AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಬಳಸಲು ಸಿಗಲಿದೆ ಅವಕಾಶ; ಷರತ್ತುಗಳು ಅನ್ವಯ

ಬಿಗ್ ಬಾಸ್​ಗೆ ಅದರದ್ದೇ ಆದ ನಿಯಮಗಳು ಇವೆ. ಆದರೆ, ಸಮಯಕ್ಕೆ ತಕ್ಕಂತೆ ಈ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಾ ಬರಲಾಗುತ್ತಿದೆ. ಈಗ ಮೊಬೈಲ್ ಬಳಕೆಗೂ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಬಳಸಲು ಸಿಗಲಿದೆ ಅವಕಾಶ; ಷರತ್ತುಗಳು ಅನ್ವಯ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 14, 2023 | 11:34 AM

Share

‘ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿ ಒಂದು ವಾರ ಕಳೆದಿದೆ. ಅತ್ತ ಹಿಂದಿಯಲ್ಲೂ ಬಿಗ್ ಬಾಸ್ ಪ್ರಾರಂಭ ಆಗುತ್ತಿದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ಕ್ಕೆ ಅಕ್ಟೋಬರ್ 15ರಂದು ಚಾಲನೆ ಸಿಗಲಿದೆ. ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡಲಿದ್ದಾರೆ. ವಿಶೇಷ ಎಂದರೆ, ಈ ಬಾರಿ ಹಿಂದಿ ಬಿಗ್ ಬಾಸ್​ನಲ್ಲಿ (Bigg Boss) ಮೊಬೈಲ್ ಬಳಕೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ವೀಕ್ಷಕರ ವಲಯದಲ್ಲಿ ಚರ್ಚೆ ಶುರುವಾಗಿದೆ.

ಬಿಗ್ ಬಾಸ್​ಗೆ ಅದರದ್ದೇ ಆದ ನಿಯಮಗಳು ಇವೆ. ಆದರೆ, ಸಮಯಕ್ಕೆ ತಕ್ಕಂತೆ ಈ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಾ ಬರಲಾಗುತ್ತಿದೆ. ‘ಬಿಗ್ ಬಸ್​’ ಮನೆ ಒಳಗೆ ಹೋದರೆ ಹೊರಗಿನ ಜಗತ್ತಿನ ಜೊತೆ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಳ್ಳಬೇಕು. ಮೊಬೈಲ್ ಬಳಕೆಯಂತೂ ಇಲ್ಲಿ ನಿಷಿದ್ಧ. ಆದರೆ, ಹಿಂದಿ ಬಿಗ್ ಬಾಸ್​ನವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸ್ಪರ್ಧಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಮೊಬೈಲ್ ಇಲ್ಲದ ಬಿಗ್ ಬಾಸ್  ಹೇಗಿರುತ್ತದೆ ಎಂದು ಊಹಿಸಿಕೊಳ್ಳೋದು ಅನೇಕರ ಬಳಿ ಸಾಧ್ಯವಿಲ್ಲ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಪರಿಚಯಿಸಿದರೆ ಹೇಗೆ ಎನ್ನುವ ಆಲೋಚನೆ ವಾಹಿನಿಯವರಿಗೆ ಮೂಡಿದೆ. ಮನೆಯಲ್ಲಿರುವ ಸ್ಪರ್ಧಿಗಳು ಒಂದಷ್ಟು ಸಮಯ ಮಾತ್ರ ಮೊಬೈಲ್ ಬಳಕೆ ಮಾಡಬಹುದು ಎನ್ನುವ ಷರತ್ತನ್ನು ಹಾಕಲು ನಿರ್ಧರಿಸಲಾಗಿದೆ. ಒಂದೊಮ್ಮೆ ಹಿಂದಿಯಲ್ಲಿ ಇದು ಯಶಸ್ಸು ಕಂಡರೆ ಮುಂದಿನ ದಿನಗಳಲ್ಲಿ ಕನ್ನಡ, ತೆಲುಗು ಭಾಷೆಯ ಬಿಗ್ ಬಾಸ್​ನಲ್ಲೂ ಮೊಬೈಲ್ ಬಳಕೆಗೆ ಅವಕಾಶ ನೀಡಬಹುದು.

ಇದನ್ನೂ ಓದಿ: ಬಿಗ್ ಬಾಸ್ ಟಾಪ್ ಐದಕ್ಕೆ ಬರೋ ಸ್ಪರ್ಧಿಗಳು ಇವರೇ ನೋಡಿ..

ಸದ್ಯ ಮೊಬೈಲ್ ಬಳಕೆಗೆ ಅವಕಾಶ ನೀಡುವ ನಿರ್ಧಾರವನ್ನು ಅನೇಕರು ವಿರೋಧಿಸಿದ್ದಾರೆ. ಬಿಗ್ ಬಾಸ್ ಮನೆಗೆ ಮೊಬೈಲ್ ಪರಿಚಯಗೊಂಡರೆ ಆಟದ ನಿಜವಾದ ಮಜಾ ಹೋಗಿ ಬಿಡುತ್ತದೆ. ಎಲ್ಲರೂ ಮೊಬೈಲ್​ನಲ್ಲೇ ಮುಳುಗಿರುತ್ತಾರೆ ಎನ್ನುವ ಅಭಿಪ್ರಾಯವನ್ನು ಅನೇಕರು ಹೊರಹಾಕಿದ್ದಾರೆ. ಈ ಹೊಸ ನಿಯಮದ ಬಗ್ಗೆ ಅಕ್ಟೋಬರ್ 15ರಂದು ಮಾಹಿತಿ ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?