುಂದಾಗಲೇ ಇಲ್ಲ. ಕೊನೆಗೂ ಅವರು ಸಿಂಕ್ ಬಳಿ ಬಂದು ನಿಧಾನಕ್ಕೆ ಪಾತ್ರೆ ತೊಳೆಯಲು ಆರಂಭಿಸಿದರು.

‘ನನ್ನಿಷ್ಟ ಬಂದಾಗ ಮಾಡ್ತೀನಿ. ಇದೆಲ್ಲ ಮಾಡಬೇಕು ಎಂದು ಎಲ್ಲಿ ಬರೆದಿದೆ. ನನಗೆ ಮಾಡೋಕೆ ಇಷ್ಟವೇ ಇಲ್ಲ’ ಎಂದರು ಮೈಕಲ್. ‘ಮಲಗಿದ್ದಕ್ಕೆ ನಿಮಗೆ ಶಿಕ್ಷೆ ನೀಡಿದೆ. ಅದನ್ನು ಮಾಡದೇ ನೀವು ದುರಹಂಕಾರ ತೋರಿಸಿದಿರಿ. ಅದಕ್ಕೆ ನಾನೇನು ಮಾಡೋಕೆ ಆಗಲ್ಲ. ನೀವು ನಿದ್ದೆ ಮಾಡ್ತಾ ಇದ್ರೆ ಇನ್ನಷ್ಟು ನಿದ್ದೆ ಮಾಡಿ ಎಂದು ಹೇಳಬೇಕಾ’ ಎಂದು ಪ್ರಶ್ನಿಸಿದರು ತನಿಷಾ.

‘ನಾನು ನಿದ್ದೆ ಮಾಡಿದ್ರೆ ನಿಂಗೆ ಶಿಕ್ಷೆ ಬರುತ್ತದೆಯೇ? ನೀನು ಹೇಳೋದನ್ನು ಕೇಳಬೇಕು ಎಂಬುದಿಲ್ಲ. ನೀನು ಡಿಕ್ಟೇಟರ್​ ಅಲ್ಲ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಮೂರು ಬಾಲ್ ಹಾಕಿದೀಯಾ ಅಷ್ಟೇ. ನೀನು ದೊಡ್ಡ ಸಾಧನೆ ಮಾಡಿಲ್ಲ. ನಿನ್ನ ಧ್ವನಿಯನ್ನು ಕೇಳಿ ಮೊದಲಿನಿಂದಲೂ ಇರಿಟೇಷನ್ ಆಗುತ್ತಿದೆ’ ಎಂದು ಮೈಕಲ್ ಅಜಯ್ ಸಿಟ್ಟಲ್ಲೇ ಹೇಳಿದರು.

ಕ್ಯಾಪ್ಟನ್​ಗೆ ಗೌರವ ನೀಡಬೇಕು ಎಂದು ಸುದೀಪ್ ಈ ಮೊದಲೇ ಹೇಳಿದ್ದರು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದ್ದರು. ಆದರೆ, ಮೈಕಲ್ ಹಾಗೂ ವಿನಯ್ ಇಬ್ಬರೂ ಇದನ್ನು ಫಾಲೋ ಮಾಡಿಲ್ಲ. ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ಅವರು ಇಬ್ಬರಿಗೂ ಖಡಕ್​ ಆಗಿ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ’ ಫಿನಾಲೆ ಯಾವಾಗ?; ಪಂಚಾಯ್ತಿಯಲ್ಲಿ ಮಾಹಿತಿ ಕೊಟ್ಟ ಸುದೀಪ್

‘ನಾನು ತಪ್ಪು ಮಾಡಿದ್ರೆ ಬಿಗ್ ಬಾಸ್ ಏನು ಮನೆಯಿಂದ ಹೊರಗೆ ಹಾಕುತ್ತಾರಾ’ ಎಂದು ಮೈಕಲ್ ಈ ಮೊದಲು ದುರಹಂಕಾರದ ಮಾತುಗಳನ್ನು ಆಡಿದ್ದರು. ಇದಕ್ಕೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು. ಆದರೂ ಅವರು ಬದಲಾಗಿಲ್ಲ. ಮತ್ತೆ ಅದೇ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಅನೇಕರಿಗೆ ಬೇಸರ ತರಿಸಿದೆ. ಅವರು ಅನೇಕರ ಪಾಲಿಗೆ ಫೇವರಿಟ್ ಸ್ಪರ್ಧಿ ಆಗಿ ಉಳಿದುಕೊಂಡಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!