AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಫಿ ಗೆದ್ದ ಬಳಿಕ ಸಲ್ಮಾನ್ ಖಾನ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮುನಾವರ್

Munawar Faruqui: ಬಿಗ್ ಬಾಸ್ ಮನೆಯಲ್ಲಿ ಕ್ಲಾಸ್ ತೆಗೆದುಕೊಳ್ಳುವಾಗ ಮುನಾವರ್​ಗೆ ಸಲ್ಮಾನ್ ಖಾನ್ ಸರಿಯಾಗಿ ಹೇಳಿದ್ದರು. ಇದನ್ನು ಮುನಾವರ್ ಮರೆತು ಮುಂದೆ ಸಾಗಿದ್ದಾರೆ. ಹೀಗಾಗಿ, ಸಲ್ಮಾನ್ ಬಗ್ಗೆ ಮುನಾವರ್ ಅವರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ.

ಟ್ರೋಫಿ ಗೆದ್ದ ಬಳಿಕ ಸಲ್ಮಾನ್ ಖಾನ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮುನಾವರ್
ಸಲ್ಮಾನ್-ಮುನಾವರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jan 29, 2024 | 12:08 PM

Share

‘ಬಿಗ್ ಬಾಸ್ ಹಿಂದಿ ಸೀಸನ್ 17’ ಭಾನುವಾರ (ಜನವರಿ 28) ಪೂರ್ಣಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಶೋನ ನಡೆಸಿಕೊಟ್ಟಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ವೀಕ್ಷಕರನ್ನು ಕಾರ್ಯಕ್ರಮ ರಂಜಿಸಿದೆ. ಈ ಬಾರಿ ಯಾರು ಟ್ರೋಫಿ ಎತ್ತಿ ಹಿಡಿಯುತ್ತಾರೆ ಎಂಬ ಕುತೂಹಲ ಮೂಡಿತ್ತು. 107 ದಿನಗಳ ಬಳಿಕ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸ್ಟ್ಯಾಂಡಪ್​ ಕಾಮಿಡಿಯನ್ ಮುನಾವರ್ ಫಾರುಕಿ ಅವರು ಕಪ್ ಎತ್ತಿ ಹಿಡಿದಿದ್ದಾರೆ. ಇದೀಗ ಕಾರ್ಯಕ್ರಮದಿಂದ ಹೊರಬಂದ ನಂತರ ಬಿಗ್ ಬಾಸ್ ವಿನ್ನರ್ ಮುನಾವರ್ ಫಾರುಕಿ ತಮ್ಮ ಮೊದಲ ಪೋಸ್ಟ್ ಹಾಕಿದ್ದಾರೆ. ಅವರು ತುಂಬಾ ಸಂತೋಷದಿಂದ ನಿರೂಪಕ ಸಲ್ಮಾನ್ ಖಾನ್ ಬಗ್ಗೆಯೂ ಮಾತನಾಡಿದ್ದಾರೆ.

ಈ ಮೊದಲು ಸ್ಟ್ಯಾಂಡ್​​ಅಪ್ ಕಾಮಿಡಿ ಮಾಡುವಾಗ ಸಲ್ಮಾನ್ ಖಾನ್ ಬಗ್ಗೆ ಹಾಸ್ಯ ಮಾಡಿದ್ದರು ಮುನಾವರ್. ಇದನ್ನು ಸಲ್ಮಾನ್ ಖಾನ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದರು. ಬಿಗ್ ಬಾಸ್ ಮನೆಯಲ್ಲಿ ಕ್ಲಾಸ್ ತೆಗೆದುಕೊಳ್ಳುವಾಗ ಮುನಾವರ್​ಗೆ ಸಲ್ಮಾನ್ ಖಾನ್ ಸರಿಯಾಗಿ ಹೇಳಿದ್ದರು. ಇದನ್ನು ಮುನಾವರ್ ಮರೆತು ಮುಂದೆ ಸಾಗಿದ್ದಾರೆ. ಹೀಗಾಗಿ, ಸಲ್ಮಾನ್ ಬಗ್ಗೆ ಮುನಾವರ್ ಅವರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ.

