ಇನ್​ಸ್ಟಾಗ್ರಾಮ್​ನಲ್ಲಿ ನಮ್ರತಾನ ಅನ್​ಫಾಲೋ ಮಾಡಿದ ಸ್ನೇಹಿತ್; ಜೋರಾಯ್ತು ಚರ್ಚೆ

ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸ್ನೇಹಿತ್ ಅವರು ನಮ್ರತಾನ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಈಗ ಅವರನ್ನು ಅನ್​ಫಾಲೋ ಮಾಡಿದ್ದಾರೆ. ನಮ್ರತಾ ಕೂಡ ಸ್ನೇಹಿತ್​ನ ಫಾಲೋ ಮಾಡುತ್ತಿಲ್ಲ.

ಇನ್​ಸ್ಟಾಗ್ರಾಮ್​ನಲ್ಲಿ ನಮ್ರತಾನ ಅನ್​ಫಾಲೋ ಮಾಡಿದ ಸ್ನೇಹಿತ್; ಜೋರಾಯ್ತು ಚರ್ಚೆ
ಸ್ನೇಹಿತ್-ನಮ್ರತಾ
Follow us
ರಾಜೇಶ್ ದುಗ್ಗುಮನೆ
|

Updated on: Jan 05, 2024 | 7:05 AM

ಬಿಗ್ ಬಾಸ್ ಮನೆಯಲ್ಲಿ ನಮ್ರತಾ (Namratha Gowda) ಹಾಗೂ ಸ್ನೇಹಿತ್ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಕೆಲವು ವಾರಗಳ ಹಿಂದೆ ಸ್ನೇಹಿತ್ ಎಲಿಮಿನೇಟ್ ಆದರು. ಈ ವೇಳೆ ನಮ್ರತಾ ಹಾಗೂ ಸ್ನೇಹಿತ್ ಇಬ್ಬರೂ ಕಣ್ಣೀರು ಹಾಕಿದ್ದರು. ಈಗ ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಹಾಗೂ ಕಾರ್ತಿಕ್ ಕ್ಲೋಸ್ ಆಗಿದ್ದಾರೆ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಒಂದು ನಡೆಯುತ್ತಿದೆ. ಸ್ನೇಹಿತ್ ಗೌಡ ಅವರು ಇನ್​ಸ್ಟಾಗ್ರಾಂನಲ್ಲಿ ನಮ್ರತಾ ಅವರನ್ನು ಅನ್​ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಮನೆ ಒಳಗೆ ಹೋಗುವುದಕ್ಕೂ ಮೊದಲು ಸೋಶಿಯಲ್ ಮೀಡಿಯಾ ಖಾತೆ ನಿರ್ವಹಣೆ ಜವಾಬ್ದಾರಿಯನ್ನು ಸ್ಪರ್ಧಿಗಳು ಬೇರೆಯವರಿಗೆ ವಹಿಸಿ ಹೋಗುತ್ತಾರೆ. ನಮ್ರತಾ ಕೂಡ ಹಾಗೆಯೇ ಮಾಡಿದ್ದಾರೆ. ಸ್ನೇಹಿತ್ ಕೂಡ ಇದೇ ರೀತಿ ಮಾಡಿದ್ದರು ಎನ್ನಲಾಗಿದೆ. ಈಗ ಸ್ನೇಹಿತ್ ಗೌಡ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದು, ಇನ್​ಸ್ಟಾಗ್ರಾಮ್ ಖಾತೆಯನ್ನು ತಾವೇ ಹ್ಯಾಂಡಲ್ ಮಾಡುತ್ತಿದ್ದಾರೆ.

ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸ್ನೇಹಿತ್ ಅವರು ನಮ್ರತಾನ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಈಗ ಅವರನ್ನು ಅನ್​ಫಾಲೋ ಮಾಡಿದ್ದಾರೆ. ನಮ್ರತಾ ಕೂಡ ಸ್ನೇಹಿತ್​ನ ಫಾಲೋ ಮಾಡುತ್ತಿಲ್ಲ. ಈ ಬೆಳವಣಿಗೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಿಗ್ ಬಾಸ್ ಮನೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಚಾರಗಳೇ ಇದಕ್ಕೆ ಕಾರಣವೇ ಎನ್ನುವ ಪ್ರಶ್ನೆ ಮೂಡಿದೆ.

ನಮ್ರತಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಸ್ವತಂತ್ರವಾಗಿ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ಇನ್ನು, ಕಾರ್ತಿಕ್ ಅವರು ಸಮಯ ಸಿಕ್ಕಾಗ ನಮ್ರತಾ ಜೊತೆ ಫ್ಲರ್ಟ್ ಮಾಡುತ್ತಾರೆ. ಗುರುವಾರದ (ಜನವರಿ 4) ಎಪಿಸೋಡ್​ನಲ್ಲಿ ನಮ್ರತಾ ಅವರು ಕಾರ್ತಿಕ್​ಗೆ ‘ಐ ಲೈಕ್ ಯೂ’ ಎಂದಿದ್ದಾರೆ. ಈ ಎಪಿಸೋಡ್ ಗಮನ ಸೆಳೆದಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪುರುಷ-ಮಹಿಳೆ ಅನ್ನೋ ತಾರತಮ್ಯ? ವಿನಯ್ ವಿರುದ್ಧ ಸಿಡಿದೆದ್ದ ಸಂಗೀತಾ ಶೃಂಗೇರಿ

ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ. ಈ ವಾರ ಸಂಗೀತಾ ಕ್ಯಾಪ್ಟನ್ ಆಗಿದ್ದಾರೆ. ಮೈಕಲ್ ಕಳಪೆ ಪಡೆದರೆ, ಕಾರ್ತಿಕ್ ಉತ್ತಮ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್