AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ

ಬಿಗ್ ಬಾಸ್ ಖ್ಯಾತಿಯ ನಟಿ ಮೋಕ್ಷಿತಾ ಪೈ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗೆ ಅವರು ಮಹೀಂದ್ರ XUV9E ಎಲೆಕ್ಟ್ರಿಕ್ ಕಾರು ಖರೀದಿಸಿ ಸಂಭ್ರಮಿಸಿದ್ದಾರೆ. ಸುಮಾರು 17-20 ಲಕ್ಷ ಮೌಲ್ಯದ ಈ ಕೆಂಪು ಬಣ್ಣದ ಕಾರು ಪರಿಸರ ಸ್ನೇಹಿಯಾಗಿದೆ. ಜೀ ಕನ್ನಡದ 'ಜಗದ್ಧಾತ್ರಿ' ಧಾರಾವಾಹಿಯಲ್ಲಿ ನಟಿಸುತ್ತಿರುವ ಮೋಕ್ಷಿತಾ, ತಮ್ಮ ವೃತ್ತಿಜೀವನದ ಮತ್ತೊಂದು ಮೈಲಿಗಲ್ಲನ್ನು ತಲುಪಿದ್ದಾರೆ. ಅಭಿಮಾನಿಗಳು ಅವರಿಗೆ ಶುಭಾಶಯ ಕೋರಿದ್ದಾರೆ.

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ
ಮೋಕ್ಷಿತಾ
ರಾಜೇಶ್ ದುಗ್ಗುಮನೆ
| Edited By: |

Updated on:May 11, 2026 | 5:31 PM

Share

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ.

ಇತ್ತೀಚೆಗೆ ಪೆಟ್ರೋಲ್​-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ ಕೂಡ ಹಾಗೆಯೇ ಮಾಡಿದ್ದಾರೆ. ಅವರು ಮಹೀಂದ್ರಾ ಕಂಪನಿಯ XUV 9E ಖರೀದಿಸಿದ್ದಾರೆ. ಆಕರ್ಷಕವಾದ ಕೆಂಪು ಬಣ್ಣದ ಈ ಕಾರು ಪರಿಸರ ಸ್ನೇಹಿಯಾಗಿದ್ದು, ಪ್ರೀಮಿಯಂ ಫೀಚರ್‌ಗಳನ್ನು ಹೊಂದಿದೆ. ಇದರ ಮೌಲ್ಯ ಅಂದಾಜು 17 ಲಕ್ಷದಿಂದ 20 ಲಕ್ಷ ರೂಪಾಯಿ ಎಂದು ಹೇಳಲಾಗುತ್ತಿದೆ. ತಮ್ಮ ಕುಟುಂಬದೊಂದಿಗೆ ಶೋರೂಮ್‌ಗೆ ತೆರಳಿ ಪೂಜೆ ಸಲ್ಲಿಸಿ ಹೊಸ ವಾಹನವನ್ನು ಬರಮಾಡಿಕೊಂಡಿದ್ದಾರೆ. ಅಭಿಮಾನಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

View this post on Instagram

A post shared by Mokshitha Pai (@mokshitha22)

ಮಹೀಂದ್ರಾ ಕಂಪನಿಯ ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿ ಇದಾಗಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 456 ಕಿ.ಮೀ ವರೆಗೆ ಚಲಿಸುವ ಸಾಮರ್ಥ್ಯ ಹೊಂದಿದೆ. ಇದು ಕೇವಲ 8.3 ಸೆಕೆಂಡುಗಳಲ್ಲಿ 0 ಇಂದ 100 ಕಿ.ಮೀ ವೇಗವನ್ನು ತಲುಪಬಲ್ಲದು. ಆಟೋಮ್ಯಾಟಿಕ್ ಕಾರು ಮಾತ್ರ ಇದರಲ್ಲಿ ಲಭ್ಯವಿದೆ.

ಮೋಕ್ಷಿತಾ ಹಿನ್ನೆಲೆ

‘ಪಾರು’ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಮೋಕ್ಷಿತಾ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ ದೊಡ್ಡ ಮಟ್ಟದ ಬ್ರೇಕ್ ನೀಡಿತು. ಅವರ ನೇರ ನಡೆ-ನುಡಿ ಮತ್ತು ಆಟದ ವೈಖರಿ ಜನರಿಗೆ ಇಷ್ಟವಾಗಿತ್ತು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಅವರಿಗೆ ಅವಕಾಶಗಳು ಮತ್ತು ಜನಪ್ರಿಯತೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಜಗದ್ಧಾತ್ರಿ ಧಾರಾವಾಹಿ ಮೇಲೆ ನಿರೀಕ್ಷೆ

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಧಾರಾವಾಹಿಯಲ್ಲಿ ಮೋಕ್ಷಿತಾ ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದ್ದು, ಮೋಕ್ಷಿತಾ ಮುಖ ಎಲ್ಲಿಯೂ ರಿವೀಲ್ ಆಗಿಲ್ಲ. ಧಾರಾವಾಹಿ ಪ್ರಸಾರ ಆಗುವುದಕ್ಕೂ ಮೊದಲೇ ಮೋಕ್ಷಿತಾ ಅವರು ಹೊಸ ಕಾರು ಖರೀದಿಸಿರುವುದು ಅವರ ವೃತ್ತಿಜೀವನದ ಪಾಸಿಟಿವ್ ಬೆಳವಣಿಗೆಯನ್ನು ಸೂಚಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Sat, 9 May 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More