ಬಿಗ್ ಬಾಸ್ ಶೋ ಮುಗಿದ ನಂತರ ಮುನಾವರ್ ಫಾರುಕಿ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರಿಗೆ ಸಲ್ಮಾನ್ ಖಾನ್ ಟ್ರೋಫಿ ನೀಡುತ್ತಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮುಖದಲ್ಲೂ ಸಂತಸ ಎದ್ದು ಕಾಣುತ್ತಿದೆ. ಮುನಾವರ್ ಟ್ರೋಫಿಯನ್ನು ಸ್ವೀಕರಿಸಿದ ನಂತರ ಖುಷಿಯಾಗಿದ್ದಾರೆ. ಸಲ್ಮಾನ್ ಖಾನ್ ಅವರ ಅಭಿಮಾನಿ ಮುನಾವರ್. ಸಲ್ಲು ಕೈಯಿಂದ ಈ ಟ್ರೋಫಿಯನ್ನು ಸ್ವೀಕರಿಸಿ ಮುನಾವರ್ ಖುಷಿಪಟ್ಟಿದ್ದಾರೆ.

‘ಜನರೇ, ನಿಮ್ಮ ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. ಅಂತಿಮವಾಗಿ ಟ್ರೋಫಿ ಡೋಂಗ್ರಿ ತಲುಪಿದೆ. ದೊಡ್ಡಣ್ಣ ಸಲ್ಮಾನ್ ಖಾನ್ ಅವರ ಮಾರ್ಗದರ್ಶನಕ್ಕಾಗಿ ಅವರಿಗೆ ಅಭಿನಂದನೆಗಳು. ಮುನಾವರ್ ಅಭಿಮಾನಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ. ಮುನಾವರ್ ಇನ್ನೂ ಚಿತ್ರರಂಗದ ಭಾಗವಾಗಿಲ್ಲ. ಆಗಲೇ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 11 ಮಿಲಿಯನ್‌ಗಿಂತಲೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಬಿಗ್ ಬಾಸ್ ಗೆದ್ದ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಿದೆ.

ಇದನ್ನೂ ಓದಿ: ಹಿಂದಿ ಬಿಗ್ ಬಾಸ್ ವಿನ್ ಆದ ಮುನಾವರ್; ಸಲ್ಮಾನ್ ಖಾನ್​ನ ಟ್ರೋಲ್ ಮಾಡಿಯೂ ಗೆದ್ದ ಕಾಮಿಡಿಯನ್

ಮುನಾವರ್ ಫಾರುಕಿ ಅವರು ಟ್ರೋಫಿಯೊಂದಿಗೆ 50 ಲಕ್ಷ ರೂಪಾಯಿಗಳನ್ನು ಪಡೆದರು. ಇದಲ್ಲದೇ ಹೊಸ ಹುಂಡೈ ಕ್ರೆಟಾ ಕಾರನ್ನೂ ಪಡೆದುಕೊಂಡಿದ್ದಾರೆ. ಅವರು ಶೋನ ಅತ್ಯಂತ ದುಬಾರಿ ಸ್ಪರ್ಧಿಯೂ ಆಗಿದ್ದರು. ಅವರು ಒಂದು ವಾರಕ್ಕೆ 8 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅವರು ಸುಮಾರು 15 ವಾರಗಳ ಕಾಲ ಕಾರ್ಯಕ್ರಮದ ಭಾಗವಾಗಿದ್ದರು. ಇದಕ್ಕಾಗಿ ಸುಮಾರು 1 ಕೋಟಿ 20 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಈ ಬಾರಿ ಹಿಂದಿ ಬಿಗ್ ಬಸ್ ಕಲರ್ಸ್ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:07 pm, Mon, 29 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